ದೊಡ್ಡಬಳ್ಳಾಪುರ: ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ವಾರ್ಷಿಕ ಮಂಡಲ ಪೂಜೆ

Annual Mandala Puja at Ayyappa Swamy Temple

ದೊಡ್ಡಬಳ್ಳಾಪುರ: ನಗರದ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ (Ayyappa Swamy Temple) ಶ್ರೀ ಅಯ್ಯಪ್ಪಸ್ವಾಮಿ ಸೇವಾ ಅಭಿವೃದ್ಧಿ ಟ್ರಸ್ಟ್ನ ವತಿಯಿಂದ 52ನೇ ವರ್ಷದ ವಾರ್ಷಿಕ ಮಂಡಲ ಪೂಜಾ ಕಾರ್ಯಕ್ರಮಗಳು ಶ್ರದ್ಧಾ ಭಕ್ತಿ ಸಂಭ್ರಮಗಳಿಂದ ನೆರವೇರಿದವು.

ಮಂಡಲ ಪೂಜಾ ಕಾರ್ಯುಕ್ರಮದ ಅಂಗವಾಗಿ ದೇವಾಲಯದಲ್ಲಿ ಶ್ರೀ ಗಣ ಹೋಮ ನಡೆಯಿತು. ಶ್ರೀ ಅಯ್ಯಪ್ಪಸ್ವಾಮಿ, ಶ್ರೀ ಗಣೇಶ ಹಾಗೂ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಹೂವಿನ ಅಲಂಕಾರಗಳನ್ನು ಮಾಡಲಾಗಿತ್ತು.

ದೊಡ್ಡಬಳ್ಳಾಪುರ: ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ವಾರ್ಷಿಕ ಮಂಡಲ ಪೂಜೆ

ಅಯ್ಯಪ್ಪ ವ್ರತಧಾರಿಗಳಿಂದ ಸಾಮೂಹಿಕ ಭಜನೆ ನಡೆಯಿತು.

ನಾಗಲಾಪುರ ಸಂಸ್ಥಾನ ಮಠದ ತೇಜೇಶಲಿಂಗ ಶಿವಾಚಾರ್ಯ ಮಹಾಸ್ವಾಮೀಜಿ ಆಶೀರ್ವಚನ ನೀಡಿ, ಧಾರ್ಮಿಕ ಕಾರ್ಯಯಗಳಿಂದ ಉತ್ತಮ ಸಮಾಜದ ನಿರ್ಮಾಣ ಸಾಧ್ಯವಾಗಲಿದ್ದು, ನಮ್ಮ ದೇಶದಲ್ಲಿ ಹಲವಾರು ಸಂಸ್ಕೃತಿ, ಸಂಪ್ರದಾಯಗಳ ಆಚರಣೆಗಳಿವೆ. ಇಂತಹ ಆಚರಣೆಗಳು ಮಾನವೀಯ ಮೌಲ್ಯಗಳನ್ನು ಬಿಂಬಿಸಿ, ಸಮಾಜವನ್ನು ಒಗ್ಗೂಡಿಸುತ್ತವೆ.

ಧಾರ್ಮಿಕ ಆಚರಣೆಗಳ ಮೇಲೆ ನಮ್ಮ ನಂಬಿಕೆ, ಶ್ರದ್ದೆಗಳು ಜಗತ್ತಿನಲ್ಲಿಯೇ ವಿಶೇಷವಾಗಿವೆ. ಜೀವನದ ಯಶಸ್ಸು ಬರೀ ಹಣದಿಂದ ಸಾಧ್ಯವಿಲ್ಲ.

ಸೇವಾಕಾರ್ಯಿಗಳನ್ನು ಮಾಡುವುದು ಸಹ ಭಗವಂತನ ಸಾಕ್ಷಾತ್ಕಾರ ಮಾಡಿಕೊಳ್ಳುವ ಹಾದಿಯಾಗಿದೆ. 84 ಲಕ್ಷ ಜೀವ ರಾಶಿಯಲ್ಲಿ ಮಾನವ ಜನ್ಮ ಮಾತ್ರ, ದೇವತಾರಾಧನೆಯೊಂದಿಗ ಮೋಕ್ಷ ಪಡೆಯುತ್ತಾರೆ. ಇಂತಹ ಪವಿತ್ರ ಜನ್ಮವನ್ನು ಹಾನಿ ಮಾಡಿಕೊಳ್ಳದಿರಿ ಎಂದು ದಾಸರೇ ಹೇಳಿದ್ದಾರೆ. ಪರೋಪಕಾರದ ಮೂಲಕ ನಮ್ಮ ಜನ್ಮ ಸಾರ್ಥಕ ಪಡಿಸಿಕೊಳ್ಳಬೇಕು. ಭಗವಂತನ ಆರಾಧನೆಯಲ್ಲಿ ವ್ಯತಾಚರಣೆಗಳು ಸಹ ಪ್ರಮುಖ ಫಾತ್ರ ವಹಿಸುತ್ತವೆ.

ಮಹಿಳೆಯರು ಸಹ ವಿವಿಧ ಆಚರಣೆ ಆಚರಿಸುತ್ತಾರೆ. ವಿಶೇಷವಾಗಿ ಪುರುಷರು ಹೆಚ್ಚಾಗಿ ಆಚರಿಸುವ ಅಯ್ಯಪ್ಪಸ್ವಾಮಿ ವ್ಯತಾಚರಣೆ ಕಠಿಣ ವ್ರತದಿಂದ ತಮ್ಮ ಇಷ್ಟಾರ್ಥಗಳನ್ನು ನೆರವೇರಿಸಿಕೊಳ್ಳಲು ಭಗವಂತನ ಆರಾಧನೆ ಮಾಡುವುದು ವಿಶೇಷವಾಗಿದೆ. ಬದುಕಿನಲ್ಲಿ ಆಚಾರ ವಿಚಾರಗಳು ಉತ್ತಮವಾಗಿರಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ 2026ನೇ ಸಾಲಿನ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.

ಆ ನಂತರ ಮಹಾಮಂಗಳಾರತಿ ಹಾಗೂ ಅನ್ನಸಂತರ್ಪಣೆ ನಡೆಯಿತು.

ಶ್ರೀ ಅಯ್ಯಪ್ಪಸ್ವಾಮಿ ಸೇವಾ ಅಭಿವೃದ್ಧಿ ಟ್ರಸ್ಟ್ನ ಅಧ್ಯಕ್ಷ ಮಹದೇವಯ್ಯ, ಕಾರ್ಯಗದರ್ಶಿ ಬಿ.ವಿ.ಬಸವರಾಜು, ಸಮಿತಿ ಸದಸ್ಯರು ಸೇರಿದಂತೆ ಸಹಸ್ರಾರು ಭಕ್ತಾದಿಗಳು ಮಂಡಲ ಪೂಜೆಯಲ್ಲಿ ಭಾಗವಹಿಸಿದ್ದರು.

ಸಂಜೆ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಲಿರುವ ಅಯ್ಯಪ್ಪಸ್ವಾಮಿ ಉತ್ಸವದಲ್ಲಿ ವೀರಭದ್ರ, ವೀರಗಾಸೆ ಕುಣಿತ, ಕೇರಳದ ಚಂಡೆ ವಾದ್ಯ, ದೇವರ ವೇಷಭೂಷಣಗಳ ಪ್ರದರ್ಶನದ ಕಲಾನೃತ್ಯಗಳೊಂದಿಗೆ ಶ್ರೀ ಅಯ್ಯಪ್ಪಸ್ವಾಮಿಯ ಭವ್ಯ ಮೆರವಣಿಗೆಯನ್ನು ನಗರದ ಪ್ರಮುಖ ಬೀದಿಗಳಲ್ಲಿ ನಡೆಸಲಾಯಿತು.

ದೊಡ್ಡಬಳ್ಳಾಪುರ: ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ವಾರ್ಷಿಕ ಮಂಡಲ ಪೂಜೆ

ಉತ್ಸವದಲ್ಲಿ ಮಕ್ಕಳು ಆರತಿ ತಟ್ಟೆಯಲ್ಲಿ ಜ್ಯೋತಿಯನ್ನು ಹಿಡಿದು ಸಾಗಿದರು.

ರಾಜಕೀಯ

ದೊಡ್ಡಬಳ್ಳಾಪುರ BJPಗೆ ಶಾಕ್: ನಗರಸಭೆ ಸದಸ್ಯ ದಿಢೀರ್ ರಾಜೀನಾಮೆ..?

ದೊಡ್ಡಬಳ್ಳಾಪುರ BJPಗೆ ಶಾಕ್: ನಗರಸಭೆ ಸದಸ್ಯ ದಿಢೀರ್ ರಾಜೀನಾಮೆ..?

ಅಚ್ಚರಿಯ ಬೆಳವಣಿಗೆಯಲ್ಲಿ ಎಸ್. ಪದ್ಮನಾಭ (S. Padmanabha) ಅವರು ದೊಡ್ಡಬಳ್ಳಾಪುರ ನಗರಸಭೆ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ದೊಡ್ಡಬಳ್ಳಾಪುರ ಬಿಜೆಪಿಗೆ (Doddaballapur BJP) ಶಾಕ್ ನೀಡಿದ್ದಾರೆ

[ccc_my_favorite_select_button post_id="120682"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ದೊಡ್ಡಬಳ್ಳಾಪುರ: ಪಾಲನಜೋಗಿಹಳ್ಳಿ ಬಳಿ ಮತ್ತೆ ಅಪಘಾತ.. ಇಬ್ಬರಿಗೆ ಗಾಯ..!

ದೊಡ್ಡಬಳ್ಳಾಪುರ: ಪಾಲನಜೋಗಿಹಳ್ಳಿ ಬಳಿ ಮತ್ತೆ ಅಪಘಾತ.. ಇಬ್ಬರಿಗೆ ಗಾಯ..!

ನಿನ್ನೆಯಷ್ಟೆ ಕೆಎಸ್‌ಆರ್‌ಟಿಸಿ ಬಸ್ ಹರಿದು ಬೈಕ್ ಸವಾರ ಸಾವನಪ್ಪಿರುವ ಬೆನ್ನಲ್ಲೇ, ರಸ್ತೆ ಬದಿ ನಿಂತಿದ್ದ ಆಟೋಗೆ ದ್ವಿಚಕ್ರ ವಾಹನ ಡಿಕ್ಕಿ (Accident) ಹೊಡೆದ ಪರಿಣಾಮ, ಬೈಕ್ ಸವಾರ ಹಾಗೂ ರಸ್ತೆಯ ಬದಿ ನಿಂತಿದ್ದ ಮಹಿಳೆಗೆ

[ccc_my_favorite_select_button post_id="120677"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]