
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸಾರ್ವತ್ರಿಕ ಚುನಾವಣೆ (Bashettihalli election) ಮತ ಎಣಿಕೆ ಕಾರ್ಯ ನಡೆಯುತ್ತಿದೆ.
ಬೆಳಗ್ಗೆ 8 ಗಂಟೆಯಿಂದ ಆರಂಭವಾದ ಮತ ಎಣಿಕೆ ಕಾರ್ಯದಲ್ಲಿ ಸಮಯ 9.10ರ ವರದಿ ಅನ್ವಯ 9 ವಾರ್ಡ್ ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು, 1 ವಾರ್ಡ್ ಕಾಂಗ್ರೆಸ್ ಅಭ್ಯರ್ಥಿ ಹಾಗೂ 1 ವಾರ್ಡ್ನಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
1ನೇ ವಾರ್ಡ್‌ನಲ್ಲಿ ಬಿಜೆಪಿ ಅಭ್ಯರ್ಥಿ ಶ್ವೇತ ಮುರುಳೀಧರ್.
2ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ಪ್ರೇಮ್ ಕುಮಾರ್.
3ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ವೇಣುಗೋಪಾಲ್.
4ನೇ ವಾರ್ಡ್ ಪಕ್ಷೇತರ ಅಭ್ಯರ್ಥಿ ಶ್ರೀನಿವಾಸ್ ರೆಡ್ಡಿ.
5ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ರಾಮಮೂರ್ತಿ. 6ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ಭಾಗ್ಯಮ. 11ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ಕೃಷ್ಣಪ್ಪ.
12ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ನಾರಾಯಣಸ್ವಾಮಿ.
13ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ಲೀಲಾ ಮಹೇಶ್.
15ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ಅಂಬುಜಾಕ್ಷಿ.
16ನೇ ವಾರ್ಡ್ ಕಾಂಗ್ರೆಸ್ ಅಭ್ಯರ್ಥಿ ಪುಷ್ಪ. ವಿಜೇತರಾಗಿರುವುದಾಗಿ ತಿಳಿದುಬಂದಿದೆ. (ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.)
ದೊಡ್ಡಬಳ್ಳಾಪುರ ನಗರಸಭೆ ಉಪಚುನಾವಣೆ
ದೊಡ್ಡಬಳ್ಳಾಪುರ ನಗರಸಭೆಯ ವಾರ್ಡ್ ನಂಬರ್ 21ರ ಹೇಮಾವತಿ ಪೇಟೆಗೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಜಿ.ಜೆ.ನವೀನ್ ವಿಜೇತರಾಗಿದ್ದಾರೆ.
ಬೆಳಗ್ಗೆ 11 ರೊಳಗೆ ಸಂಪೂರ್ಣ ಫಲಿತಾಂಶ ಸಾಧ್ಯತೆ
ಬೆಳಗ್ಗೆ 8 ಗಂಟೆಗೆ ಆರಂಭವಾಗಿರುವ ಮತ ಎಣಿಕೆ, ಮೊದಲ ಸುತ್ತಿನಲ್ಲಿ ಒಂದು ವಾರ್ಡ್ಗೆ ಮತ ಎಣಿಕೆಗೆ 15 ನಿಮಿಷಗಳ ಕಾಲ ಪಡೆಯಲಿದ್ದು, ಎರಡನೇ ಸುತ್ತಿನ ಬಳಿಕ ತೀವ್ರಗತಿಯಲ್ಲಿ ನಡೆದು ಸುಮಾರು 10.30 ಅಥವಾ 11 ರ ಒಳಗಾಗಿ ಫಲಿತಾಂಶ ಪ್ರಕಟವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ (Bashettihalli town panchayat election) ರಚನೆಯಾದ ನಂತರ ಇದೇ ಪ್ರಥಮ ಬಾರಿಗೆ ನಡೆದ ಚುನಾವಣೆಯಲ್ಲಿ ಶೇ.81.34 ರಷ್ಟು ಮತದಾನ ನಡೆದಿತ್ತು.
4 ವರ್ಷಗಳ ಬಳಿಕ ಚುನಾವಣೆ
ಗ್ರಾಮ ಪಂಚಾಯಿಂದ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿದ ನಾಲ್ಕು ವರ್ಷಗಳ ನಂತರ ಚುನಾವಣೆ ನಡೆದಿದ್ದರಿಂದ ಎಲ್ಲಾ ವಯೋಮಾನದ ಮತದಾರರು ಉತ್ಸಾಹದಿಂದಲೇ ಮತಗಟ್ಟೆಗಳ ಕಡೆಗೆ ಬಂದು ಮತಚಲಾಯಿಸಿದ್ದಾರೆ.