Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರಿಂದು ಹಳೆಯ ಸಾಲಗಳಿಂದ ಮುಕ್ತರಾಗುವ ಸಾಧ್ಯತೆ

Astrology: ಮಂಗಳವಾರ, ಡಿಸೆಂಬರ್ 16, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ಹೆಚ್ಚು ಪ್ರಭಾವಿ ವ್ಯಕ್ತಿಗಳ ಬೆಂಬಲವು ನಿಮ್ಮ ನೈತಿಕತೆಗೆ ದೊಡ್ಡ ಉತ್ತೇಜನವನ್ನು ನೀಡುತ್ತದೆ. ಅನುಭವಿ ಯೊಂದಿಗೆ ಚರ್ಚಿಸುವ ಮೂಲಕ ಹೂಡಿಕೆ ಮಾಡಿದರೆ ನೀವು ಉತ್ತಮ ಹಣವನ್ನು ಗಳಿಸುವಿರಿ. ಸ್ವಂತ ಕೆಲಸವನ್ನು ಆರಂಭಿಸಲು ಚಿಂತಿಸಿ. ಇದು ನಿಮಗೆ ಉತ್ತಮ ಲಾಭವನ್ನು ತಂದು ಕೊಡುತ್ತದೆ. ಆದರೆ ಇದರಲ್ಲಿ ನಿಮ್ಮ ಶ್ರಮ ಮತ್ತು ಶ್ರದ್ಧೆ ಮುಖ್ಯವಾಗಿರುತ್ತದೆ.(ಭಕ್ತಿಯಿಂದ ಶ್ರೀ ಉಮಾಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ

ಯಾವುದಾದರು ಕ್ರೀಡೆ ಯಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಿ. ಶ್ರಮವಹಿಸಿ ಕೆಲಸ ಮಾಡುವುದ ರಿಂದ ಘನತೆ ಗೌರವ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ. ಹಣ ಮತ್ತು ಸಂಪತ್ತು ಸಂಬಂಧಗಳಷ್ಟು ದೊಡ್ಡದಲ್ಲ ಎಂದು ಅರ್ಥ ಮಾಡಿಕೊಳ್ಳಿ.(ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ

ನಿಮ್ಮ ನಿಜವಾದ ಸಾಮಾರ್ಥ್ಯಗಳನ್ನು ಅರಿತುಕೊಳ್ಳಿ. ಏಕೆಂದರೆ ನಿಮಗೆ ಶಕ್ತಿಯ ಕೊರತೆಯಿಲ್ಲ. ಆದರೆ ನಿಮ್ಮ ಶಕ್ತಿಯನ್ನು ನಿಮ್ಮ ಸುತ್ತಲು ಜನ ಅನುಮಾನಿಸುತ್ತಾರೆ. ನಿಮ್ಮ ಶಕ್ತಿ ಸಾಮರ್ಥ್ಯವನ್ನು ಅರ್ಥ ಮಾಡಿಸುವುದು ಉತ್ತಮ. (ಭಕ್ತಿಯಿಂದ ಶ್ರೀ ಮೃತ್ಯುಂಜಯ ರುದ್ರ ದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ

ವಿವಿಧ ಮೂಲಗಳಿಂದ ಲಾಭದಾಯಕ ಯೋಗವಿದೆ. ಕೆಲಸದಲ್ಲಿ ಶತ್ರುಗಳು ಹೆಚ್ಚಾಗಬಹುದು. ಇತರರಿಗೆ ಮನವರಿಕೆ ಮಾಡುವ ನಿಮ್ಮ ಕೌಶಲ್ಯ ಗುಣ ಉತ್ತಮ ಲಾಭಾಂಶವನ್ನು ನೀಡುತ್ತದೆ. (ಭಕ್ತಿಯಿಂದ ಶ್ರೀ ಅರ್ಧ ನಾರೀಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ

ಹಣ ಹೂಡಿಕೆ ಮತ್ತು ಉಳಿತಾಯದ ಬಗ್ಗೆ ಇಂದು ನಿಮ್ಮ ಕುಟುಂಬದ ಸದಸ್ಯರ ಸಲಹೆ ಪಡೆಯುವುದು ಉತ್ತಮ. ಅವರ ಸಲಹೆಯು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಕೆಲವು ಜನರು ತಮ್ಮ ಸಾಮರ್ಥ್ಯಕ್ಕಿಂತ ಹೆಚ್ಚಿನ ಆಸೆಯನ್ನು ಹೊಂದಿರುತ್ತಾರೆ.(ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ

ನಿಮ್ಮ ಆತ್ಮವಿಶ್ವಾಸದಿಂದ ಸುತ್ತಮುತ್ತಲಿನ ಜನರನ್ನು ಮೆಚ್ಚಿಸುವ ಸಾಧ್ಯತೆಯಿದೆ. ಪೋಷಕರ ಮುಂದೆ ಗುಪ್ತ ವಿಚಾರಗಳನ್ನು ಬಹಿರಂಗ ಪಡಿಸಲು ಇದು ಸರಿಯಾದ ಸಮಯ. ಯಾವುದೇ ಕೆಲಸ ಕೈಗೊಂಡರೂ ಅದನ್ನು ಸಾಧಿಸಲು ಶ್ರಮಿಸುವಿರಿ. (ಭಕ್ತಿಯಿಂದ ಶ್ರೀ ಸೋಮೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ

ನಿಮಗೆ ಹಣದ ಅವಶ್ಯಕತೆ ಇರುವಾಗ ಹಣದ ಬೆಲೆ ನಿಮಗೆ ತಿಳಿಯಲಿದೆ. ಇದರಿಂದ ಯಾವುದೇ ಪ್ರಯೋಜನ ವಾಗುವುದಿಲ್ಲ. ಹಣ ಖರ್ಚು ಮಾಡುವ ಮುನ್ನ ಯೋಚಿಸಿ. ನಿಮ್ಮ ಕುಟುಂಬದ ಸದಸ್ಯರು ನೀಡುವ ಸಲಹೆಯನ್ನು ಅನುಸರಿಸಿ. (ಭಕ್ತಿಯಿಂದ ಶ್ರೀ ಕಾಲಭೈರವೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ

ನಿಮ್ಮ ಆಕರ್ಷಕ ನಡವಳಿಕೆಯು ಇಂದು ಎಲ್ಲರ ಗಮನ ಸೆಳೆಯುತ್ತದೆ. ಇಲ್ಲಿಯವರೆಗೆ ಹೆಚ್ಚು ಯೋಚಿಸದೆ ಹಣವನ್ನು ಖರ್ಚು ಮಾಡುತ್ತಿದ್ದರೆ ಅದನ್ನು ತಪ್ಪಿಸಿ. ಜೀವನದಲ್ಲಿ ಅದರ ಮಹತ್ವವನ್ನು ಅರ್ಥ ಮಾಡಿಕೊಳ್ಳಿ. ಏಕೆಂದರೆ ತುರ್ತು ಅಗತ್ಯವಿದ್ದಾಗ ನಿಮಗೆ ಹಣದ ಮಹತ್ವ ಅರ್ಥವಾಗುತ್ತದೆ.(ಭಕ್ತಿಯಿಂದ ಶ್ರೀ ಕುಲದೇವರ ಪ್ರಾರ್ಥನೆ ಮಾಡಿ ಶುಭ ವಾಗುವುದು.)

ಧನಸ್ಸು ರಾಶಿ

ಸಾಮಾನ್ಯ ಜ್ಞಾನ ಮತ್ತು ತಿಳುವಳಿಕೆಯೊಂದಿಗೆ ನಿಮ್ಮ ನಿರಂತರ ಪ್ರಯತ್ನವು ನಿಮ್ಮ ಯಶಸ್ಸನ್ನು ಅಭಿವೃದ್ಧಿ ಪಡಿಸುತ್ತದೆ. ಇದಕ್ಕಾಗಿ ನಿಮ್ಮ ತಾಳ್ಮೆ ಮುಖ್ಯವಾಗುತ್ತದೆ. ಊಹಾಪೋಹ ಅಥವಾ ಅನಿರೀಕ್ಷಿತ ಲಾಭಗಳ ಮೂಲಕ ಹಣಕಾಸಿನ ಸ್ಥಿತಿ ಸುಧಾರಿಸುತ್ತದೆ.(ಭಕ್ತಿಯಿಂದ ಶ್ರೀ ಸೋಮೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ

ಕೆಲಸದಲ್ಲಿ ಶ್ರಮ ವಹಿಸಿ ಕೆಲಸ ಮಾಡುವುದು ನಿಮ್ಮನ್ನು ಕೊನೆವರೆಗೂ ಕೈ ಹಿಡಿಯುತ್ತದೆ. ನೀವು ಹಣಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಭಾಗಿಯಾಗಿದ್ದರೆ ನ್ಯಾಯಾಲಯವು ಇಂದು ನಿಮ್ಮ ಪರವಾಗಿ ನಿರ್ಧಾರ ಗಳನ್ನು ತೆಗೆದುಕೊಳ್ಳುತ್ತದೆ. ಇದು ನಿಮಗೆ ಆರ್ಥಿಕವಾಗಿ ಪ್ರಯೋಜನ ವನ್ನು ನೀಡುತ್ತದೆ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಕುಂಭ ರಾಶಿ

ಕೆಲಸದ ಕ್ಷೇತ್ರದಲ್ಲಿ ನೀವು ಉತ್ತಮ ಲಾಭವನ್ನು ಪಡೆಯಬಹುದು. ನೀವು ಮಾಡುವ ಯಾವುದೇ ಕೆಲಸವು ತಕ್ಷಣವೇ ಫಲಿತಾಂಶವನ್ನು ನೀಡುತ್ತದೆ. ನೀವು ಮಕ್ಕಳಿಗಾಗಿ ಯಾವುದೇ ಹೂಡಿಕೆ ಅಥವಾ ಆಸ್ತಿಯನ್ನು ತೆಗೆದುಕೊಳ್ಳ ಬಹುದು. (ಭಕ್ತಿಯಿಂದ ಮನೋ ನಿಯಾಮಕ ಶ್ರೀರುದ್ರ ದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ

ನೀವು ಅದೃಷ್ಟದ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಹೊಸ ಗುರಿಗಳನ್ನು ಹೊಂದಲು ಈ ದಿನವು ಮಂಗಳಕರ ವಾಗಿದೆ. ಈಗ ಆದಾಯ ಹೆಚ್ಚಿಸುವ ಪ್ರಯತ್ನಗಳು ಸಫಲವಾದಂತೆ ಕಾಣುತ್ತಿದೆ. ನೀವು ಹಳೆಯ ಸಾಲಗಳಿಂದ ಮುಕ್ತರಾಗುತ್ತೀರಿ. (ಭಕ್ತಿಯಿಂದ ಶ್ರೀ ಚಂದ್ರ ಮೌಳೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ದ್ವಾದಶಿ
ನಕ್ಷತ್ರ: ಸ್ವಾತಿ ನಕ್ಷತ್ರ.

ಈ ದಿನದ ವಿಶೇಷ: ಧನುರ್ಮಾಸದ ಇಂದಿನಿಂದ ಪ್ರಾರಂಭ.

ರಾಹುಕಾಲ: 03:00PM ರಿಂದ 04:30PM
ಗುಳಿಕಕಾಲ: 12:00PM ರಿಂದ 01:30PM
ಯಮಗಂಡಕಾಲ: 09:00AM ರಿಂದ 10:30AM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

“ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು

[ccc_my_favorite_select_button post_id="119228"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸಾವರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ (Accident) ತಾಲೂಕಿನ ಮಾಕಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ.

[ccc_my_favorite_select_button post_id="119217"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!