
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹೆದ್ದಾರಿಯಲ್ಲಿ ತಿರುವು ಪಡೆಯುತ್ತಿದ್ದ ಜೆಸಿಬಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ (Accident) ಕಾರು ತೀವ್ರವಾಗಿ ಜಖಂಗೊಂಡಿರುವ ಘಟನೆ ತಾಲೂಕಿನ ಮೆಣಸಿ ಗೇಟ್ ಬಳಿ ಕೆಲವೇ ಕ್ಷಣಗಳ ಮುಂಚೆ ಸಂಭವಿಸಿದೆ.
ದಾಬಸ್ ಪೇಟೆ ಕಡೆಯಿಂದ ದೊಡ್ಡಬಳ್ಳಾಪುರ ದೇವನಹಳ್ಳಿ ಮಾರ್ಗವಾಗಿ ಬರುತ್ತಿದ್ದ ಕಾರು, ಮೆಣಸಿ ಗೇಟ್ ಬಳಿ ಯೂಟರ್ನ್ ಪಡೆಯುತ್ತಿದ್ದ ಜೆಸಿಬಿಯ ಬಕೇಟ್‌ಗೆ ಡಿಕ್ಕಿ ಹೊಡೆದಿದೆ.
ಪರಿಣಾಮ ಕಾರಿನ ಬಲಭಾಗ ಜಖಂಗೊಂಡಿದೆ. ಅಚ್ಚರಿ ಎಂಬಂತೆ ಕಾರಿನಲ್ಲಿದ್ದ ಚಾಲಕ ಸೇರಿ ನಾಲ್ವರು ಪ್ರಾಣಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗೊಂಡಿದ್ದಾರೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿದೆ.