ದೊಡ್ಡಬಳ್ಳಾಪುರ: ನಗರದ ಶ್ರೀ ಸೋಮೇಶ್ವರ ದೇವಾಲಯದಲ್ಲಿ ಇಂದು ದೊಡ್ಡಬಳ್ಳಾಪುರ ತಾಲ್ಲೂಕು ಮುಜರಾಯಿ ದೇವಾಲಯಗಳ ಅರ್ಚಕರ – ಆಗಮಿಕರ ಸಂಘದ ವತಿಯಿಂದ ಕ್ಯಾಲೆಂಡರ್ ಬಿಡುಗಡೆ (Calendar released) ಕಾರ್ಯಕ್ರಮ ಆಯೋಜಿಸಲಾಗಿತ್ತು.

ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಮುಜರಾಯಿ ತಹಸೀಲ್ದಾರ್ ಜಿ. ಜೆ. ಹೇಮಾವತಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಮುಜರಾಯಿ ಸಹಾಯಕ ಆಯುಕ್ತರಾದ ನಾಮದೇವ್, ತಹಸೀಲ್ದಾರ್ ಮಲ್ಲಪ್ಪ, ಗೌರವಾಧ್ಯಕ್ಷ ಎಂ.ವಿ.ಶ್ರೀನಿವಾಸಯ್ಯ, ತಾಲ್ಲೂಕು ಅಧ್ಯಕ್ಷ ಕೆ. ವಿ. ಸುರೇಶ್ ಮೂರ್ತಿ, ಮುಜರಾಯಿ ಗುಮಾಸ್ತ ಚೇತನ್ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಜರಿದ್ದರು.