
ಬೆಂ.ಗ್ರಾಂ.ಜಿಲ್ಲೆ: 2025-26ನೇ ಸಾಲಿನ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ 05 ಫಲಾನುಭವಿ ಆಧಾರಿತ ಯೋಜನೆಗಳಿಗೆ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ (Applications invited).
ವಿವಾಹ ಪ್ರೋತ್ಸಾಹಧನ ಯೋಜನೆಯ ಹೂಡಿಕೆಯ ರೂಪದಲ್ಲಿ ವಿಕಲಚೇತನ ವ್ಯಕ್ತಿಗಳೊಡನೆ ವಿವಾಹ ಏರ್ಪಡುವ ಪ್ರಕರಣಗಳಲ್ಲಿ, ವಿಕಲಚೇತನ ವ್ಯಕ್ತಿಯ ಹೆಸರಿನಲ್ಲಿ ರೂ.50 ಸಾವಿರವನ್ನು ನೀಡಲಾಗುವುದು.
ಎಸ್.ಎಸ್.ಎಲ್.ಸಿ ನಂತರ ವಿಕಲಚೇತನ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆ.
ಬುದ್ಧಿಮಾಂದ್ಯರು, ಸೆರಬ್ರಲ್ ಪಾಲ್ಸಿ, ಆಟಿಸಂ ಮತ್ತು ಬಹುವಿಧ ಅಂಗವಿಕಲತೆಗೆ ಒಳಗಾದ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ವಿಕಲಚೇತನರಿಗೆ “ನಿರಾಮಯ” ಆರೋಗ್ಯ ವಿಮಾ ಯೋಜನೆ.
07 ಬಗೆಯ ವಿಕಲಚೇತನರ ಆರೈಕೆದಾರರ ಪ್ರೋತ್ಸಾಹಧನ ಯೋಜನೆ (ಶೇ.75 ಮತ್ತು ಹೆಚ್ಚಿನ ಅಂಗವಿಕಲತೆ ಹೊಂದಿರುವ).
ಅರ್ಜಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹ ವಿಕಲಚೇತನರು ಹತ್ತಿರದ ಗ್ರಾಮ ಪಂಚಾಯಿತಿ,ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಅಥವಾ ತಾಲ್ಲೂಕು ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ/ನಗರ/ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರುಗಳಿಂದ ಅಥವಾ ಈ ಕಛೇರಿಯಿಂದ ನಿಗದಿತ ಅರ್ಜಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಡಿಸೆಂಬರ್ 31 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಸಹಾಯವಾಣಿ ಕೇಂದ್ರದ ದೂ,ಸಂಖ್ಯೆ:080-29787441 ಗೆ ಅಥವಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗೆ ಕಚೇರಿ ಸಮಯದಲ್ಲಿ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.