ದ್ವೇಷ ಭಾಷಣ ಮಸೂದೆ; ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ.?: ಸಿಎಂ ಸಿದ್ದರಾಮಯ್ಯ ಪ್ರಶ್ನೆ

Hate Speech Bill; Why is BJP looking down on pumpkin thieves?: Cmsiddaramaiah

ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು ರೂಪಿಸಲಾಗಿದೆ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ ಕಾಯ್ದೆ ಎಲ್ಲಾ ಪಕ್ಷದವರಿಗೂ ಅನ್ವಯವಾಗುತ್ತದೆ. ಬಿಜೆಪಿ ಮಾತ್ರ ಏಕೆ ವಿರೋಧಿಸುತ್ತಾರೆ? ದ್ವೇಷ ಭಾಷಣದಿಂದ ಸಮಾಜದಲ್ಲಿ ಶಾಂತಿ ನೆಲೆಸುತ್ತದೆಯೇ ? ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಶಾಂತಿ ಹಾಗೂ ಭಾತೃತ್ವ ಕಾಪಾಡಲು ಈ ಮಸೂದೆ ಜಾರಿ ಮಾಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ದ್ವೇಷ ಭಾಷಣ ಹೆಚ್ಚಾಗುತ್ತಿದೆ. ಅದನ್ನು ನಿಯಂತ್ರಿಸಲೆಂದು ಮಸೂದೆ ರೂಪಿಸಿದೆ ಎಂದರು.

ಬಿಜೆಪಿ ಮಸೂದೆಯನ್ನು ತೀವ್ರವಾಗಿ ವಿರೋಧಿಸುತ್ತಿರುವುದು ಅವರು ದ್ವೇಷ ಭಾಷಣ ಮಾಡುತ್ತಾರೆ ಎಂಬ ಕಾರಣಕ್ಕಾಗಿ ಎಂದು ಅವರು ಹೇಳಿದರು.

ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆ ಆಗುವಾಗ ಲಪಟಾಯಿಸುವ ಪ್ರಶ್ನೆ ಉದ್ಭವಿಸುವುದಿಲ್ಲ

ಫೆಬ್ರವರಿ ಮಾರ್ಚ್ ತಿಂಗಳ ಗೃಹ ಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ. ಪರಿಶೀಲಿಸಿ ಬಿಡುಗಡೆ ಮಾಡಲಾಗುವುದು ಎಂದರು. 23 ತಿಂಗಳ ಗೃಹಲಕ್ಷ್ಮಿ ಹಣವನ್ನು ಹಣವಿಲ್ಲದೆ ಕೊಡಲು ಸಾಧ್ಯವಾಗುತ್ತಿತ್ತೇ ?ಎಂದರು. ಗೃಹಲಕ್ಷ್ಮಿ ಹಣವನ್ನು ಲಪಟಾಯಿಸಲಾಗಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆ ಆಗುವಾಗ ಲಪಟಾಯಿಸುವ ಪ್ರಶ್ನೆ ಎಲ್ಲಿಂದ ಉದ್ಭವವಾಗುತ್ತದೆ ಎಂದರು. ಹಣವನ್ನು ಯಾರು ತೆಗೆದುಕೊಳ್ಳಲಾಗುವುದಿಲ್ಲ ಹಣ ಇನ್ನು ಬಿಡುಗಡೆಯಾಗಿಲ್ಲ ಎಂದರು.

ಪಕ್ಷಕ್ಕಿಂತ ಯಾರು ದೊಡ್ಡವರಲ್ಲ ಎಂಬ ಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಅದು ಒಪ್ಪಬೇಕಾದ ವಿಚಾರ. ಯಾರು ಪಕ್ಷಕ್ಕಿಂತ ದೊಡ್ಡವರಾದರೂ ಸಾಧ್ಯವೇ ಇಲ್ಲ ಎಂದರು.

ನಾಯಕತ್ವ ಬದಲಾವಣೆ ರಾಹುಲ್ ಗಾಂಧಿ ತೀರ್ಮಾನಿಸಬೇಕು

ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ಗಾಂಧಿಯವರು ತೀರ್ಮಾನಿಸಬೇಕು ಅವರು ಏನು ತೀರ್ಮಾನಿಸುತ್ತಾರೋ ಅದಕ್ಕೆ ನಾವು ಬದ್ಧ ಎಂದು ಸಿಎಂ ತಿಳಿಸಿದರು.

ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಸಿಎಂ ಪುನರುಚ್ಚಾರ

ನಾನು ಈ ಬಗ್ಗೆ ಪಕ್ಷದ ವರಿಷ್ಠರ ಬಳಿ ಮಾತನಾಡಿದ್ದು, ನಾವು ಈ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ ಅವರ ತೀರ್ಮಾನಕ್ಕೆ ನಾವು ಬದ್ಧ ಎಂದು ಮುಖ್ಯಮಂತ್ರಿಗಳು ಪುನರುಚ್ಚರಿಸಿದರು.

ನಾಯಕತ್ವ ಬದಲಾವಣೆ; ಮಾಧ್ಯಮಗಳ ಸೃಷ್ಟಿ

ಮಾಧ್ಯಮದವರೇ ನಾಯಕತ್ವ ಬದಲಾವಣೆಯ ಬಗ್ಗೆ ಹೆಚ್ಚಾಗಿ ಚರ್ಚಿಸುತ್ತಿದ್ದಾರೆ. ಇಷ್ಟೊಂದು ಪ್ರಶ್ನೆ ಕೇಳಬೇಕಾದ ಅಗತ್ಯ ಏನಿದೆ. ವಿಧಾನಸಭೆಯಲ್ಲಿ ಈ ಬಗ್ಗೆ ಹೇಳಿದ ಮೇಲು ಪುನಹ ಚರ್ಚೆ ಮಾಡುವ ಅಗತ್ಯವಿಲ್ಲ ಎಂದರು.

ಪಕ್ಷದ ಅಧ್ಯಕ್ಷರನ್ನು ಭೇಟಿ ಮಾಡಿದರೆ ತಪ್ಪೇನು?

ಮಾಜಿ ಸಚಿವ ಕೆ. ಎನ್ ರಾಜಣ್ಣ ನಿನ್ನೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಭೇಟಿ ಮಾಡಲಿ, ಡಿ.ಕೆ ಶಿವಕುಮಾರ್ ಅವರು ಪಕ್ಷದ ಅಧ್ಯಕ್ಷರಾಗಿದ್ದು ಅವರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.

ಅಧಿಕಾರದಲ್ಲಿದ್ದಾಗ ನಾನು ಮಾಡಿದೆ, ಅವರು ಮಾಡಿದರು ಎನ್ನುವುದು ಮುಖ್ಯವಲ್ಲ

ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದು ನಾನೇ ಎಂದು ಉಪಮುಖ್ಯಮಂತ್ರಿಗಳು ಹೇಳಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಅಧಿಕಾರದಲ್ಲಿದ್ದಾಗ ನಾನು ಮಾಡಿದೆ, ಅವರು ಮಾಡಿದರು ಎನ್ನುವುದು ಮುಖ್ಯವಲ್ಲ. ಆದರ ಪ್ರಶ್ನೆಯೇ ಇಲ್ಲ. ಎಸ್.ಎಂ ಕೃಷ್ಣಾ ಅವರು ಆಗ ಮುಖ್ಯಮಂತ್ರಿಗಳಿದ್ದರು, ಸರ್ಕಾರ ಮಾಡಿತ್ತು ಎಂದರು.

ಬಜೆಟ್ ಸಿದ್ಧತೆ ನಡೆದಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ತಯಾರಿ ನಡೆಸುವಾಗ ತಿಳಿಸುವುದಾಗಿ ಮುಖ್ಯಮಂತ್ರಿಗಳು ಹೇಳಿದರು.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]