A head-on accident between a bike and a tipper lorry

ಒಂದೇ ಬೈಕಿನಲ್ಲಿ 4 ಯುವಕರ ಪ್ರಯಾಣ: ಯಮ ಸ್ವರೂಪಿಯಂತೆ ಅಡ್ಡ ಬಂದ ಟಿಪ್ಪರ್ ಲಾರಿ..

ಚಿಕ್ಕಬಳ್ಳಾಪುರ: ಅವರಿಬ್ಬರೂ ಅಣ್ಣತಮ್ಮಂದಿರು ಹಾಗೂ ಅವರ ಜೊತೆಗೆ ಇಬ್ಬರು ಸ್ನೇಹಿತರು ನಾಲ್ವರು ಸೇರಿ ಜಿಲ್ಲಾ ಕೇಂದ್ರದಿಂದ ಒಂದೇ ಬೈಕಿನಲ್ಲಿ ಊರಿನತ್ತ ಹೊರಟಿದ್ದರು. ಆದರೆ ದುರದೃಷ್ಟವಶಾತ್ ಎಂಬಂತೆ ಹೆದ್ದಾರಿಯಲ್ಲಿ ಯಮಸ್ವರೂಪಿ ಯಂತೆ ಅಡ್ಡ ಬಂದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿಯಾಗಿ (Accident) ಒಂದೇ ಗ್ರಾಮದ ನಾಲ್ವರು ಯುವಕರು ಸ್ಥಳದಲ್ಲಿ ದುರ್ಮರಣಕ್ಕೆ ಈಡಾಗಿದ್ದಾರೆ. ಘಟನೆಯಿಂದ ಗ್ರಾಮದಲ್ಲಿ ಸೂತಕದ ವಾತಾವರಣ ಆವರಿಸಿದೆ.

ಹೌದು ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ನಡೆದಿದೆ.

ಅಜ್ಜವಾರ ಗ್ರಾಮದ ಅಣ್ಣ ತಮ್ಮಂದಿರಾದ ನರಸಿಂಹಮೂರ್ತಿ ಹಾಗೂ ನಂದೀಶ್ ಸೇರಿದಂತೆ ಅರುಣ್ ಹಾಗೂ ಮನೋಜ್ ಮೃತರು.

ಅಂದಹಾಗೆ ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಈ ನಾಲ್ವರು ಚಿಕ್ಕಬಳ್ಳಾಪುರ ನಗರದ ಚರ್ಚ್ ಗಳಿಗೆ ಭೇಟಿ ನೀಡಿ ಮರಳಿ ಸ್ವಗ್ರಾಮದತ್ತ ಹೊರಟಿದ್ದರು.

ಮೃತ ನಾಲ್ವರು ಯುವಕರು ಸಹ ನರಸಿಂಹಮೂರ್ತಿಗೆ ಸೇರಿದ ಸಿಟಿ 100 ಬೈಕಿನಲ್ಲಿ ಹೊರಟಿದ್ದು, ಇನ್ನೇನು ಅಜ್ಜವಾರ ಗ್ರಾಮಕ್ಕೆ ಹೈವೆಯಿಂದ ಬಲತಿರುವು ಪಡೆದುಕೊಳ್ಳಬೇಕಿತ್ತು. ಆದ್ರೆ ಅಷ್ಟರಲ್ಲೇ ಯಮಸ್ವರೂಪಿಯಂತೆ ಟಿಪ್ಪರ್ ಲಾರಿ ಅಡ್ಡ ಬಂದಿದ್ದು ಮುಖಾಮುಖಿ ಡಿಕ್ಕಿಯಾಗಿದೆ. ಇದರಿಂದ ನಾಲ್ವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ.

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಆದ ಪರಿಣಾಮ ಸಿಟಿ 100 ಬೈಕ್ ಸಂಪೂರ್ಣ ನಜಗುಜ್ಜಾಗಿದೆ. ಘಟನೆಯಲ್ಲಿ ಮೃತಪಟ್ಟ ನಾಲ್ವರು ಸ್ನೇಹಿತರಾಗಿದ್ದಾರೆ. ನಾಲ್ವರಲ್ಲಿ ನಂದೀಶ್ ಹಾಗೂ ನರಸಿಂಹಮೂರ್ತಿ ಇಬ್ಬರು ಅಣ್ಣ-ತಮ್ಮಂದಿರಾಗಿದ್ದು, ಇಬ್ಬರು ಮಕ್ಕಳನ್ನ ಕಳೆದುಕೊಂಡಿರುವ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ.

ಮತ್ತೊಂದೆಡೆ ಮೃತ ನರಸಿಂಹಮೂರ್ತಿ ಕಳೆದ ಆರು ತಿಂಗಳ ಹಿಂದೆಯಷ್ಟೇ, ಪ್ರೇಮ ವಿವಾಹವಾಗಿದ್ದ. ಅಪಘಾತದ ವಿಚಾರ ತಿಳಿದು ನವವಿವಾಹಿತ ನರಸಿಂಹಮೂರ್ತಿ ಪತ್ನಿ ಚೈತ್ರಾ ಸಹ ಆಘಾತಕ್ಕೆ ಗುರಿಯಾಗಿದ್ದಾಳೆ.

ಇನ್ನು ಅಪಘಾತದ ವಿಚಾರ ತಿಳಿದು ಸ್ಥಳಕ್ಕೆ ಎಸ್ ಪಿ ಕುಶಲ್ ಚೌಕ್ಸಿ ಹಾದಿಯಾಗಿ ಚಿಕ್ಕಬಳ್ಳಾಪುರ ಪೊಲೀಸರು ಭೇಟಿ ಮಾಡಿ ಮೃತ ದೇಹಗಳನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಿದ್ದಾರೆ.

ಅಪಘಾತ ನಂತರ ಟಿಪ್ಪರ್ ಚಾಲಕ ಎಸ್ಕೇಪ್ ಆಗಿದ್ದು, ಸದ್ಯ ಟಿಪ್ಪರ್ ಅನ್ನು ವಶಕ್ಕೆ ಪಡೆದಿರುವ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಚಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ.

ಒಟ್ನಲ್ಲಿ ಒಂದೇ ಗ್ರಾಮದ ನಾಲ್ವರು ಯುವಕರ ಸಾವಿನಿಂದ ಇಡೀ ಗ್ರಾಮದಲ್ಲಿ ಸೂತಕದ ವಾತಾವರಣ ಮನೆ ಮಾಡಿದೆ.

ರಾಜಕೀಯ

ಬಿಜೆಪಿ-ಜೆಡಿಎಸ್ ಮೈತ್ರಿ: ಪಕ್ಷ ಉಳಿಸಲು ಹೆಚ್.ಡಿ. ದೇವೇಗೌಡರ ತೀಕ್ಷ್ಣ ಸಂದೇಶ

ಬಿಜೆಪಿ-ಜೆಡಿಎಸ್ ಮೈತ್ರಿ: ಪಕ್ಷ ಉಳಿಸಲು ಹೆಚ್.ಡಿ. ದೇವೇಗೌಡರ ತೀಕ್ಷ್ಣ ಸಂದೇಶ

ಕರ್ನಾಟಕದಲ್ಲಿ ಲೋಕಸಭೆ, ವಿಧಾನಸಭೆಗಷ್ಟೇ ಬಿಜೆಪಿ (BJP), ಜೆಡಿಎಸ್ (JDS) ಮೈತ್ರಿ ಆಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ ಎಂದು ಮಾಜಿ ಪ್ರಧಾನಿಗಳು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡ (H.D.

[ccc_my_favorite_select_button post_id="117875"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆ..!

ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆ..!

ಇದೇ ತಿಂಗಳ 15 ರಂದು ಕಾಣೆಯಾಗಿದ್ದ ಬಾಲಕನ ಶವ ತಾಲೂಕಿನ ತೂಬಗೆರೆ ಹೋಬಳಿಯ ಸಾಧುಮಠ ರಸ್ತೆಯ ಬಳಿ ಪತ್ತೆಯಾಗಿದೆ (Missing boy found dead)

[ccc_my_favorite_select_button post_id="117857"]
ಅಪಘಾತ: 4 ಯುವಕರ ಸಾವು ಪ್ರಕರಣ.. ಸಿಎಂ ಪರಿಹಾರ ಘೋಷಣೆ

ಅಪಘಾತ: 4 ಯುವಕರ ಸಾವು ಪ್ರಕರಣ.. ಸಿಎಂ ಪರಿಹಾರ ಘೋಷಣೆ

ಅಜ್ಜವಾರ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ನಾಲ್ವರು ಯುವಕರು ಸಾವಿಗೀಡಾದ ವಿಚಾರ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="117854"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!