RCB stampede case; R. Ashoka demands resignation of CM, DCM

ಸದನಕ್ಕೆ ಸುಳ್ಳು ಮಾಹಿತಿ ನೀಡಿದ ಸಚಿವೆ, ಮಹಿಳೆಯರ ಕ್ಷಮೆ ಯಾಚಿಸಲಿ: ಆರ್.ಅಶೋಕ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸದನಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ. ಆದ್ದರಿಂದ ಸಚಿವರು 1.20 ಕೋಟಿ ಫಲಾನುಭವಿ ಮಹಿಳೆಯರ ಬಳಿ ಕ್ಷಮೆ ಯಾಚಿಸಬೇಕೆಂದು ಪ್ರತಿಪಕ್ಷ ನಾಯಕ ಆರ್.ಅಶೋಕ ( R. Ashoka) ಆಗ್ರಹಿಸಿದರು.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೃಹಲಕ್ಷ್ಮಿ ಯೋಜನೆ ಕುರಿತು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ. ಇದನ್ನು ಮುಖ್ಯಮಂತ್ರಿ ಕೂಡ ಒಪ್ಪಿಕೊಂಡಿದ್ದಾರೆ. ಈ ಯೋಜನೆ 1.20 ಕೋಟಿ ಜನರಿಗೆ ಸಂಬಂಧಿಸಿದೆ.

ಜನವರಿ, ಫೆಬ್ರವರಿ ತಿಂಗಳ ಸಹಾಯಧನ ನೀಡದೆ ಮೇ, ಜೂನ್, ಜುಲೈ ತಿಂಗಳ ಸಹಾಯಧನ ನೀಡಲು ಹೇಗೆ ಸಾಧ್ಯ? ಈ ತಿಂಗಳ ಸಹಾಯಧನ ನೀಡದೆ ಮುಂದಕ್ಕೆ ಹೋಗಲಾಗಿದೆ ಎಂದರೆ ಜನರಿಗೆ ಮೋಸ ಮಾಡಿದ್ದಾರೆ ಅಥವಾ ಖಜಾನೆ ಖಾಲಿಯಾಗಿದೆ ಎಂದೇ ಅರ್ಥ ಎಂದರು.

ಈ ಎರಡು ತಿಂಗಳ ಸಹಾಯಧನವನ್ನು ಏಕೆ ಸ್ಥಗಿತ ಮಾಡಲಾಗಿದೆ ಎಂದು ಸರ್ಕಾರ ಸದನಕ್ಕೆ ಮಾಹಿತಿ ನೀಡಬೇಕು. ಈ ಹಣವನ್ನು ಕಾಂಗ್ರೆಸ್ ಪಕ್ಷ ಬಳಸಿಕೊಂಡಿದೆಯೇ ಅಥವಾ ಸ್ವಂತಕ್ಕೆ ಸಚಿವರು ಬಳಸಿಕೊಂಡರಾ ಎಂಬ ಬಗ್ಗೆ ತಿಳಿಯಬೇಕಿದೆ. ಕೋಟ್ಯಂತರ ಮಹಿಳೆಯರು ಇದೇ ಹಣ ನಂಬಿರುತ್ತಾರೆ‌.

ಮನೆಗೆ ದಿನಸಿ, ಸಾಲ ಮರುಪಾವತಿಗೆ ಈ ಹಣ ಅವಲಂಬಿಸಿರುತ್ತಾರೆ. ಪ್ರತಿ ತಿಂಗಳು 2,480 ಕೋಟಿ ರೂ. ನೀಡಬೇಕು. ಅಂದರೆ ಎರಡು ತಿಂಗಳು 5,000 ಕೋಟಿ ರೂ. ನೀಡಬೇಕು. ಇಷ್ಟೊಂದು ಹಣ ಎಲ್ಲಿಗೆ ಹೋಗಿದೆ? ಎರಡು ತಿಂಗಳು ಬಿಟ್ಟು ನೇರವಾಗಿ ಮುಂದಕ್ಕೆ ಹೋಗಲು ಯಾವ ಕಾನೂನಿನಲ್ಲಿ ಅವಕಾಶವಿದೆ ಎಂದು ಪ್ರಶ್ನೆ ಮಾಡಿದರು.

ಈ ನಡುವೆ ಸಚಿವರು ಸದನಕ್ಕೆ ಬರುತ್ತಿಲ್ಲ. ಸದನಕ್ಕೆ ತಪ್ಪು ಮಾಹಿತಿ ನೀಡಿ ಅಗೌರವ ತೋರಲಾಗಿದೆ. ಶಾಸಕರು ಪ್ರಶ್ನೆ ಕೇಳಿದಾಗ ಸರಿಯಾದ ಉತ್ತರ ನಂತರ ನೀಡುತ್ತೇನೆ ಎಂದಿದ್ದರೆ ಸಾಕಿತ್ತು. ಆದರೆ ತಪ್ಪಾದ ಉತ್ತರ ನೀಡಬಾರದಿತ್ತು. ಈಗ ತಪ್ಪು ಮಾಹಿತಿ ನೀಡಿದ್ದಕ್ಕೆ ಸಚಿವರು ಮಹಿಳೆಯರ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು‌.

ನಂತರ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಮಾತಿಗೆ ಪ್ರತಿಕ್ರಿಯಿಸಿದ ಅವರು, ಯಾರಿಗಾದರೂ ಮನಸ್ಸಿಗೆ ನೋವಾಗಿದ್ದರೆ ಎಂಬ ಮಾತು ಬೇಕಿರಲಿಲ್ಲ. ಈ ಸುಳ್ಳಿನಿಂದ ಎಲ್ಲರ ಮನಸ್ಸಿಗೂ ನೋವಾಗಿದೆ. ಆದ್ದರಿಂದ ನೇರವಾಗಿ ಕ್ಷಮೆ ಕೇಳಬೇಕು. ಈ ರೀತಿ ತಪ್ಪಾದ ಮಾಹಿತಿ ನೀಡಿದ್ದು ಯಾವ ಅಧಿಕಾರಿ ಎಂಬುದನ್ನು ತಿಳಿಸಬೇಕು. ಎರಡು ತಿಂಗಳ ಸಹಾಯಧನ ಯಾವಾಗ ನೀಡಲಾಗುವುದು ಎಂದು ಹೇಳಬೇಕು ಎಂದು ಒತ್ತಾಯಿಸಿದರು.

ಆದರೆ ಈ ಬಗ್ಗೆ ಸಚಿವರು ಸ್ಪಷ್ಟೀಕರಣ ನೀಡದಿದ್ದಾಗ ಪ್ರತಿಪಕ್ಷದ ಎಲ್ಲ ಶಾಸಕರು ಸಭಾತ್ಯಾಗ ಮಾಡಿದರು‌.

ರಾಜಕೀಯ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

“ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು

[ccc_my_favorite_select_button post_id="119228"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸಾವರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ (Accident) ತಾಲೂಕಿನ ಮಾಕಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ.

[ccc_my_favorite_select_button post_id="119217"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!