
ದೊಡ್ಡಬಳ್ಳಾಪುರ: ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ತಮ್ಮನ ಮನೆಗೆ ಕರೆತರುವ ವೇಳೆ ಜೆಸಿಬಿ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ತಾಲೂಕಿನ ಕಣಿವೇಪುರದ ಬಳಿ ಸಂಭವಿಸಿದೆ.
ಮೃತನನ್ನು ದೊಡ್ಡಬಳ್ಳಾಪುರ ತಾಲೂಕಿನ ದಂಡುದಾಸಕೊಡಿಗೇಹಳ್ಳಿ ಹರ್ಷ (21 ವರ್ಷ) ಎಂದು ಗುರುತಿಸಲಾಗಿದೆ.
ಮೃತ ಹರ್ಷನ ಸಹೋದರ ಅಭಿನಂದನ್ ಚಿಕ್ಕಬಳ್ಳಾಪುರದ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ನಿನ್ನೆ ಸಂಜೆ ಕಾರಹಳ್ಳಿ ಕ್ರಾಸ್ ಬಳಿಯಿಂದ ದ್ವಿಚಕ್ರ ವಾಹನದಲ್ಲಿ ಊರಿಗೆ ಕರೆತರುವ ವೇಳೆ ಕಣಿವೇಪುರದ ಬಳಿ ಜೆಸಿಬಿ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಹರ್ಷ ಸ್ಥಳದಲ್ಲೇ ಸಾವನ್ನಪ್ಪಿದ್ದು, ತಮ್ಮ ಅಭಿನಂದನ್ ಗೆ ಗಾಯಗಳಾಗಿ, ಆಸ್ಪತ್ರೆಗೆ ದಾಖಲಿಸಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ಸಂಭವಿಸಿದೆ.