
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸಾರ್ವತ್ರಿಕ ಚುನಾವಣೆ (Bashettihalli election) ಮತ ಎಣಿಕೆ ಬಹುತೇಕ ಕಾರ್ಯ ಪೂರ್ಣಗೊಂಡಿದೆ.
ಬೆಳಗ್ಗೆ 8 ಗಂಟೆಯಿಂದ ಆರಂಭವಾದ 19 ವಾರ್ಡ್ ಗಳ ಮತ ಎಣಿಕೆ ಕಾರ್ಯದಲ್ಲಿ 9.45 ಗಂಟೆ ವರದಿ ಅನ್ವಯ 14ವಾರ್ಡ್ ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು, 3 ವಾರ್ಡ್ ಗಳಲ್ಲಿ ಕಾಂಗ್ರೆಸ್ ತಲಾ 1 ವಾರ್ಡ್‌ಗಳಲ್ಲಿ ಜೆಡಿಎಸ್, ಪಕ್ಷೇತರ 1 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
1ನೇ ವಾರ್ಡ್‌ನಲ್ಲಿ ಬಿಜೆಪಿ ಅಭ್ಯರ್ಥಿ ಶ್ವೇತ ಮುರುಳೀಧರ್.
2ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ಪ್ರೇಮ್ ಕುಮಾರ್.
3ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ವೇಣುಗೋಪಾಲ್.
4ನೇ ವಾರ್ಡ್ ಪಕ್ಷೇತರ ಅಭ್ಯರ್ಥಿ ಶ್ರೀನಿವಾಸ್ ರೆಡ್ಡಿ.
5ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ರಾಮಮೂರ್ತಿ.
6ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ಭಾಗ್ಯಮ.
7ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ಮಧುಕುಮಾರ್.
8ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ಮುನಿಶಂಕರ್.
9 ನೇ ವಾರ್ಡ್ ಅಭ್ಯರ್ಥಿ ಜೆಡಿಎಸ್ ಚಂದನ ಎನ್.
10ನೇ ವಾರ್ಡ್ ಕಾಂಗ್ರೆಸ್ ಅಭ್ಯರ್ಥಿ ಅರುಣ್ ಕುಮಾರ್.
11ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ಕೃಷ್ಣಪ್ಪ.
12ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ನಾರಾಯಣಸ್ವಾಮಿ.
13ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ಲೀಲಾ ಮಹೇಶ್.
14ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ಪ್ರೇಮ್ ಕುಮಾರ್.
15ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ಅಂಬುಜಾಕ್ಷಿ.
16ನೇ ವಾರ್ಡ್ ಕಾಂಗ್ರೆಸ್ ಅಭ್ಯರ್ಥಿ ಪುಷ್ಪ.
17ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ಕೆ.ನೇತ್ರಾ ಮಧುಕುಮಾರ್.
18ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ರಾಧಾಮಣಿ.
19ನೇ ವಾರ್ಡ್ ಕಾಂಗ್ರೆಸ್ ಅಭ್ಯರ್ಥಿ ದಾಕ್ಷಾಯಿಣಿ ವಿಜೇತರಾಗಿರಾಗಿದ್ದಾರೆ.
ದೊಡ್ಡಬಳ್ಳಾಪುರ ನಗರಸಭೆ ಉಪಚುನಾವಣೆ
ದೊಡ್ಡಬಳ್ಳಾಪುರ ನಗರಸಭೆಯ ವಾರ್ಡ್ ನಂಬರ್ 21ರ ಹೇಮಾವತಿ ಪೇಟೆಗೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಜಿ.ಜೆ.ನವೀನ್ ವಿಜೇತರಾಗಿದ್ದಾರೆ.
ನಿರೀಕ್ಷೆಗೂ ಮುನ್ನ ಫಲಿತಾಂಶ
ಬೆಳಗ್ಗೆ 8 ಗಂಟೆಗೆ ಆರಂಭವಾದ ಮತ ಎಣಿಕೆ, ತೀವ್ರಗತಿಯಲ್ಲಿ ನಡೆದು ನಿರೀಕ್ಷೆಗೂ ಮುನ್ನವೇ ಫಲಿತಾಂಶ ದೊರೆತಿದೆ.
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ (Bashettihalli town panchayat election) ರಚನೆಯಾದ ನಂತರ ಇದೇ ಪ್ರಥಮ ಬಾರಿಗೆ ನಡೆದ ಚುನಾವಣೆಯಲ್ಲಿ ಶೇ.81.34 ರಷ್ಟು ಮತದಾನ ನಡೆದಿತ್ತು.
4 ವರ್ಷಗಳ ಬಳಿಕ ಚುನಾವಣೆ
ಗ್ರಾಮ ಪಂಚಾಯಿಂದ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿದ ನಾಲ್ಕು ವರ್ಷಗಳ ನಂತರ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ.
ಸಂಭ್ರಮಾಚರಣೆ
ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಬಿಜೆಪಿ ಅಭ್ಯರ್ಥಿಗಳು, ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟುದ್ದು, ಶಾಸಕ ಧೀರಜ್ ಮುನಿರಾಜು ಅವರೊಂದಿಗೆ ಪಕ್ಷದ ಭಾವುಟ ಹಿಡಿದು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.