Speech bow to Artists Umesh and Ramachandraiah in Doddaballapur

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ; ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಮತ್ತು ಮುಖಂಡರು,  ಕಲಾವಿದರ ಸಾವು ನೋವಿನ ಸಂಗತಿಯೇ, ಕಲಾವಿದರು ತಮ್ಮ ಕಲೆ, ಅಭಿನಯದಿಂದ ಜನರ ಮನಸ್ಸನ್ನು ತಲುಪಿ, ಭಾವನೆಗಳನ್ನು ಕೆರಳಿಸಿ, ಸಮಾಜಕ್ಕೆ ಸ್ಪೂರ್ತಿ ತುಂಬಿರುತ್ತಾರೆ.  ಪ್ರತಿಭಾವಂತ ಕಲಾವಿದನ ನಿಧನ ಕಲೆ ಮತ್ತು ಸಾಂಸ್ಕೃತಿಕ ರಂಗದಲ್ಲಿ ದೊಡ್ಡ ಶೂನ್ಯವನ್ನು ಸೃಷ್ಟಿಸುತ್ತದೆ ಎಂದರು.

ಎಂ.ಎಸ್‌. ಉಮೇಶ್‌ ಅವರು ಬಾಲ್ಯದಿಂದಲೇ ಅಭಿನಯದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದವರು. ಹಿರಣ್ಣಯ್ಯರ ನಾಟಕ ಕಂಪನಿಯಲ್ಲಿ ಬಾಲನಟನಾಗಿ ನಂತರ ಗುಬ್ಬಿ ವೀರಣ್ಣರ ಕಂಪನಿಯಲ್ಲಿ ವಿವಿಧ ಪಾತ್ರಗಳಲ್ಲಿ ನಟಿಸಿದರು. 1960ರಲ್ಲಿ ʻಮಕ್ಕಳ ರಾಜ್ಯʼ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ ಅವರು 350ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ಅಭಿನಯಿಸಿ ಕನ್ನಡ ಚಿತ್ರರಂಗವನ್ನು ಶ್ರೀಮಂತಗೊಳಿಸಿದರು.

ಜಾನಪದ ಕಲಾವಿದ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿ ಶ್ಯಾಕಲದೇವನಪುರ ಗ್ರಾಮದ ರಾಮಚಂದ್ರಯ್ಯ ಹಲವಾರು ಕಲಾವಿದರನ್ನು ಬೆಳೆಸಿ ಪ್ರೋತ್ಸಾಹಿಸಿದರು. ದೊಡ್ಡಬಳ್ಳಾಪುರ ತಾಲ್ಲೂಕಿನ ಹಲವಾರು ಹಿರಿಯ ಕಲಾವಿದರಿಗೆ ಸರ್ಕಾರದಿಂದ ಮಾಸಾಶನ ದೊರೆಯುವಂತೆ ಮಾಡಿದರು.

ದೊಡ್ಡಬಳ್ಳಾಪುರಕ್ಕೆ ರಾಜ್ಯ ಮತ್ತು ರಾಷ್ಟ್ರಮಟ್ಟದ ಕಲಾವಿದರನ್ನು ಕರೆಸಿ ಕಾರ್ಯಕ್ರಮ ನಡೆಸಿಕೊಟ್ಟಿದ್ದರು. ಸ್ಥಳೀಯ ಕಲಾವಿದರನ್ನು ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ‌ಭಾಗವಹಿಸುವಂತೆ ಮಾಡಿದ್ದರು ಎಂದರು.

ಕಾರ್ಯಕ್ರಮದಲ್ಲಿ ಕನ್ನಡಪರ ಹಿರಿಯ ಹೋರಾಟಗಾರ ಸಂಜೀವ್ ನಾಯಕ್, ಗುರುರಾಜಪ್ಪ, ಕನ್ನಡ ಪಕ್ಷದ‌‌ ಜಿಲ್ಲಾಧ್ಯಕ್ಷ ಮುನಿಪಾಪಣ್ಣ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಕನ್ನಡ ಜಾಗೃತ ಪರಿಷತ್ತು  ಕಾರ್ಯದರ್ಶಿ ಡಿ.ಪಿ.ಆಂಜನೇಯ,   ನವೋದಯ ವಿದ್ಯಾಲಯ ನಿವೃತ್ತ ಶಿಕ್ಷಕ ವಿ.ಎಸ್.ಹೆಗಡೆ, ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ್, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ಸಾಸಲು ಹೋಬಳಿ ಅಧ್ಯಕ್ಷ ಜಿ.ಎಂ.ನಾಗರಾಜು, ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿಗಳಾದ  ನಾಗರತ್ನಮ್ಮ, ಕೋದಂಡರಾಮ್,   ಜಿ.ವಿ‌.ಗಣೇಶ್, ಪ್ರಾಂಶುಪಾಲ ಎಂ.ಸಿ.ಮಂಜುನಾಥ್, ದೈಹಿಕ ಶ್ರೀನಿವಾಸ್, ದರ್ಗಾಜೋಗಿಹಳ್ಳಿ ಮಲ್ಲೇಶ್, ಇಸ್ತೂರು ರಂಗಸ್ವಾಮಯ್ಯ, ಮುಂತಾದವರು ಭಾಗವಹಿಸಿದ್ದರು.

ರಾಜಕೀಯ

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಬಾಗಲಕೋಟೆ ವಿಧಾನಸಭೆ ಟಿಕೆಟ್ ಅನ್ನು ಎಚ್‌.ವೈ. ಮೇಟಿ ಅವರ ಎರಡನೇ ಮಗ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣಗೆರೆ ದಕ್ಷಿಣ ಟಿಕೆಟ್ ಅನ್ನು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ

[ccc_my_favorite_select_button post_id="120378"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!