
ಬೆಳಗಾವಿ: ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದಾರೆ. ಹಾಲಿನ (Milk) ಪ್ರೋತ್ಸಾಹಧನ ಹೆಚ್ಚಿಸುವುದಾಗಿ ಚಳಿಗಾಲದ ಅಧಿವೇಶನದಲ್ಲಿ ಸಿಎಂ ಘೋಷಿಸಿದ್ದು, ಸದ್ಯ ಪ್ರತಿ ಲೀಟರ್ ಹಾಲಿಗೆ ನೀಡುತ್ತಿರುವ 5 ರೂ. ಪ್ರೋತ್ಸಾಹಧನವನ್ನು ಈ ಅವಧಿಯಲ್ಲಿ 7 ರು.ಗೆ ಹೆಚ್ಚಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ರೈತರಿಗೆ ಪ್ರೋತ್ಸಾಹಧನ ಸಂಪೂರ್ಣವಾಗಿ ತಲುಪುತ್ತಿಲ್ಲ ಎಂಬ ಆರೋಪಕ್ಕೆ ಸ್ಪಷ್ಟನೆ ನೀಡಿದ ಸಿಎಂ ಅವರು, ಬೆಲೆಯೇರಿಕೆಯ ಹೊರತಾಗಿಯೂ ಸರಕಾರದಿಂದ ನೆರವು ಮುಂದುವರಿಯುತ್ತಲೇ ಇರುತ್ತದೆ ಎಂದು ಭರವಸೆ ನೀಡಿದ್ದಾರೆ.
ಬಜೆಟ್‌ನಲ್ಲಿ ಘೋಷಿಸಿದ 30 ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ ಎಂಬುದನ್ನು ಕೂಡ ವಿವರಿಸಿದರು.
ಪ್ರಸ್ತುತ (2023ರ ನಂತರ) ಪ್ರಣಾಳಿಕೆಯಲ್ಲಿನ 593 ಭರವಸೆಗಳಲ್ಲಿ 293 ಭರವಸೆಗಳನ್ನು ಈಗಾಗಲೇ ಪೂರ್ಣಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.