There is confidence in the Prime Minister's words; DCM D.K. Shivakumar

ವಿಜಯೇಂದ್ರ ಅವರಿಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ: “ಒಟ್ಟಿಗೆ ಸೇರಿ ಊಟ ಮಾಡುವುದನ್ನು ಬೇಡ ಎಂದು ಹೇಳಲು ಆಗುತ್ತದೆಯೇ? ನನಗೇಕೆ ಅದೆಲ್ಲಾ? ಹೊರಗಡೆಯಿಂದ ಬಂದಿದ್ದೀವಿ. ಎಲ್ಲಾ ಸೇರಿರೋದ್ರಲ್ಲಿ, ಊಟ ಮಾಡೋದ್ರಲ್ಲಿ ತಪ್ಪೇನಿದೆ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಮರುಪ್ರಶ್ನಿಸಿದ್ದಾರೆ.

ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ಗುರುವಾರ ರಾತ್ರಿ ಡಿನ್ನರ್ ಮೀಟಿಂಗ್ ನಡೆದಿದೆಯಲ್ಲ ಎಂದು ಕೇಳಿದಾಗ ಡಿಸಿಎಂ ಈ ರೀತಿ ಉತ್ತರಿಸಿದರು.

ಎಲ್ಲ ಸೇರಿ ಊಟ ಮಾಡೋದ್ರಲ್ಲಿ ತಪ್ಪು ಹುಡುಕಬೇಡಿ ಎಂದರು.

ಅಲ್ಲಿ ಬರೀ ನಾಲ್ಕೈದು ಜನ ಸೇರಿದ್ರಂತೆ ಎಂದು ಮಾಧ್ಯಮದವರು ಕೇಳಿದಾಗ, “ಅದು ನನಗ್ಯಾಕೆ ಬೇಕು. ನನ್ನನ್ಯಾಕೆ ಈ ಪ್ರಶ್ನೆ ಕೇಳ್ತೀರಿ” ಎಂದು ಮರು ಪ್ರಶ್ನಿಸಿದರು.

ವಿಜಯೇಂದ್ರ ಅವರಿಗೆ ಕಾಲವೇ ಉತ್ತರ ನೀಡುತ್ತದೆ

ನಿಮ್ಮನ್ನು ಭ್ರಷ್ಟಾಚಾರದ ಪಿತಾಮಹ ಎಂದು ವಿಜಯೇಂದ್ರ ಕರೆದಿರುವ ಬಗ್ಗೆ ಕೇಳಿದಾಗ, “ವಿಜಯೇಂದ್ರ ಅವರಿಗೆ ಸೂಕ್ತ ಸಮಯದಲ್ಲಿ ಉತ್ತರ ನೀಡೋಣ. ಹೈಕಮಾಂಡ್ ಗೆ ನಾವು ಎಟಿಎಂ ಎಂದು ವಿಜಯೇಂದ್ರ ಹೇಳಿದ್ದಾರೆ. ಇದನ್ನು ಅವರು ಸಾಬೀತು ಮಾಡಬೇಕು. ಯಾವ ಲೆಕ್ಕಾಚಾರದ ಮೇಲೆ ಅವರು ಆರೋಪ ಮಾಡಿದ್ದಾರೆ. ಇಲ್ಲಿ ಸರಕಾರನಾ ನಾವು ದಿವಾಳಿ ಮಾಡಿ ದುಡ್ಡು ತೆಗೆದುಕೊಂಡು ಹೋಗಿ ಹೈಕಮಾಂಡ್ ಗೆ ಕೊಡುತ್ತಿದ್ದೇವೆ, ನಾವು ಹೈ ಕಮಾಂಡ್ ಗೆ ಎಟಿಎಂ ಎಂದು ಹೇಳಿದ್ದಾರೆ. ಈಗ ಏನು ಹೇಳಬೇಕು ಅದನ್ನು ಹೇಳಿದ್ದೇನೆ. ಉಳಿದ ಉತ್ತರಕ್ಕೆ ಸಮಯ ಬರುತ್ತದೆ, ಕಾಲವೇ ಉತ್ತರ ನೀಡುತ್ತದೆ. ಅವರಿಗೆ ಏನು ಬೇಕೋ ಆ ಉತ್ತರ ಈಗಾಗಲೇ ನೀಡಿದ್ದೇನೆ” ಎಂದರು.

ರಾಜೇಂದ್ರ ಪ್ರಸಾದ್ ಆರೋಗ್ಯವಾಗಿದ್ದಾರೆ

ತಮ್ಮ ಆಪ್ತ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಅವರ ಕಾರು ಅಪಘಾತದ ಬಗ್ಗೆ ಕೇಳಿದಾಗ, “ರಾಜೇಂದ್ರ ಪ್ರಸಾದ್ ಅವರನ್ನು ವೈದ್ಯರು ತಪಾಸಣೆ ನಡೆಸಿದ್ದಾರೆ. ಯಾವುದೇ ಆತಂಕ ಪಡಬೇಕಿಲ್ಲ. ಕತ್ತಿನ ಬಳಿ ನೋವಿದೆ. ಒಂದೆರಡು ದಿನ ವಿಶ್ರಾಂತಿ ಬೇಕು ಎಂದು ಹೇಳಿದ್ದಾರೆ. ತೀವ್ರ ತೆರನಾದ ತೊಂದರೆ ಉಂಟಾಗಿಲ್ಲ. ದೇವಿ ಯಲ್ಲಮ್ಮನೇ ಕಾಪಾಡಿದ್ದಾಳೆ” ಎಂದರು.

“ಒಬ್ಬ ಯುವಕನ ಸಾವಾಗಿದೆ. ಆತನ ಕುಟುಂಬದವರನ್ನು ಭೇಟಿ ಮಾಡಲು ಮಂತ್ರಿಗಳಿಗೆ ತಿಳಿಸುತ್ತೇನೆ. ನನಗೂ ಈ ಬಗ್ಗೆ ನೋವಿದೆ. ಮೃತಪಟ್ಟವನು ಇನ್ನೂ ಯುವಕ, ವಾಹನ ಚಾಲಕನಿಗೂ ಎದೆಯ ಬಳಿ ನೋವಾಗಿದೆ. ದೇವಸ್ಥಾನಕ್ಕೆ ತೆರಳಿ ಬರುವಾಗ ವಾಹನ ಅಡ್ಡ ಬಂದ ಕಾರಣಕ್ಕೆ ಈ ದುರ್ಘಟನೆ ನಡೆದಿದ್ದು, ಮೃತನ ಕುಟುಂಬದವರಿಗೆ ಸೂಕ್ತ ಪರಿಹಾರ ನೀಡಲಾಗುವುದು” ಎಂದರು.

ರಾಜಕೀಯ

ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳ ಸಾರ್ವತ್ರಿಕ ಮುಷ್ಕರ: ದೊಡ್ಡಬಳ್ಳಾಪುರ ಬಂದ್‌ಗೆ ವರ್ತಕರ ಬೆಂಬಲ

ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳ ಸಾರ್ವತ್ರಿಕ ಮುಷ್ಕರ: ದೊಡ್ಡಬಳ್ಳಾಪುರ ಬಂದ್‌ಗೆ ವರ್ತಕರ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಹಿಂಪಡೆಯುವುದು ಸೇರಿದಂತೆ ಕಾರ್ಮಿಕ ವಿರೋಧಿ ಮಸೂದೆ ಗಳನ್ನು ರದ್ದುಪಡಿಸುವಂತೆ ಹಾಗೂ ಮನ್ರೇಗಾ ಮರು ಜಾರಿ, ಸಾರ್ವಜನಿಕ ಸೇವೆಗಳ ಖಾಸಗೀಕರಣ ರದ್ದತಿಗೆ ಒತ್ತಾಯಿಸಿ, ಕಾರ್ಮಿಕ ಸಂಘಟನೆಗಳ

[ccc_my_favorite_select_button post_id="119366"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!