
ಬೆಂಗಳೂರು: ಪಾರಿವಾಳಗಳಿಂದ (Pigeons) ಉಸಿರಾಟದ ತೊಂದರೆ ಮುಂತಾದ ಕಾಯಿಲೆ ಹರಡುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಆಹಾರ ನೀಡುವಿಕೆಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ನಿಷೇಧಿಸಿದೆ.
ಪಾರಿವಾಳಗಳಿಗೆ ಆಹಾರ ನೀಡಲು ಜಿಬಿಎ ನಿಗಧಿತ ಸ್ಥಳಗಳನ್ನು ಗುರುತಿಸಿದ್ದು, ನಿಗಧಿತ ಸಮಯದಲ್ಲಿ ಪಾರಿವಾಳಗಳಿಗೆ ಆಹಾರ ನೀಡಬೇಕಿದೆ.
ಈ ನಿಯಮವನ್ನು ಉಲ್ಲಂಘಿಸಿ ಆಹಾರ ನೀಡಿದರೆ ಭಾರತೀಯ ನ್ಯಾಯ ಸಂಹಿತ (ಬಿಎನ್ ಎಸ್) 200, 271 ಮತ್ತು 271ರಂತೆ ಪ್ರಕರಣ ದಾಖಲಿಸಿ, ದಂಡ ಹಾಕುವ ಜತೆಗೆ ಆರು ತಿಂಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ.
ಯಾವುದೇ ವ್ಯಕ್ತಿಯು ಸಾರ್ವಜನಿಕರಿಗೆ ತೊಂದರೆ ಅಥವಾ ಆರೋಗ್ಯಕ್ಕೆ ಅಪಾಯವನ್ನುಂಟು ಮಾಡುವ ಪ್ರದೇಶಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡಬಾರದು ಅಥವಾ ಆಹಾರ ನೀಡಲು ಪ್ರೇರೇಪಿಸಬಾರದು, ಪಾರಿವಾಳಗಳಿಗೆ ಆಹಾರವನ್ನು ನೀಡುವುದನ್ನು ಗೊತ್ತುಪಡಿಸಿದ ಪ್ರದೇಶಗಳಲ್ಲಿ ಮಾತ್ರ ಷರತ್ತುಗಳೊಂದಿಗೆ ಅನುಮತಿಸಲಾಗುತ್ತದೆ.
ನಿಗದಿಪಡಿಸಿದ ಪ್ರದೇಶಗಳ ನಿರ್ವಹಣೆ ಮತ್ತು ನಿರ್ದೇಶನಗಳ ಅನುಸರಣೆಯ ಜವಾಬ್ದಾರಿ ಕೆಲವು ಎನ್‌ಜಿಒ ವಹಿಸಿಕೊಳ್ಳಬೇಕು ಎಂದು ನಗರಾಭಿವೃದ್ಧಿ ಇಲಾಖೆ ಸೂಚಿಸಿದೆ.
ಫೋಟೋ ಕೃಪೆ: RayTranter