17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17th International Film Festival: Prakash Raj appointed as ambassador

ಬೆಂಗಳೂರು: ಹಿರಿಯ ಚಲನಚಿತ್ರ ಕಲಾವಿದ, ನಿರ್ದೇಶಕ, ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

ಅಂತರಾಷ್ಟ್ರೀಯ ಚಲನಚಿತ್ರ ಉತ್ಸವದ ಉದ್ಘಾಟನೆ ವಿಧಾನಸೌಧದ ಮುಂಭಾಗದಲ್ಲಿ
ಭವ್ಯ ಮೆಟ್ಟಿಲುಗಳ ಮೇಲೆ ನಡೆಯಲಿದೆ.

ಈ ಬಾರಿಯ ಚಲನಚಿತ್ರೋತ್ಸವದಲ್ಲಿ
ಮಹಿಳಾ ಸಬಲೀಕರಣ ಕುರಿತಾದ ಥೀಮ್ ಇರಲಿದೆ.

ರಾಜಾಜಿನಗರದ ಲುಲುಮಾಲ್‌ನಲ್ಲಿರುವ ಸಿನಿ ಪೊಲಿಸ್‌ನ 11 ಸ್ಕಿನ್‌ಗಳಲ್ಲಿ ಚಿತ್ರೋತ್ಸವದ ಚಲನಚಿತ್ರಗಳ ಪ್ರದರ್ಶನ ನಡೆಯಲಿದೆ.

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಏಷಿಯನ್, ಭಾರತೀಯ ಮತ್ತು ಕನ್ನಡ ಸಿನಿಮಾ ಸ್ಪರ್ಧಾತ್ಮಕ ವಿಭಾಗಗಳಿಗೆ ಚಲನಚಿತ್ರಗಳ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಇದಕ್ಕೆ ಉತ್ತಮ ಸ್ಪಂದನೆ ದೊರಕಿದೆ.

ಈ ಮೂರು ಸ್ಪರ್ಧಾ ವಿಭಾಗಗಳಿಗೆ ಇದುವರೆಗೆ 110ಕ್ಕೂ ಹೆಚ್ಚು ಚಲನಚಿತ್ರಗಳು ಸಲ್ಲಿಕೆಯಾಗಿವೆ.

ಚಲನಚಿತ್ರಗಳ ಸ್ಪರ್ಧಾತ್ಮಕ ವಿಭಾಗಗಳ ಅರ್ಜಿ ಸಲ್ಲಿಕೆಗೆ ಡಿಸೆಂಬರ್ 31, 2025 ಕಡೆಯ ದಿನಾಂಕವಾಗಿರುತ್ತದೆ.

17ನೇ ಅಂತರ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಾಜಾಜಿನಗರದ ಲುಲು ಮಾಲ್, ಜೊತೆಗೆ
ಡಾ. ರಾಜ್ ಕುಮಾರ್ ಭವನ, ಕಲಾವಿದರ ಸಂಘ, ಚಾಮರಾಜಪೇಟೆ ಹಾಗೂ ಬನಶಂಕರಿಯಲ್ಲಿರವ ಸುಚಿತ್ರ ಫಿಲಂ ಸೊಸೈಟಿ ಚಿತ್ರಮಂದಿರಗಳಲ್ಲೂ ಚಲನಚಿತ್ರಗಳ ಪ್ರದರ್ಶನವಿರಲಿದೆ.

ಕನ್ನಡ ಮತ್ತು ಭಾರತೀಯ ಚಿತ್ರಗಳು ಸೇರಿದಂತೆ ಒಟ್ಟಾರೆ 60ಕ್ಕೂ ಹೆಚ್ಚು ದೇಶಗಳ 200 ಚಲನಚಿತ್ರಗಳ, 400ಕ್ಕೂ ಹೆಚ್ಚು ಪ್ರದರ್ಶನಗಳಿರಲಿವೆ.

ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡು ವಿವಿಧ ಪ್ರಶಸ್ತಿಗಳನ್ನು ಪಡೆದ ಮತ್ತು ಜನಮನ್ನಣೆಗಳಿಸಿದ ದೇಶ-ವಿದೇಶದ ಅತ್ಯುತ್ತಮ ಚಲನಚಿತ್ರಗಳು 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗವಹಿಸುತ್ತಿವೆ.

ಕಾನ್ಸ್ (ಫ್ರಾನ್ಸ್), ಬರ್ಲಿನ್ (ಜರ್ಮನಿ, ವೆನಿಸ್ (ಇಟಲಿ), ಕಾರ್ಲೋವಿ ವೇರಿ (ಜೆಕ್‌ ರಿಪಬ್ಲಿಕ್, ಲೊಕಾರ್ನೂ (ಸಿಟ್ಟರ್ಲೆಂಡ್), ರಾಟರ್‌ಡ್ಯಾಮ್ (ನೆದರ್ ಲ್ಯಾಂಡ್), ಬೂಸಾನ್ (ದಕ್ಷಿಣ ಕೂರಿಯಾ), ಟೊರಂಟೋ (ಕೆನಡಾ) ದೇಶಗಳ ಚಿತ್ರೋತ್ಸವದಲ್ಲಿ ಭಾಗವಹಿಸಿ ಪ್ರಶಸ್ತಿ, ಮೆಚ್ಚುಗೆ ಪಡೆದ ಚಲನಚಿತ್ರಗಳು ಬೆಂಗಳೂರು ಚಿತ್ರೋತ್ಸವದಲ್ಲಿ ಒಂದೇ ಕಡೆ ಸಿನಿಮಾ ಪ್ರಿಯರಿಗೆ ವೀಕ್ಷಿಸಲು ದೊರೆಯಲಿವೆ.

ಜೊತೆಗೆ ಈ ಬಾರಿಯ ಆಸ್ಕರ್ ಪ್ರಶಸ್ತಿಗೆ ಶಾರ್ಟ್ ಲಿಸ್ಟ್ ಆಗಿರುವ ವಿವಿಧ ದೇಶದ ಅತ್ಯುತ್ತಮ ಚಲನಚಿತ್ರಗಳು ಸಹ ನಮ್ಮ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ.

ಪೋಲಿಷ್ ಕಲ್ಪರಲ್ ಸೆಂಟರ್, ನವದೆಹಲಿ, ಗೋಥೆ ಇನ್ಸಿಟ್ಯೂಟ್ – ಮ್ಯಾಕ್ಸ್ ಮುಲ್ಲರ್ ಭವನ, ಬೆಂಗಳೂರು, ಅಲಿಯಾನ್ಸ್ ಫ್ರಾಂಸೇ – ಫ್ರೆಂಚ್ ಇನ್ಸಿಟ್ಯೂಟ್ ಹಾಗೂ ರಾಯಲ್ ಥೈಲ್ಯಾಂಡ್ ಕಾನ್ಸುಲೇಟ್‌ನವರು ಅವರ ದೇಶಗಳ ಅತ್ಯುತ್ತಮ ಚಲನಚಿತ್ರಗಳನ್ನು ಚಿತ್ರೋತ್ಸವದಲ್ಲಿ ಪ್ರದರ್ಶನಕ್ಕೆ ನೀಡುತ್ತಿದ್ದಾರೆ.

ಹಾಗೆಯೇ ಪೋಲಿಷ್ ಕಲ್ಬರಲ್ ಸೆಂಟರ್ ಸಹಯೋಗದಲ್ಲಿ ಪೊಲೆಂಡ್‌ನ ಖ್ಯಾತ ನಿರ್ದೇಶಕರಾದ ಅಂದ್ರೆ ವಾಜ್ಞಾ ಅವರ ಶತಮಾನೋತ್ಸವ ಸ್ಮರಣಾರ್ಥವಾಗಿ ಅವರ ಆಯ್ದ ಚಲನಚಿತ್ರಗಳ ವಿಶೇಷ ಪುನರಾವಲೋಕನ (Retrospective), ಈ ಬಾರಿ ಚಿತ್ರೋತ್ಸವದಲ್ಲಿ ಆಯೋಜಿಸಲಾಗಿದೆ.

ಇದರೊಂದಿಗೆ ಅಲಿಯಾನ್ಸ್ ಫ್ರಾಂಸೇ ಬೆಂಗಳೂರು ಹಾಗೂ ಫ್ರೆಂಚ್ ಇನ್ಸಿಟ್ಯೂಟ್ ಇನ್ ಇಂಡಿಯಾ ಸಹಯೋಗದಲ್ಲಿ ಆಫ್ರಿಕಾ ಸಿನಿಮಾಗಳ ಇತಿಹಾಸವನ್ನು ದಾಖಲಿಸುವ ವಿಶೇಷ ಚಲನಚಿತ್ರಗಳ ಸರಣಿಯನ್ನೂ ಈ ವರ್ಷದ ಚಿತ್ರೋತ್ಸವದಲ್ಲಿ ಪ್ರದರ್ಶಿಸಲಾಗುತ್ತಿದೆ.

ಈ ಬಾರಿ ಚಿತ್ರೋತ್ಸವದ ಫಿಲಂ ಅಕಾಡೆಮಿಕ್ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿತ ಪ್ರತಿನಿಧಿಗಳು ಭಾಗವಹಿಸಲು ಅನುಕೂಲವಾಗುವಂತೆ ಚಿತ್ರೋತ್ಸವದ ಪ್ರಧಾನ ಕೇಂದ್ರದಲ್ಲಿ ವಿಶೇಷ ವೇದಿಕೆ ಇರಲಿದೆ.

ಇದೇ ವೇದಿಕೆಯ ಆವರಣದಲ್ಲಿ 91 ವರ್ಷಗಳ ವರ್ಣ ರಂಜಿತ, ಸ್ಮರಣೀಯ ಸಿನಿಮಾ ಸಂಸ್ಕೃತಿಯ ಇತಿಹಾಸವಿರುವ ಕನ್ನಡ ಚಿತ್ರರಂಗದ ಮೈಲಿಗಲ್ಲುಗಳನ್ನು ಬಿಂಬಿಸುವ ವೈವಿಧ್ಯಮಯ ಛಾಯಾಚಿತ್ರ ಪ್ರದರ್ಶನವನ್ನು ಸಹ ಏರ್ಪಡಿಸಲಾಗುತ್ತದೆ.

ಅನುದಾನ

2025-26 ನೇರ ಸಾಲಿನ 17ನೇ ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವ ಏರ್ಪಡಿಸಲು  ರೂ.‌ 7ಕೋಟಿ ರೂಪಾಯಿಗಳ ಅಗತ್ಯವಿರುವ ಅನುದಾನ ಒದಗಿಸಲಾಗಿದೆ.

ಸಮಾರೋಪ ಸಮಾರಂಭ ಅತ್ಯುತ್ತಮ ಚಲನಚಿತ್ರಗಳಿಗೆ ಪ್ರಶಸ್ತಿ,
ಜೀವಮಾನ ಸಾಧನೆ ಪ್ರಶಸ್ತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧು ಕೋಕಿಲ, ವಾರ್ತಾ ಇಲಾಖೆಯ ಕಾರ್ಯದರ್ಶಿ ಬಿ ಬಿ ಕಾವೇರಿ, ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಹಾಗೂ ಅಕಾಡೆಮಿ ಸದಸ್ಯರು, ಸಂಘಟನಾ ಸಮಿತಿ ಸದಸ್ಯರು, ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಪೂರ್ವಭಾವಿ ಸಭೆಯಲ್ಲಿ ಉಪಸ್ಥಿತರಿದ್ದರು.

ರಾಜಕೀಯ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ದಕ್ಷಿಣ ಭಾರತದ ರಾಜ್ಯಗಳಲ್ಲಿ ಒಟ್ಟು 129 ಸಂಸತ್‌ ಸ್ಥಾನಗಳಿದ್ದು, ಅದನ್ನು 195 ಕ್ಕೆ ಏರಿಸುವ ಅವಕಾಶವಿತ್ತು. ಕ್ಷೇತ್ರ ಮರುವಿಂಗಡಣೆ ಬಗ್ಗೆ ಭಿನ್ನಾಭಿಪ್ರಾಯವಿದ್ದರೆ ಅದನ್ನು ಚರ್ಚೆ ಮಾಡಬಹುದಿತ್ತು. ಈ ಹಿಂದೆಯೂ ಮರುವಿಂಗಡಣೆ ಪ್ರಕ್ರಿಯೆ ನಡೆದಿತ್ತು. ಆಗ

[ccc_my_favorite_select_button post_id="121098"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!