DC A.B. Basavaraju instructs high school teachers to take action to increase SSLC exam results

SSLC ಪರೀಕ್ಷಾ ಫಲಿತಾಂಶ ಹೆಚ್ಚಿಸಲು ಕಾರ್ಯೋನ್ಮುಖರಾಗಿ: ಪ್ರೌಢಶಾಲೆ ಶಿಕ್ಷಕರಿಗೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಸೂಚನೆ

ಬೆಂ.ಗ್ರಾ.ಜಿಲ್ಲೆ: ಕಲಿಕೆಯಲ್ಲಿ ಹಿಂದುಳಿದಿರುವ ಮತ್ತು ನಿಧಾನಗತಿಯ ಕಲಿಕಾ ಮಕ್ಕಳಿಗೆ ಶಿಕ್ಷಕರು ಹೆಚ್ಚಿನ ಗಮನ ಹರಿಸುವ ಮೂಲಕ ಮುಂಬರುವ ಎಸ್‍ಎಸ್‍ಎಲ್‍ಸಿ (SSLC) ಫಲಿತಾಂಶ ಶೇ.100ರಷ್ಟು ತಲುಪಲು ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು (A.B. Basavaraju) ಅವರು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಆಯೋಜಿಸಲಾಗಿದ್ದ ಪ್ರೌಢ ಶಾಲಾ ಮುಖ್ಯ ಶಿಕ್ಷಕರ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎಸ್‍ಎಸ್‍ಎಲ್‍ಸಿ ಪರೀಕ್ಷಾ ನಿಯಮಾವಳಿ ಬದಲಾವಣೆಯಿಂದ ಈಗಾಗಲೇ ನೀಲನಕ್ಷೆ ಹಾಗೂ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆಯಿಂದ ಮಕ್ಕಳ ಉತ್ತೀರ್ಣಕ್ಕೆ ಸಹಾಯಕವಾಗಬಹುದು. ಎಲ್ಲ ವಿಷಯ ಶಿಕ್ಷಕರು ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಿ ಪರೀಕ್ಷಾ ಭಯ ಹೋಗಲಾಡಿಸಿ, ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ತರಲು ಶ್ರಮಿಸಬೇಕು ಎಂದು ಹೇಳಿದರು.

ಶಿಕ್ಷಕರ ಮಾರ್ಗದರ್ಶನ ಜೊತೆಗೆ ನೀವು ನೀಡುವ ಸ್ಪೂರ್ತಿದಾಯಕ ವಾತಾವರಣವು ಉನ್ನತ ಫಲಿತಾಂಶಕ್ಕೆ ಕಾರಣವಾಗುತ್ತದೆ. ಶಾಲೆ ಬಿಟ್ಟ ಮಕ್ಕಳನ್ನು ಗುರುತಿಸಿ ಅವರನ್ನು ಶಾಲೆಗೆ ಕರೆ ತನ್ನಿ ಹಾಗೂ ವಿದ್ಯಾರ್ಥಿಗಳ ಚಲನವಲನಗಳ ಮೇಲೆ ಗಮನವಿರಬೇಕು ಎಂದರು.

ಮಕ್ಕಳಿಗೆ ಹಣ ನೀಡಿದರೆ ಅವರ ಅವಶ್ಯಕತೆಗಳನ್ನು ಪೂರೈಸಿದರೆ ಯಶಸ್ವಿಯಾಗಲಾರರು. ಅವರ ಹಸಿವಿಗೆ ಅವರೇ ದುಡಿದು ತಿನ್ನುವಂತಹ ಸಾಮರ್ಥ್ಯ ಬೆಳೆಸಿಕೊಳ್ಳುವಂತೆ ಮಾಡಬೇಕು. ಶಾಲೆಯ ಅಸಾಧಾರಣ ಸಹಪಠ್ಯ ಚಟುವಟಿಕೆಗಳು ಶಿಸ್ತು ಕ್ರೀಡಾಶೀಲತೆ, ಮೌಲ್ಯಾಧಾರಿತ ಶಿಕ್ಷಣ ಮತ್ತು ಆತ್ಮವಿಶ್ವಾಸದ ಕಲಿಕೆಯೊಂದಿಗೆ ವಿಶೇಷ ಮಕ್ಕಳನ್ನು ಸುಧಾರಿಸುವ ಶಾಲೆಯ ಶಿಕ್ಷಕರ ವರ್ಗದ ಕಾರ್ಯ ಮೆಚ್ಚುವಂತದ್ದು ಎಂದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ಶಿಕ್ಷಕರಿಗೆ ವಿಶೇಷ ಉಪನ್ಯಾಸ ನೀಡಲಾಯಿತು.

ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಬೈಲಾಂಜಿನಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಲಲಿತಮ್ಮ, ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು.

ರಾಜಕೀಯ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿನ (Tamil Nadu) ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ‌ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು

[ccc_my_favorite_select_button post_id="120142"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!