Protest demanding implementation of the Protection of Journalists Act and fulfillment of 12 demands

ಪತ್ರಕರ್ತರ ಹಿತರಕ್ಷಣಾ ಕಾಯ್ದೆ ಜಾರಿ ಸೇರಿ 12 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ

ಬೆಳಗಾವಿ: ಪತ್ರಕರ್ತರ (Journalists) ಹಿತರಕ್ಷಣಾ ಕಾಯ್ದೆ ಜಾರಿ ಸೇರಿದಂತೆ ಪ್ರಮುಖ 12 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ನೇತೃತ್ವದಲ್ಲಿ ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರಿಗೆ ಪ್ರತಿಭಟನೆ ನಡೆಸಲಾಯಿತು.

ಈ ಪ್ರತಿಭಟನೆಯಲ್ಲಿ ರಾಜ್ಯ ಕಾರ್ಯದರ್ಶಿ ದೇವರಾಜ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸಿದ್ದರಾಜು ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಜನಪರ ಮಂಜು, ಉಪಾಧ್ಯಕ್ಷ ಡಿ.ಚಿ.ಚೌಡರಾಜ್ ಸೇರಿದಂತೆ ಸುಮಾರು 50ಕ್ಕೂ ಹಾಗು ಹೆಚ್ಚು ಪದಾಧಿಕಾರಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಭಾಗವಹಿಸಿದ್ದರು.

ಪತ್ರಕರ್ತರ ಹಿತರಕ್ಷಣಾ ಕಾಯ್ದೆ ಜಾರಿ ಸೇರಿ 12 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ

ಪ್ರತಿಭಟನಾ ಸ್ಥಳಕ್ಕೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಹೆಚ್.ಹೆಚ್.ಮುನಿಯಪ್ಪ ಧಾವಿಸಿ ಪತ್ರಕರ್ತರ ಬೇಡಿಕೆ ಆಲಿಸಿದರು.

ಈ ವೇಳೆ ಮಾತನಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ, ರಾಜ್ಯದ 16 ಸಾವಿರ ಪತ್ರಕರ್ತರಿಗೆ ಸರ್ಕಾರ ಉಚಿತವಾಗಿ ಸಂಚರಿಸುವುದಕ್ಕೆ ಬಸ್ ಪಾಸ್ ನೀಡಲು ನಡೆಸಿದ ಹೋರಾಟದ ಫಲವಾಗಿ ವಾರ್ತಾ ಇಲಾಖೆ ಕಠಿಣ ನಿಯಮಗಳನ್ನು ರೂಪಿಸಿದ್ದು, ತಾಲ್ಲೂಕು ಮಟ್ಟದ ಯಾವೊಬ್ಬ ಪತ್ರಕರ್ತರಿಗೂ ಬಸ್ ಪಾಸ್ ದೊರೆಯುವುದು ಗಗನ ಕುಸುಮವಾಗಿದೆ.

ಈ ನಿಟ್ಟಿನಲ್ಲಿ ಬಸ್ ಪಾಸ್‌ಗೆ ವಿಧಿಸಿರುವ ಕಠಿಣ ಷರತ್ತುಗಳನ್ನು ಸಡಿಲಿಸಬೇಕು.

ಪಿಆರ್.ಜಿ.ಐ ಹಾಗೂ ಆರ್.ಎನ್.ಐ. ಹೊಂದಿರುವ ಪತ್ರಕರ್ತರಿಗೆ ವಿಕಾಸಸೌಧ, ವಿಧಾನಸೌಧಕ್ಕೆ ಪ್ರವೇಶಿಸಲು ಮುಕ್ತ ಅವಕಾಶ ನೀಡಬೇಕು, ಜಿಲ್ಲಾ ವ್ಯಾಪ್ತಿಯಲ್ಲಿರುವ ಪತ್ರಿಕಾ ಭವನಗಳನ್ನು ಯಾವೊಂದು ಪತ್ರಿಕಾ ಸಂಘಟನೆಗಳಿಗೆ ನೀಡದೇ ಆಯಾ ಜಿಲ್ಲಾಧಿಕಾರಿಗಳ ಸುಪರ್ದಿಯಲ್ಲಿ ವಾರ್ತಾ ಇಲಾಖೆಯ ಅಧಿಕಾರಿಗಳ ಮೂಲಕ ನಿರ್ವಹಣೆಗೆ ಆದೇಶಿಸಬೇಕು.

ವಾರ್ತಾ ಇಲಾಖೆಯಲ್ಲಿ ಖಾಲಿ ಇರುವ 300ಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡಬೇಕು.

ಪತ್ರಕರ್ತರಿಗೆ ಜೀವ ವಿಮೆ ಸೌಲಭ್ಯ ಸರ್ಕಾರ ಒದಗಿಸಬೇಕು.

ಕೆಲವು ಪೊಲೀಸರಿಂದ ಪತ್ರಕರ್ತರ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ತಡೆಯಬೇಕು.

ಪತ್ರಕರ್ತರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು.

ಪತ್ರಕರ್ತರು ಕರ್ತವ್ಯದ ಸಮಯದಲ್ಲಿ ಅಪಘಾತ,ಸಹಜವಾಗಿ ಮೃತಪಟ್ಟರೆ ಅವರ ಅವಲಂಬಿತರಿಗೆ 10ಲಕ್ಷ ರೂ.ಪರಿಹಾರ ನೀಡಬೇಕು.

ವಾರ, ಪಾಕ್ಷಿಕ, ಮಾಸ ಹಾಗೂ ಇನ್ನೀತರ ಪತ್ರಿಕೆಗಳ ಪ್ರತಿನಿಧಿಗಳು ಮಾಶಾಸನ ಪಡೆಯಲು ಅರ್ಹತೆ ಹೊಂದಿರುವುದಿಲ್ಲವೆಂದು ವಾರ್ತಾ ಇಲಾಖೆ ಹೊರಡಿಸಿರುವ ಅವೈಜ್ಞಾನಿಕ ನಿಬಂಧನೆ ಕೈ ಬಿಡಬೇಕು.

ಪತ್ರಕರ್ತರಿಗೆ ಉಚಿತ ಟೋಲ್ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಪತ್ರ ನೀಡಿದರು.

ಮನವಿ ಸ್ವೀಕರಿಸಿ ಮಾತನಾಡಿ ಸಚಿವ ಕೆ.ಹೆಚ್. ಮುನಿಯಪ್ಪ ಅವರು, ನಾನು ಸರ್ಕಾರದ ಪರವಾಗಿ ಆಗಮಿಸಿದ್ದು ತಮ್ಮ ಮನವಿ ಪತ್ರಗಳನ್ನು ಮುಖ್ಯಮಂತ್ರಿಗಳು ಹಾಗೂ ಸಂಭಂದಿಸಿದ ಸಚಿವರು ಗಳಿಗೆ ಮಾತನಾಡಿ ತಮ್ಮ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ ಎಂದು ಭರವಸೆ ನೀಡಿದರು.

ರಾಜಕೀಯ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

“ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು

[ccc_my_favorite_select_button post_id="119228"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸಾವರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ (Accident) ತಾಲೂಕಿನ ಮಾಕಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ.

[ccc_my_favorite_select_button post_id="119217"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!