
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣಾ ಕಣದಲ್ಲಿ ಸೋಮವಾರದಿಂದ ಜೆಡಿಎಸ್ (JDS) ಅಭ್ಯರ್ಥಿಗಳ ಪರವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ (B. Mune Gowda) ಅವರು ಮತಯಾಚನೆಗೆ ಚಾಲನೆ ನೀಡಿದ್ದಾರೆ.
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ 10 ವಾರ್ಡ್‌ಗಳಿಂದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿರುವ ಜೆಡಿಎಸ್ ಅಭ್ಯರ್ಥಿಗಳ ಪರ ಇಂದು ನಾಗದೇನಹಳ್ಳಿಯಲ್ಲಿ ಮುಖಂಡರೊಂದಿಗೆ ಬಿ.ಮುನೇಗೌಡ ಅವರು ಪ್ರಚಾರ ಆರಂಭಿಸಿದರು..
ಮತದಾರರ ಮನೆಗಳಿಗೆ ಹಾಗೂ ಮುಖಂಡರನ್ನು ಭೇಟಿ ಮಾಡಿ ಜೆಡಿಎಸ್ ಎಲ್ಲಾ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಹಕಾರ ನೀಡುವಂತೆ ಮನವಿ ಮಾಡಲಾಗುತ್ತಿದೆ.
ಕೈಗಾರಿಕೆಗಳ ಸ್ಥಾಪನೆಯಿಂದಾಗಿ ಬೆಳೆಯುತ್ತಿರುವ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಭಿವೃದ್ಧಿಯನ್ನು ಸಮಗ್ರವಾಗಿ ನೋಡಬೇಕಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಅಭಿವೃದ್ಧಿಗೆ ಸಹಕಾರ ನೀಡಬೇಕಿದೆ ಎಂದರು.
ಈ ವೇಳೆ ಮುಖಂಡರಾದ ತಾಲೂಕು ಅಧ್ಯಕ್ಷ ಲಕ್ಷ್ಮೀಪತಯ್ಯ, ನಗರ ಅಧ್ಯಕ್ಷ ವಡ್ಡರಹಳ್ಳಿ ರವಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ದೇವರಾಜಮ್ಮ, ತಾಲೂಕು ಅಧ್ಯಕ್ಷೆ ಶಾಂತಮ್ಮ, ವಕ್ತಾರ ಕುಂಟನಹಳ್ಳಿ ಮಂಜುನಾಥ್, ತೆಂಗುನಾರು ಮಂಡಳಿ ಅಧ್ಯಕ್ಷ ಗಂಟಿಗಾನಹಳ್ಳಿ ಬಾಬು, ಟಿಎಪಿಎಂಸಿ ನಿರ್ದೇಶಕರಾದ ಪುರುಷೋತ್ತಮ, ಆನಂದ್ ಮತ್ತಿತರರಿದ್ದರು.