ಹಿರಿಯೂರು; ರಾಜ್ಯದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) ಮೃತರ ಸಂಖ್ಯೆ 17 ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊಲ್ಲಡ್ಕು ಗ್ರಾಮದ ರಾಷ್ಡೀಯ ಹೆದ್ದಾರಿ ಕೆ.ಆರ್ ಹಳ್ಳಿ ಗೊರ್ಲತ್ತು ಬಳಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಹೊತ್ತಿ ಉರಿದ ಪರಿಣಾಮ 17 ಕ್ಕೂ ಪ್ರಯಾಣಿಕರು ಸಾವನ್ನಪ್ಪಿದ್ದಾರೆ..
ಬೆಂಗಳೂರಿನಿಂದ ಶಿವಮೊಗ್ಗ ಮಾರ್ಗವಾಗಿ ಗೋಕರ್ಣಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಲಾರಿ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಬಸ್ ನಲ್ಲಿದ್ದ 17 ಕ್ಕೂ ಹೆಚ್ಚು ಜನರು ಸಜೀವ ದಹನವಾಗಿದ್ದಾರೆ.
ಇನ್ನೂ ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಗಾಯಗೊಂಡವರನ್ನು ಬೆಂಗಳೂರು, ಸಿರಾ, ತುಮಕೂರು ಮತ್ತು ಹಿರಿಯೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಇನ್ನೂ ಘಟನೆ ಕುರಿತು ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ದಿಗ್ಭ್ರಮೆ ವ್ಯಕ್ತಪಡಿಸಿದ್ದು, ಮೃತರಿಗೆ ಸಂತಾಪ ಸೂಚಿಸಿದ್ದಾರೆ.
ಪರಿಹಾರ ಘೋಷಣೆ
ಚಿತ್ರದುರ್ಗದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.50,000 ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು, ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸೂಚಿಸಿದ್ದೇನೆ. ಈ ಬಗ್ಗೆ ತನಿಖೆ ನಡೆಸಿ, ಅಪಘಾತಕ್ಕೆ ಕಾರಣ ಪತ್ತೆ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು.
ಘಟನೆಯಲ್ಲಿ ಗಾಯಗೊಂಡವರು ಆದಷ್ಟು ಶೀಘ್ರ ಗುಣಮುಖರಾಗಲಿ ಹಾಗೂ ಮೃತರ ಆತ್ಮಕ್ಕೆ ಶಾಂತಿ ಲಭಿಸಲಿ ಎಂದು ಮತ್ತೊಮ್ಮೆ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಚಿತ್ರದುರ್ಗದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.50,000 ಪರಿಹಾರ ನೀಡಲಾಗುವುದು.
— Siddaramaiah (@siddaramaiah) December 25, 2025
ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು, ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸೂಚಿಸಿದ್ದೇನೆ. ಈ ಬಗ್ಗೆ ತನಿಖೆ ನಡೆಸಿ, ಅಪಘಾತಕ್ಕೆ ಕಾರಣ ಪತ್ತೆ ಮಾಡಿ ಅಗತ್ಯ ಕ್ರಮ…