Congress came to power in the state by stealing votes; H.D. Kumaraswamy makes serious allegations

ಮದ್ಯದ ಅಂಗಡಿಗಳಿಗೆ ಪರವಾನಗಿ ನೆಪದಲ್ಲಿ ಕೋಟಿ ಕೋಟಿ ಸುಲಿಗೆ: ಹೆಚ್.ಡಿ. ಕುಮಾರಸ್ವಾಮಿ ನೇರ ಆರೋಪ

ದಾವಣಗೆರೆ: ರಾಜ್ಯ ಸರ್ಕಾರವು ಗ್ಯಾರಂಟಿಗಳಿಗೆ ಹಣ ಹೊಂದಿಸಿಕೊಳ್ಳಲು, ಖಾಲಿ ಆಗಿರುವ ಖಜಾನೆಯನ್ನು ಭರ್ತಿ ಮಾಡಿಕೊಳ್ಳಲು ಮದ್ಯದ ಅಂಗಡಿಗಳಿಗೆ ಪರವಾನಗಿ ನೀಡುವ ನೆಪದಲ್ಲಿ ಸುಲಿಗೆ ಮಾಡುತ್ತಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ಗಂಭೀರ ಆರೋಪಿಸಿದರು.

ದಾವಣಗೆರೆಯಲ್ಲಿ ಗುರುವಾರ ದಿವಂಗತ ಶಾಮನೂರು ಶಿವಶಂಕರಪ್ಪ ಅವರ ಸ್ಮೃತಿ ಸ್ಥಳಕ್ಕೆ ತೆರಳಿ ನಮನ ಸಲ್ಲಿಸಿದ ನಂತರ ಕೇಂದ್ರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು.

ಮದ್ಯದಂಗಡಿ ಪರವಾನಗಿ ಒಂದಕ್ಕೆ ₹ 1.95 ಕೋಟಿ ದರವನ್ನು ರಾಜ್ಯ ಸರ್ಕಾರ ನಿಗದಿ ಮಾಡಿದೆ. ಇದು ಲೂಟಿನಲ್ಲೇ ಮತ್ತೇನು? ಜನರಿಗೆ ಇನ್ನು ದೊಡ್ಡ ಪ್ರಮಾಣದಲ್ಲಿ ಕುಡಿತದ ಚಟ ಹತ್ತಿಸಲು ಸರ್ಕಾರವೇ ಉತ್ತೇಜನ ನೀಡುತ್ತಿದೆ. ಇದೇ ರೀತಿ ಪ್ರತಿಯೊಂದು ಇಲಾಖೆಯನ್ನು ಲೂಟಿ ಮಾಡುತ್ತಿದೆ ಎಂದು ಕುಮಾರಸ್ವಾಮಿ ಅವರು ಆರೋಪ ಮಾಡಿದರು.

ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಎಸ್‌ಪಿ) ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ (ಟಿಎಸ್‌ಪಿ) ಸೇರಿದಂತೆ ವಿವಿಧ ಯೋಜನೆಗಳ ಹಣ, ಅನುದಾನವನ್ನು ರಾಜ್ಯ ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ.

ಎಷ್ಟು ಸಾಧ್ಯವೋ ಅಷ್ಟರ ಮಟ್ಟಿಗೆ ರಾಜ್ಯದ ಖಾಜಾನೆಯನ್ನು ಕೊಳ್ಳೆ ಹೊಡೆಯಲಾಗುತ್ತಿದೆ. ಮದ್ಯದಂಗಡಿ ಹರಾಜು ಮೂಲಕ ಸುಳಿಗೆಬಿಡೆಯುವುದು ರಾಜ್ಯ ಸರ್ಕಾರವು ಜನತೆಗೆ ನೀಡುತ್ತಿರುವ ಹೊಸ ವರ್ಷದ ಕೊಡುಗೆ’ ಎಂದು ಎಂದು ಕೇಂದ್ರ ಸಚಿವರು ಲೇವಡಿ ಮಾಡಿದರು.

ಗೃಹಲಕ್ಷ್ಮೀ ಯೋಜನೆಯಲ್ಲಿ ಮಹಿಳೆಯರ ಖಾತೆಗೆ ಜಮಾ ಆಗಬೇಕಾದ ₹5000 ಕೋಟಿ ಎಲ್ಲಿ ಹೋಯಿತು ಎಂದು ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈವರೆಗೂ ಜನತೆಗೆ ಮಾಹಿತಿ ಕೊಟ್ಟಿಲ್ಲ. ನನಗೆ ಈ ವಿಷಯವೇ ಗೊತ್ತಿಲ್ಲ ಎಂದು ಸಿಎಂ ಅವರೇ ಹೇಳುತ್ತಾರೆ.

ದಾಖಲೆಯ ಬಜೆಟ್ ಗಳನ್ನು ಮಂಡಿಸಿರುವ ಆವರೆಗೆ ತಮ್ಮ ಇಲಾಖೆಯಲ್ಲಿ ಏನು ನಡೆಯುತ್ತಿದೆ? ಹಣ ಏನಾಗಿದೆ ಎಂಬ ಬಗ್ಗೆ ಮಾಹಿತಿ ಇಲ್ಲ. ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ್ದಾಗಿ ಹೇಳಿಕೊಳ್ಳುವ ಇವರಂತಹ ಆರ್ಥಿಕ ತಜ್ಞರವನ್ನು ಪ್ರಪಂಚದಲ್ಲಿಯೇ ಕಾಣಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವರು ವ್ಯಂಗ್ಯವಾಡಿದರು.

ರಾಜ್ಯದಲ್ಲಿ ಅಭಿವೃದ್ಧಿ ಪಾತಾಳಕ್ಕೆ ಬಿದ್ದಿದೆ. ಕೇವಲ ಗ್ಯಾರಂಟಿ ಅಂತ ಹೇಳಿಕೊಂಡು ಎರಡೂವರೆ ವರ್ಷ ಆಡಳಿತ ನಡೆಸಿದ್ದಾರೆ. ರಾಜ್ಯದ ರಸ್ತೆಗಳನ್ನು ನೋಡಿದರೆ ಇವರ ಆಡಳಿತದ ಹಣೆಬರಹ ಗೊತ್ತಾಗುತ್ತದೆ. ಅಧಿಕಾರ ಹಂಚಿಕೆ ಕಿತ್ತಾಟದಲ್ಲಿಯೇ ಸಿಎಂ, ಡಿಸಿಎಂ ಇಷ್ಟು ದಿನ ಕಾಲಹರಣ ಮಾಡಿದ್ದಾರೆ. ಇವರನ್ನು ಜನರು ಕ್ಷಮಿಸುವುದಿಲ್ಲ ಎಂದು ಕೇಂದ್ರ ಸಚಿವರು ಟೀಕಾ ಪ್ರಹಾರ ನಡೆಸಿದರು.

ಶಾಮನೂರು ಶಿವಶಂಕರಪ್ಪ ಅವರಿಗೆ ನಮನ

ಇದಕ್ಕೂ ಮುನ್ನ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಇತ್ತೀಚಿಗೆ ಅಗಲಿದ ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ ಅವರ ಸಮಾಧಿ ಸ್ಥಳಕ್ಕೆ ತೆರಳಿ ನಮನ ಸಲ್ಲಿಸಿದರು.

ಬಳಿಕ ಶಾಮನೂರು ಅವರ ನಿವಾಸಕ್ಕೆ ತೆರಳಿ ಅವರ ಪುತ್ರ, ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಅವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಅವರ ಕುಟುಂಬ ಸದಸ್ಯರೆಲ್ಲರೂ ಹಾಜರಿದ್ದರು.

ತದನಂತರ ಕೇಂದ್ರ ಸಚಿವರು ಮಾಜಿ ಶಾಸಕ ಶಿವಶಂಕರ್ ಅವರ ನಿವಾಸಕ್ಕೆ ಭೇಟಿ ನೀಡಿದರು.

ಮಾಜಿ ಮಂತ್ರಿ ಸಾ.ರಾ. ಮಹೇಶ್, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಬೋಜೇಗೌಡರು, ವಿಧಾನ ಪರಿಷತ್ ಮಾಜಿ ಸದಸ್ಯ ಹೆಚ್.ಎಂ. ರಮೇಶ್ ಗೌಡ ಮುಂತಾದವರು ಕೇಂದ್ರ ಸಚಿವರ ಜತೆಯಲ್ಲಿದ್ದರು.

ರಾಜಕೀಯ

ಬಿಜೆಪಿ-ಜೆಡಿಎಸ್ ಮೈತ್ರಿ: ಪಕ್ಷ ಉಳಿಸಲು ಹೆಚ್.ಡಿ. ದೇವೇಗೌಡರ ತೀಕ್ಷ್ಣ ಸಂದೇಶ

ಬಿಜೆಪಿ-ಜೆಡಿಎಸ್ ಮೈತ್ರಿ: ಪಕ್ಷ ಉಳಿಸಲು ಹೆಚ್.ಡಿ. ದೇವೇಗೌಡರ ತೀಕ್ಷ್ಣ ಸಂದೇಶ

ಕರ್ನಾಟಕದಲ್ಲಿ ಲೋಕಸಭೆ, ವಿಧಾನಸಭೆಗಷ್ಟೇ ಬಿಜೆಪಿ (BJP), ಜೆಡಿಎಸ್ (JDS) ಮೈತ್ರಿ ಆಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ ಎಂದು ಮಾಜಿ ಪ್ರಧಾನಿಗಳು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡ (H.D.

[ccc_my_favorite_select_button post_id="117875"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆ..!

ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆ..!

ಇದೇ ತಿಂಗಳ 15 ರಂದು ಕಾಣೆಯಾಗಿದ್ದ ಬಾಲಕನ ಶವ ತಾಲೂಕಿನ ತೂಬಗೆರೆ ಹೋಬಳಿಯ ಸಾಧುಮಠ ರಸ್ತೆಯ ಬಳಿ ಪತ್ತೆಯಾಗಿದೆ (Missing boy found dead)

[ccc_my_favorite_select_button post_id="117857"]
ಅಪಘಾತ: 4 ಯುವಕರ ಸಾವು ಪ್ರಕರಣ.. ಸಿಎಂ ಪರಿಹಾರ ಘೋಷಣೆ

ಅಪಘಾತ: 4 ಯುವಕರ ಸಾವು ಪ್ರಕರಣ.. ಸಿಎಂ ಪರಿಹಾರ ಘೋಷಣೆ

ಅಜ್ಜವಾರ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ನಾಲ್ವರು ಯುವಕರು ಸಾವಿಗೀಡಾದ ವಿಚಾರ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="117854"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!