
ದೊಡ್ಡಬಳ್ಳಾಪುರ: ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ ಸಂಭವಿಸಿದೆ.
ಘಟನೆಯಲ್ಲಿ ಬೈಕ್ ಸವಾರ ಇಸ್ತೂರು ನಿವಾಸಿ ಲೋಕೇಶ ( 38 ವರ್ಷ) ಸ್ಥಳದಲ್ಲಿಯೇ ಸಾವನಪ್ಪಿದ್ದು, ಸಹ ಸವಾರ ಶಾಕಲದೇವನಪುರದ ನಿವಾಸಿ ದೃವ ಎನ್ನುವವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶುಕ್ರವಾರ ರಾತ್ರಿ ಕನ್ನಮಂಗಲ ಗೇಟ್ ಸಮೀಪದಲ್ಲಿ ಕಂಟೇನರ್ ವಾಹನ ಏಕಾಏಕಿ ತಿರುವು ಪಡೆದಿದ್ದು, ಕಂಟೇನರ್ ಕಾಣದೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!
ಇದೇ ಪೊಲೀಸ್ ಠಾಣೆ ವ್ಯಾಪ್ತಿಯ ಪುಟ್ಟಯ್ಯನ ಅಗ್ರಹಾರದ ಪಾಳುಬಾವಿಗೆ ಬಿದ್ದು ಸುಮಾರು 40 ವರ್ಷದ ವ್ಯಕ್ತಿ ಸಾವನಪ್ಪಿದ್ದಾರೆ.
ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿಗಳು ದೌಡಾಯಿಸಿ ಮೃತ ದೇಹವನ್ನು ಹೊರತೆಗೆದಿದ್ದಾರೆ. (ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ)