Bashettihalli Election; Congress-JDS joint protest..! Do you know the reason..?

ಬಾಶೆಟ್ಟಿಹಳ್ಳಿ ಪ.ಪಂ ಚುನಾವಣೆ; ಕಾಂಗ್ರೆಸ್-ಜೆಡಿಎಸ್ ಜಂಟಿ ಪ್ರತಿಭಟನೆ..! ಕಾರಣ ಏನು ಗೊತ್ತಾ..?

ದೊಡ್ಡಬಳ್ಳಾಪುರ: ಡಿ. 21 ರಂದು ನಡೆಯಲಿರುವ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಗೆ (Bashettihalli Town Panchayat Election) ದಿನಗಣನೆ ಆರಂಭವಾಗಿದೆ.

ಆದರೆ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಈ ಚುನಾವಣೆಯಲ್ಲಿ ಸ್ವತಂತ್ರವಾಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ, ಬಿಜೆಪಿಗೆ ಸೆಡ್ಡು ಹೊಡೆದಿದೆ.

ಇದರ ಬೆನ್ನಲ್ಲೇ ಇಂದು ಕಾಂಗ್ರೆಸ್ ಜೊತೆ ಜೆಡಿಎಸ್ ಮುಖಂಡರು ದೊಡ್ಡಬಳ್ಳಾಪುರ ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಿ ಗಮನ ಸೆಳೆದಿದೆ.

ಇನ್ನೂ ಪ್ರತಿಭಟನೆಗೆ ಕಾರಣ ಏನು ಅಂತ ನೋಡುವುದಾದರೆ, ಡಿ.21ರಂದು ನಡೆಯಲಿರುವ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಬಳಸುವ ಇವಿಎಂ ಯಂತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಚಿನ್ಹೆಗಳನ್ನು ಚಿಕ್ಕದಾಗಿ ಮುದ್ರಿಸಿ, ಬಿಜೆಪಿ ಇತರೆ ಬೇರೆ ಪಕ್ಷದ ಚಿನ್ಹೆ ದೊಡ್ಡದಾಗಿ ಮುದ್ರಿಸಿದ್ದಾರೆ ಎಂಬ ಆರೋಪಕ್ಕೆ ಕಾರಣವಾಗಿದೆ.

ಈ ವಿಷಯ ತಿಳಿದ ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ, ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ವಿಶ್ವನಾಥ್ ರೆಡ್ಡಿ, ಅಪ್ಪಿವೆಂಕಟೇಶ್, ಆದಿತ್ಯ ನಾಗೇಶ್, ಲಾವಣ್ಯ ನಾಗರಾಜ್, ರಾಮಾಂಜಿನಪ್ಪ, ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಲಕ್ಷ್ಮೀಪತಯ್ಯ, ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ವಕ್ತಾರ ಕುಂಟನಹಳ್ಳಿ ಮಂಜುನಾಥ್, ಮುಖಂಡರಾದ ತೂಬಗೆರೆ ಹೋಬಳಿ ಅಧ್ಯಕ್ಷ ಜಗನ್ನಾಥ ಚಾರ್, ಬಾಶೆಟ್ಟಿಹಳ್ಳಿ ಜೆಡಿಎಸ್ ಅಭ್ಯರ್ಥಿಗಳಾದ ವಿಶ್ವನಾಥ್, ನಾಗರಾಜ್, ಮಧನ್, ಶ್ರೀನಿವಾಸ್, ಮುಖಂಡರಾದ ಸೋನು, ರಿಯಾಜ್, ಶ್ರೀನಿವಾಸ್, ಮುನೇಗೌಡ ಮತ್ತಿತರು ಪ್ರತಿಭಟನೆ ನಡೆಸಿದರು‌.

ಪ್ರತಿಭಟನಾ ಸ್ಥಳಕ್ಕೆ ಬಂದ ಚುನಾವಣೆ ಅಧಿಕಾರಿಗಳು ಮನವಿ ಪತ್ರ ಸ್ವೀಕರಿಸಿ, ಲೋಪವಾಗಿದ್ದರೆ ಸರಿಪಡಿಸಿ, ಚುನಾವಣೆ ಆಯೋಗದ ನಿಯಮದಂತೆ ಚಿನ್ಹೆ ಅಳವಡಿಸುವ ಭರವಸೆ ನೀಡಿದರು.

ರಾಜಕೀಯ

ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳ ಸಾರ್ವತ್ರಿಕ ಮುಷ್ಕರ: ದೊಡ್ಡಬಳ್ಳಾಪುರ ಬಂದ್‌ಗೆ ವರ್ತಕರ ಬೆಂಬಲ

ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳ ಸಾರ್ವತ್ರಿಕ ಮುಷ್ಕರ: ದೊಡ್ಡಬಳ್ಳಾಪುರ ಬಂದ್‌ಗೆ ವರ್ತಕರ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಹಿಂಪಡೆಯುವುದು ಸೇರಿದಂತೆ ಕಾರ್ಮಿಕ ವಿರೋಧಿ ಮಸೂದೆ ಗಳನ್ನು ರದ್ದುಪಡಿಸುವಂತೆ ಹಾಗೂ ಮನ್ರೇಗಾ ಮರು ಜಾರಿ, ಸಾರ್ವಜನಿಕ ಸೇವೆಗಳ ಖಾಸಗೀಕರಣ ರದ್ದತಿಗೆ ಒತ್ತಾಯಿಸಿ, ಕಾರ್ಮಿಕ ಸಂಘಟನೆಗಳ

[ccc_my_favorite_select_button post_id="119366"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!