ನಾಲಿಗೆ ಹರಿಬಿಡುವ ಚಾಳಿ ಇದ್ದರೆ ಎಚ್ಚರ..!?

Hate Speech and Hate Crimes Bill passed..!

ಕೆ.ಎಂ.ಸಂತೋಷ್, ಆರೂಢಿ (ದೊಡ್ಡಬಳ್ಳಾಪುರ); ವಿರೋಧ ಪಕ್ಷಗಳ ವಿರೋಧದ ನಡುವೆಯೂ 2025ನೇ ಸಾಲಿನ ಕರ್ನಾಟಕ ದ್ವೇಷ ಭಾಷಣ (Hate Speech) ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕವು ಬೆಳಗಾವಿ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ.

ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರು ಈ ವಿಧೇಯಕವನ್ನು ಮಂಡಿಸಿದ್ದು, ವಿಧೇಯಕವನ್ನು ಪರ್ಯಾಲೋಚಿಸಿ ಅನುಮೋದನೆ ನೀಡುವಂತೆ ಕೋರಿದರು. ಈ ವಿಧೇಯಕವು ವಿಧಾನಸಬೆಯಲ್ಲಿ ಅಂಗೀಕಾರವಾಯಿತು.

ಈ ಕಾಯ್ದೆ ಅನ್ವಯ ವ್ಯಕ್ತಿ ವ್ಯಕ್ತಿಗಳ ಸಮೂಹ, ಸಂಸ್ಥೆಗಳ ವಿರುದ್ಧ ಸಮಾಜದಲ್ಲಿ ಅಸಾಮರಸ್ಯ ದ್ವೇಷವನ್ನುಂಟು ಮಾಡುವ ದ್ವೇಷಭಾಷಣದ ಪ್ರಸರಣೆ, ಪ್ರಕಟಣೆ ಅಥವಾ ಪ್ರಚಾರಕ್ಕೆ ಕಡಿವಾಣ ಬೀಳಲಿದೆ.

ಈ ರೀತಿಯ ಅಪರಾಧಗಳನ್ನು ತಡೆಗಟ್ಟಲು ಮತ್ತು ಪ್ರತಿಬಂಧಿಸಲು, ಅಂತಹ ಅಪರಾಧಗಳಿಗೆ ದಂಡನೆಯನ್ನು ಉಪಬಂದಿಸಲು ಹಾಗೂ ಹಾನಿಗೊಳಗಾದ ಸಂತ್ರಸ್ತರಿಗೆ ತಕ್ಕಷ್ಟು ಪರಿಹಾರವನ್ನು ಒದಗಿಸಲು ಈ ಶಾಸನವನ್ನು ಅಧಿನಿಯಮಿಸುವುದು ಅವಶ್ಯಕವೆಂದು ಪರಿಗಣಿಸಿ ಈ ವಿಧೇಯಕವನ್ನು ತರಲಾಗಿದೆ ಎಂಬುದು ಸರ್ಕಾರದ ಮಾತಾಗಿದೆ.

ವಿರೋಧ ಪಕ್ಷಗಳ ಕಳವಳ

ಆದರೆ ವಿರೋಧ ಪಕ್ಷಗಳು ಈ ಕಾಯ್ದೆಯಿಂದ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತದೆ. ವ್ಯಂಗ್ಯಚಿತ್ರಕಾರರು ಕೂಡ ಚಿತ್ರ ಬಳಸುವಂತಿಲ್ಲ. ಮಾಧ್ಯಮಗಳು ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಸುದ್ದಿ ಮಾಡಿದರೆ ಪತ್ರಕರ್ತರಿಗೆ ಜಾಮೀನು ಸಿಗುವುದಿಲ್ಲ.

ಪೊಲೀಸ್‌ ಇಲಾಖೆ ಸ್ವೇಚ್ಛಾಚಾರದಿಂದ ವರ್ತನೆ ಮಾಡಲು ಇದು ಅವಕಾಶ ಮಾಡಿಕೊಡುತ್ತದೆ. ತುರ್ತು ಪರಿಸ್ಥಿತಿ ತಂದವರಿಂದ ಹೆಚ್ಚೇನು ಅಪೇಕ್ಷಿಸಲು ಸಾಧ್ಯವಿಲ್ಲ.

ಪತ್ರಿಕಾ ಸ್ವಾತಂತ್ರ್ಯ ನಾಶವಾಗಿದೆ. ಇದು ಮತಬ್ಯಾಂಕ್‌ ರಾಜಕಾರಣಕ್ಕೆ ಬಳಕೆಯಾಗಲಿದೆ. ಯಾರನ್ನು ಬೇಕಾದರೂ ಜೈಲಿಗೆ ಹಾಕಬಹುದು ಅಥವಾ ಡಿಜಿಟಲ್‌ ಮಾಧ್ಯಮದಲ್ಲಿ ಬರುವ ವಿಷಯಗಳನ್ನು ಕೂಡಲೇ ಬ್ಲಾಕ್‌ ಮಾಡಬಹುದು. ಕಾನೂನು ಗಾಳಿಗೆ ತೂರಿರುವುದು ಮಸೂದೆಯಲ್ಲಿ ಕಂಡುಬಂದಿದೆ ಎಂದು ಆರೋಪಿಸಿವೆ.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]