ಒಂದೇ ಬೈಕಿನಲ್ಲಿ 4 ಯುವಕರ ಪ್ರಯಾಣ: ಯಮ ಸ್ವರೂಪಿಯಂತೆ ಅಡ್ಡ ಬಂದ ಟಿಪ್ಪರ್ ಲಾರಿ..

A head-on accident between a bike and a tipper lorry

ಚಿಕ್ಕಬಳ್ಳಾಪುರ: ಅವರಿಬ್ಬರೂ ಅಣ್ಣತಮ್ಮಂದಿರು ಹಾಗೂ ಅವರ ಜೊತೆಗೆ ಇಬ್ಬರು ಸ್ನೇಹಿತರು ನಾಲ್ವರು ಸೇರಿ ಜಿಲ್ಲಾ ಕೇಂದ್ರದಿಂದ ಒಂದೇ ಬೈಕಿನಲ್ಲಿ ಊರಿನತ್ತ ಹೊರಟಿದ್ದರು. ಆದರೆ ದುರದೃಷ್ಟವಶಾತ್ ಎಂಬಂತೆ ಹೆದ್ದಾರಿಯಲ್ಲಿ ಯಮಸ್ವರೂಪಿ ಯಂತೆ ಅಡ್ಡ ಬಂದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿಯಾಗಿ (Accident) ಒಂದೇ ಗ್ರಾಮದ ನಾಲ್ವರು ಯುವಕರು ಸ್ಥಳದಲ್ಲಿ ದುರ್ಮರಣಕ್ಕೆ ಈಡಾಗಿದ್ದಾರೆ. ಘಟನೆಯಿಂದ ಗ್ರಾಮದಲ್ಲಿ ಸೂತಕದ ವಾತಾವರಣ ಆವರಿಸಿದೆ.

ಹೌದು ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ನಡೆದಿದೆ.

ಅಜ್ಜವಾರ ಗ್ರಾಮದ ಅಣ್ಣ ತಮ್ಮಂದಿರಾದ ನರಸಿಂಹಮೂರ್ತಿ ಹಾಗೂ ನಂದೀಶ್ ಸೇರಿದಂತೆ ಅರುಣ್ ಹಾಗೂ ಮನೋಜ್ ಮೃತರು.

ಅಂದಹಾಗೆ ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಈ ನಾಲ್ವರು ಚಿಕ್ಕಬಳ್ಳಾಪುರ ನಗರದ ಚರ್ಚ್ ಗಳಿಗೆ ಭೇಟಿ ನೀಡಿ ಮರಳಿ ಸ್ವಗ್ರಾಮದತ್ತ ಹೊರಟಿದ್ದರು.

ಮೃತ ನಾಲ್ವರು ಯುವಕರು ಸಹ ನರಸಿಂಹಮೂರ್ತಿಗೆ ಸೇರಿದ ಸಿಟಿ 100 ಬೈಕಿನಲ್ಲಿ ಹೊರಟಿದ್ದು, ಇನ್ನೇನು ಅಜ್ಜವಾರ ಗ್ರಾಮಕ್ಕೆ ಹೈವೆಯಿಂದ ಬಲತಿರುವು ಪಡೆದುಕೊಳ್ಳಬೇಕಿತ್ತು. ಆದ್ರೆ ಅಷ್ಟರಲ್ಲೇ ಯಮಸ್ವರೂಪಿಯಂತೆ ಟಿಪ್ಪರ್ ಲಾರಿ ಅಡ್ಡ ಬಂದಿದ್ದು ಮುಖಾಮುಖಿ ಡಿಕ್ಕಿಯಾಗಿದೆ. ಇದರಿಂದ ನಾಲ್ವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ.

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಆದ ಪರಿಣಾಮ ಸಿಟಿ 100 ಬೈಕ್ ಸಂಪೂರ್ಣ ನಜಗುಜ್ಜಾಗಿದೆ. ಘಟನೆಯಲ್ಲಿ ಮೃತಪಟ್ಟ ನಾಲ್ವರು ಸ್ನೇಹಿತರಾಗಿದ್ದಾರೆ. ನಾಲ್ವರಲ್ಲಿ ನಂದೀಶ್ ಹಾಗೂ ನರಸಿಂಹಮೂರ್ತಿ ಇಬ್ಬರು ಅಣ್ಣ-ತಮ್ಮಂದಿರಾಗಿದ್ದು, ಇಬ್ಬರು ಮಕ್ಕಳನ್ನ ಕಳೆದುಕೊಂಡಿರುವ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ.

ಮತ್ತೊಂದೆಡೆ ಮೃತ ನರಸಿಂಹಮೂರ್ತಿ ಕಳೆದ ಆರು ತಿಂಗಳ ಹಿಂದೆಯಷ್ಟೇ, ಪ್ರೇಮ ವಿವಾಹವಾಗಿದ್ದ. ಅಪಘಾತದ ವಿಚಾರ ತಿಳಿದು ನವವಿವಾಹಿತ ನರಸಿಂಹಮೂರ್ತಿ ಪತ್ನಿ ಚೈತ್ರಾ ಸಹ ಆಘಾತಕ್ಕೆ ಗುರಿಯಾಗಿದ್ದಾಳೆ.

ಇನ್ನು ಅಪಘಾತದ ವಿಚಾರ ತಿಳಿದು ಸ್ಥಳಕ್ಕೆ ಎಸ್ ಪಿ ಕುಶಲ್ ಚೌಕ್ಸಿ ಹಾದಿಯಾಗಿ ಚಿಕ್ಕಬಳ್ಳಾಪುರ ಪೊಲೀಸರು ಭೇಟಿ ಮಾಡಿ ಮೃತ ದೇಹಗಳನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಿದ್ದಾರೆ.

ಅಪಘಾತ ನಂತರ ಟಿಪ್ಪರ್ ಚಾಲಕ ಎಸ್ಕೇಪ್ ಆಗಿದ್ದು, ಸದ್ಯ ಟಿಪ್ಪರ್ ಅನ್ನು ವಶಕ್ಕೆ ಪಡೆದಿರುವ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಚಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ.

ಒಟ್ನಲ್ಲಿ ಒಂದೇ ಗ್ರಾಮದ ನಾಲ್ವರು ಯುವಕರ ಸಾವಿನಿಂದ ಇಡೀ ಗ್ರಾಮದಲ್ಲಿ ಸೂತಕದ ವಾತಾವರಣ ಮನೆ ಮಾಡಿದೆ.

ರಾಜಕೀಯ

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಸರ್ಕಾರ ಜನಸಾಮಾನ್ಯರ ನೋವನ್ನು ಅರ್ಥ ಮಾಡಿಕೊಳ್ಳಬೇಕಿತ್ತು. ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ. ಆದಾಯ ಪಾತಳಕ್ಕೆ ಕುಸಿದಿದೆ. ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಕೇಂದ್ರ

[ccc_my_favorite_select_button post_id="121597"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]