Discussion for promotion of physical teachers to the post of co-teachers; Minister Madhu Bangarappa

ಗುಡ್ಮಾರ್ನಿಂಗ್ ನ್ಯೂಸ್: ಮುಂದಿನ ಶೈಕ್ಷಣಿಕ ವರ್ಷದೊಳಗೆ 11ಸಾವಿರ ಶಿಕ್ಷಕರ ನೇಮಕಾತಿ ಪೂರ್ಣ

ಬೆಳಗಾವಿ (ಸುವರ್ಣ ವಿಧಾನಸೌಧ); ಬರುವ ಶೈಕ್ಷಣಿಕ ವರ್ಷದೊಳಗೆ 11ಸಾವಿರ ಶಿಕ್ಷಕರ (Teachers) ನೇಮಕಾತಿ (Recruitment) ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ( S. Machu Bangarappa) ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬೆಳ್ತಂಗಡಿ ಶಾಸಕ ಹರೀಶ ಪೂಂಜ ಅವರು ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ನೇಮಕಾತಿ ಹಾಗೂ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ ಕುರಿತು ಮಾಹಿತಿಯನ್ನು ಕೇಳಿದ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು.

ರಾಜ್ಯದಲ್ಲಿ 41,088 ಸರ್ಕಾರಿ ಪ್ರಾಥಮಿಕ ಶಾಲೆಗಳಿದ್ದು, ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 178935 ಹುದ್ದೆಗಳು ಮಂಜೂರಾಗಿದ್ದು ಈ ಪೈಕಿ 133345 ಹುದ್ದೆಗಳು ಭರ್ತಿಯಾಗಿದ್ದು, 45590 ಹುದ್ದೆಗಳು ಖಾಲಿ ಇರುತ್ತವೆ. ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ನೇಮಕಾತಿ ಮಾಡಲು ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಅವರು ವಿವರಿಸಿದರು.

ರಾಜ್ಯದಲ್ಲಿ 5024 ಸರ್ಕಾರಿ ಪ್ರೌಢ ಶಾಲೆಗಳಿದ್ದು, ಈ ಪ್ರೌಢಶಾಲೆಗಳಿಗೆ 44,144 ಹುದ್ದೆಗಳು ಮಂಜೂರಾಗಿರುತ್ತವೆ. ಈ ಪೈಕಿ 32010 ಹುದ್ದೆಗಳು ಭರ್ತಿಯಾಗಿದ್ದು 12,134 ಹುದ್ದೆಗಳು ಖಾಲಿ ಇರುತ್ತವೆ.

ಪ್ರಸ್ತುತ ಖಾಲಿ ಇರುವ ಹುದ್ದೆಗಳಗೆ ಎದುರಾಗಿ 2025-2026ನೇ ಶೈಕ್ಷಣಿಕ ಸಾಲಿಗೆ ಪ್ರಾಥಮಿಕ ಶಾಲೆಗಳಲ್ಲಿ 40,000 ಮತ್ತು ಪ್ರೌಢಶಾಲೆಗಳಲ್ಲಿ 11,000 ಒಟ್ಟಾರೆಯಾಗಿ 51,000 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡುವ ಮೂಲಕ ಶಿಕ್ಷಕರ ಕೊರತೆಯನ್ನು ಸರಿದೂರಿಸಲಾಗಿದೆ ಹಾಗೂ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ಕ್ರಮವಹಿಸಲಾಗಿದೆ. ಅಲ್ಲದೇ ವಿಕಲಚೇತನ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ದೃಷ್ಟಿಯಿಂದ ವಿಶೇಷ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಸಚಿವರು ವಿವರಿಸಿದರು.

ಶಾಲಾ ಮಕ್ಕಳಿಗೆ ಬಿಸಿಯೂಟ ಯೋಜನೆಯಡಿ ಮೊಟ್ಟೆ ವಿತರಣೆ

ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ 05 ದಿನ ಬೆಳಿಗ್ಗೆ ಬಿಸಿ ಹಾಲು, ಇದರೊಂದಿಗೆ ಮಿಕ್ಸ್ ರಾಗಿ ಮಾಲ್ಟ್, ಮಧ್ಯಾಹ್ನ ಬಿಸಿ ಊಟದೊಂದಿಗೆ ವಾರದಲ್ಲಿ ಆರು ದಿನ ಪೂರಕ ಪೌಷ್ಠಿಕ ಆಹಾರವಾಗಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಉಚಿತವಾಗಿ ವಿತರಿಸಲಾಗುತ್ತಿದೆ ಎಂದರು.

ವಿದ್ಯಾವಿಕಾಸ ಯೋಜನೆಯಡಿ 1 ರಿಂದ 10ನೇ ತರಗತಿಯ ಮಕ್ಕಳಿಗೆ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೆ ವಿದ್ಯಾ ವಿಕಾಸ ಯೋಜನೆಯಡಿಯಲ್ಲಿ ಸಮವಸ್ತ್ರ ಸರಬರಾಜು ಮಾಡಲು ಮೊದಲನೇ ಜೊತೆ ಸಮವಸ್ತ್ರಕ್ಕಾಗಿ ರೂ.83.07 ಕೋಟಿ ಬಿಡುಗಡೆ ಮಾಡಲಾಗಿದ್ದು, ಎರಡನೇ ಜೊತೆ ಸಮವಸ್ತ್ರಕ್ಕಾಗಿ ರೂ. 80.66 ಕೋಟಿ ಲಭ್ಯವಿರುತ್ತದೆ ಎಂದರು.
ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಒಂದು ದಿನದ ಚರ್ಚೆಗೆ ಅವಕಾಶ ಮಾಡಿಕೊಡಬೇಕೆಂದು ಶಾಸಕ ಸುರೇಶ್ ಕುಮಾರ್ ರವರು ಈಗಾಗಲೇ ಸಭಾಧ್ಯಕ್ಷರಿಗೆ ಪತ್ರ ನೀಡಿದ್ದು, ಶಿಕ್ಷಣ ವಿಷಯಕ್ಕೆ ಒಂದು ದಿನದ ಚರ್ಚೆಗೆ ಅವಕಾಶ ಮಾಡಿಕೊಡಬೇಕೆದು, ಚರ್ಚೆಯಲ್ಲಿ ಹಿರಿಯ ಶಾಸಕರ ಸಲಹೆ-ಸೂಚನೆಗಳನ್ನು ಪಡೆದು ಅದರಂತೆ ಕ್ರಮ ವಹಿಸಲಾಗುವುದು ಎಂದರು.

ರಾಜಕೀಯ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

“ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು

[ccc_my_favorite_select_button post_id="119228"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸಾವರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ (Accident) ತಾಲೂಕಿನ ಮಾಕಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ.

[ccc_my_favorite_select_button post_id="119217"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!