ಗುಡ್ಮಾರ್ನಿಂಗ್ ನ್ಯೂಸ್.. ಘಾಟಿ ಬ್ರಹ್ಮರಥೋತ್ಸವ: ಅಚ್ಚುಕಟ್ಟಾದ ವ್ಯವಸ್ಥೆಗೆ ವ್ಯಾಪಕ ಪ್ರಶಂಸೆ

Ghati Brahmarathotsava: Widespread praise for the well-organized arrangements

ಕೆ.ಎಂ.ಸಂತೋಷ್, ಆರೂಢಿ (ದೊಡ್ಡಬಳ್ಳಾಪುರ): ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ (Sri Ghati Subrahmanya Swamy Brahmarathotsava) ಗುರುವಾರ ಶ್ರದ್ಧಾಭಕ್ತಿ, ಸಂಭ್ರಮದಿಂದ ನೆರವೇರಿತು.

ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ ಮತ್ತು ಆಹಾರ ನಾಗರಿಕ ಸರಬರಾಜು,ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಬ್ರಹ್ಮರಥೋತ್ಸವಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು, ಜಿಲ್ಲಾಧಿಕಾರಿ ಎಬಿ ಬಸವರಾಜು, ಸಿಇಒ ಅನುರಾಧ, ಎಸ್ಪಿ ಸಿಕೆ ಬಾಬಾ, ಎಸಿ ದುರ್ಗ ಶ್ರೀ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ರಾಜಣ್ಣ, ತಾಲ್ಲೂಕು ಅಧ್ಯಕ್ಷರಾದ ಜಗನ್ನಾಥ, ಘಾಟಿ ಸುಬ್ರಮಣ್ಯ ಕ್ಷೇತ್ರ ಪ್ರಾಧಿಕಾರದ ಅಧ್ಯಕ್ಷರಾದ ರಂಗಪ್ಪ, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಭಾಗವಹಿಸಿದ್ದರು.

ಗುರುವಾರ ಪ್ರತಃ ಕಾಲ 02:00 ಗಂಟೆಗೆ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ ತೆರೆಯಲಾಗಿದ್ದು, 02:30 ಗಂಟೆಗೆ ಅಭಿಷೇಕ ಪ್ರಾರಂಭವಾಗಿ ಬೆಳಗೆ, 04:30 ಗಂಟೆಗೆ ಮಹಾ ಮಂಗಳಾರತಿ ನೆರಿಸಲಾಯಿತು.

ಬೆಳಗ್ಗೆ, 05:00 ರಿಂದ 06:00 ಗಂಟೆಗಳ ವರೆಗೆ ಸ್ಥಳೀಯರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, 06:00 ಗಂಟೆಯಿಂದ ಭಕ್ತಾಧಿಗಳಿಗಾಗಿ ಧರ್ಮ ದರ್ಶನ ಮತ್ತು ರೂ. 50 ರ ವಿಶೇಷ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.

ಮಧ್ಯಾಹ್ನ 12.10 ಗಂಟೆಯ ಶುಭ ಮೂಹರ್ತದಲ್ಲಿ ಬ್ರಹ್ಮರಥೋತ್ಸವ ನೆರವೇರಿತು. ಕಳೆದ ವರ್ಷ 1.50 ಲಕ್ಷದವರೆಗೂ ಭಕ್ತಾದಿಗಳು ಭಾಗಿಯಾಗಿದ್ದರು. ಆದರೆ ಈ ವರ್ಷ ಭಕ್ತರ ಸಂಖ್ಯೆ ಕಡಿಮೆ ಇದ್ದು, 80 ರಿಂದ ಒಂದು ಲಕ್ಷ ಮಾತ್ರ ಭಕ್ತರು ಭಾಗವಹಿಸಿದ್ದರು ಎನ್ನಲಾಗಿದೆ.

ಅಚ್ಚುಕಟ್ಟಾದ ವ್ಯವಸ್ಥೆ

ಈ ಬಾರಿ ಘಾಟಿ ಬ್ರಹ್ಮರಥೋತ್ಸವವು ರಜೆ ದಿನ ಬಂದಿರುವುದರಿಂದ ಸುಮಾರು ಎರಡು ಲಕ್ಷ ಭಕ್ತಾದಿಗಳು ಬರುವ ನಿರೀಕ್ಷಿಸಲಾಗಿತ್ತು. ಟ್ರಾಫಿಕ್ ಸಮಸ್ಯೆ, ಜನಸಂದಣಿ ನಿಯಂತ್ರಿಸಲು ಹಲವು ಕ್ರಮ ಕೈಗೊಳ್ಳಲಾಗಿತ್ತು.

ಘಾಟಿ ಕ್ಷೇತ್ರಕ್ಕೆ ಆಗಮಿಸಲು ಪ್ರಮುಖವಾಗಿ ಎರಡು ರಸ್ತೆ ಸಂಪರ್ಕಗಳಾದ ಮಾಕಳಿ ಹಾಗೂ ಕಂಟನಕುಂಟೆ ರಸ್ತೆಗಳಲ್ಲಿ ಸ್ವಚ್ಚತೆ ಕಾರ್ಯ, ಫುಟ್ ಪಾತ್ ಒತ್ತುವರಿ ತೆರವು ಮಾಡಲಾಗಿತ್ತು. ಇಲ್ಲಿ ಮೂಲಸೌಕರ್ಯ ವ್ಯವಸ್ಥೆ ಮಾಡಲಾಗಿತ್ತು.

ದೇವಾಲಯ ಸುತ್ತಮುತ್ತಲಿನ ಫುಟ್ ಪಾತ್ ಮೇಲಿನ ಅಂಗಡಿಗಳನ್ನು ತೆರವುಮಾಡಲಾಗಿದ್ದು ಭಕ್ತರ ಸಂಚಾರಕ್ಕೆ ಯಾವುದೇ ಸಮಸ್ಯೆ ಆಗದಂತೆ ಕ್ರಮವಹಿಸಲಾಗಿತ್ತು.

ಭಕ್ತರಿಗೆ ಉಚಿತ ಬಸ್ ವ್ಯವಸ್ಥೆ

ರಥೋತ್ಸವಕ್ಕೆ ಬಂದ ಭಕ್ತಾದಿಗಳ ವಾಹನಗಳಿಗೆ ಕಂಟನಕುಂಟೆ ಮಾರ್ಗ ಹಾಗು ಮಾಕಳಿ ಮಾರ್ಗ ಬಳಿ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಿ, ಅಲ್ಲಿಯೇ ಭಕ್ತಾದಿಗಳು ತಮ್ಮ ವಾಹನಗಳನ್ನು ನಿಲ್ಲಿಸಬೇಕು.

ಪಾರ್ಕಿಂಗ್ ಸ್ಥಳದಿಂದ ದೇವಾಲಯದ ಬಳಿಗೆ ತೆರಳಲು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿತ್ತು. ಭಕ್ತರು ತಮ್ಮ ವಾಹನಗಳನ್ನು ಬಿಟ್ಟು ಆ ಬಸ್ ಗಳ ಮೂಲಕವೇ ಬಂದು ದರ್ಶನ ಪಡೆದು ಮತ್ತೇ ಅದೇ ಬಸ್ ಗಳ ಮೂಲಕ ಮರಳಲು ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗಿತ್ತು.

ದೇವಾಲಯದ ಬಳಿ ವಾಹನ ಸಂಚಾರ ದಟ್ಟಣೆ, ಸಂಚಾರಕ್ಕೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದ್ದು ಯಶಸ್ವಿಯಾಗಿ, ವ್ಯಾಪಕ ಪ್ರಶಂಸೆ ಪಡೆದಿದೆ.

ಸುಂಕ ವಿನಾಯಿತಿ

ಇತ್ತೀಚಿನ ವರ್ಷಗಳಲ್ಲಿ 2026ರ ಜನವರಿ 31 ರವರೆಗೆ ಶ್ರೀ ಕ್ಷೇತ್ರಕ್ಕೆ ಬರುವ ವಾಹನಗಳಿಗೆ ಸುಂಕ ವಿನಾಯಿತಿ ನೀಡಲಾಗಿದೆ.

ಡಿಸೆಂಬರ್ 28 ರವರೆಗೆ ಕ್ಷೇತ್ರದಲ್ಲಿ ವಿಶೇಷ ದೀಪಾಲಂಕಾರ ಮಾಡಲಾಗಿದ್ದು, ಬ್ರಹ್ಮರಥೋತ್ಸವಕ್ಕೆ ಬರುವ ಭಕ್ತರಿಗೆ ಉತ್ತಮ ಅನುಭವ ನೀಡುವ ನಿಟ್ಟಿನಲ್ಲಿ ಅಗತ್ಯಸಿದ್ದತೆ ಮಾಡಿಕೊಳ್ಳಲಾಗಿದೆ.

ಆರೋಗ್ಯ ಇಲಾಖೆ

ಇನ್ನೂ ಆರೋಗ್ಯ ಇಲಾಖೆಯಿಂದ 30 ಸಿಬ್ಬಂದಿಗಳು ನಿಯೋಜನೆ ಮಾಡಲಾಗಿತ್ತು, ಸುಮಾರು 200 ಜನರಿಗೆ ಪ್ರಥಮ ಚಿಕಿತ್ಸೆ ನೀಡಿ, ತೀವ್ರ ಅಸ್ವಸ್ಥರಾದ 6 ಜನರಿಗೆ ಸರ್ಕಾರಿ ಆಸ್ಪತ್ರೆಗೆ ಹಾಗೂ 3 ಜನರಿಗೆ ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ನೀಡಲಾಗಿದೆ.

5 ಅಂಬುಲೆನ್ಸ್ ವಾಹನಗಳ ಜನ ಜಂಗುಳಿ ನಡುವೆ ನಡೆದ quick action ನಡೆಸಿದ್ದು, ಯಾವುದೇ ಅಹಿತಕರ ಘಟನೆ ಸಂಭವಿಸದಿರಲು ಪ್ರಮುಖ ಕಾರಣ ಎನ್ನಬಹುದು.

ಪಾರ್ಕಿಂಗ್ ವ್ಯವಸ್ಥೆ

ಭಕ್ತರ ಕಾರು ಸೇರಿದಂತೆ ಇತರೆ ವಾಹನಗಳಿಗೆ 14 ಪಾರ್ಕಿಂಗ್ ಸ್ಥಳ, ದ್ವಿಚಕ್ರ ವಾಹನಗಳಿಗೆ 4 ಪಾರ್ಕಿಂಗ್ ಸ್ಥಳಗಳನ್ನು ಗುರುತಿಸಲಾಗಿದೆ. ಭದ್ರತೆಗಾಗಿ ಈ ವರ್ಷ 1000 ಮಂದಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ, ಅಗ್ನಿಶಾಮಕ ವಾಹನ ವ್ಯವಸ್ಥೆ ಮಾಡಲಾಗಿತ್ತು.

ಜತೆಗೆ 100 ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು ಅದರ ವೀಕ್ಷಣೆಗೆ ಕಂಟ್ರೋಲ್ ರೂಂ ಕೂಡ ಸ್ಥಾಪಿಸಲಾಗಿತ್ತು.

ಈ ಎಲ್ಲಾ ಅಚ್ಚುಕಟ್ಟಾದ ವ್ಯವಸ್ಥೆ ಮಾಡಿದ ಜಿಲ್ಲಾಡಳಿತ ಟ್ರಾಫಿಕ್ ಮುಕ್ತ ಬ್ರಹ್ಮರಥೋತ್ಸವ ಪಡೆಯಲು ಭಕ್ತರಿಗೆ ನಗರವಾಗಿದ್ದು, ವ್ಯಾಪಕ ಪ್ರಶಂಸೆಗೆ ಕಾರಣವಾಗಿದೆ. ಅಲ್ಲದೆ ಪೊಲೀಸ್ ಹದ್ದಿನ ಕಣ್ಣಿನ ಹಿನ್ನೆಲೆಯಲ್ಲಿ ಯಾವುದೇ ಅಹಿತರ ಘಟನೆಯಾಗಲಿ, ಸರಕಳ್ಳತನ, ಪಿಕ್ ಪ್ಯಾಕೆಟ್ ಮುಂತಾದ ದೂರು ಈ ವರೆಗೂ ವರದಿಯಾಗದೆ ಇರುವುದು ಪ್ರಶಂಸನೀಯ.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]