Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರಿಂದು ಹಣಕಾಸು ವಿಚಾರದಲ್ಲಿ ಎಚ್ಚರದಿಂದಿರಿ

Astrology: ಶನಿವಾರ, ಡಿಸೆಂಬರ್ 27, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ಅತಿಯಾದ ಹಠ ಒಳ್ಳೆಯದಲ್ಲ. ಒತ್ತಡಗಳಿಗೆ ಮಣಿಯುವ ಸನ್ನಿವೇಶಗಳು ಎದುರಾಗಬಹುದು. ಕುಟುಂಬದ ಸಮಸ್ಯೆಗಳು ಉಲ್ಭಣಗೊಳ್ಳ ಬಹುದು. ಪರಿಸ್ಥಿತಿ ಎದುರಿಸಲು ಸಿದ್ಧರಾಗಿ.(ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ

ಹಣದ ಕೊರತೆಯು ಇಂದು ಕುಟುಂಬದಲ್ಲಿನ ಭಿನ್ನಾಭಿಪ್ರಾಯಕ್ಕೆ ಕಾರಣವಾಗ ಬಹುದು. ಇಂತಹ ಪರಿಸ್ಥಿತಿಯಲ್ಲಿ ಇತರ ಕುಟುಂಬ ಸದಸ್ಯರೊಂದಿಗೆ ಮಾತನಾಡುವ ಮೊದಲು ಚೆನ್ನಾಗಿ ಯೋಚಿಸಿ ಮತ್ತು ಅವರಿಂದ ಸಲಹೆ ಪಡೆಯಿರಿ. (ಭಕ್ತಿಯಿಂದ ಶ್ರೀ ಚಾಮುಂಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ

ಈ ದಿನ ನಿಮ್ಮ ಜೀವನವನ್ನು ಹೆಚ್ಚು ಉತ್ಕೃಷ್ಟಗೊಳಿಸಿ. ಚಿಂತೆಯನ್ನು ಮಾಡಬೇಡಿ. ವ್ಯಾಪಾರದಲ್ಲಿನ ಲಾಭವು ಇಂದು ಅನೇಕ ವ್ಯಾಪಾರಿಗಳು ಮತ್ತು ಉದ್ಯಮಿಗಳ ಮುಖದಲ್ಲಿ ಸಂತೋಷವನ್ನು ತರುತ್ತದೆ. ಅನಾರೋಗ್ಯ ಕಾಣಿಸಿ ಕೊಳ್ಳಬಹುದು. ಆರೋಗ್ಯದ ಕಡೆ ಗಮನ ನೀಡಿ. ಕೆಟ್ಟ ಅಭ್ಯಾಸಗಳನ್ನು ತೊಡೆದು ಹಾಕುವುದು ಒಳ್ಳೆಯದು. (ಭಕ್ತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ

ಸಮಸ್ಯೆಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಕೊರಗದಿರಿ. ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಮನಸ್ಸು ಹಗರುವಾಗುತ್ತದೆ. ಸಲಹೆಗಳನ್ನು ಸ್ವೀಕರಿಸಿ. ಇದು ಬಿಕ್ಕಟ್ಟಿನಿಂದ ಹೊರಬರಲು ನಿಮಗೆ ಸಹಾಯ ವಾಗುತ್ತದೆ. (ಭಕ್ತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ

ಶೀಘ್ರದಲ್ಲಿ ಅನಿರೀಕ್ಷಿತ ಶುಭ ಸಮಾಚಾರಗಳು ಕೇಳಿ ಬರಲಿವೆ. ಸಮಸ್ಯೆಗಳೂ ದೂರಾಗಲಿವೆ. ಪ್ರಮುಖ ನಿರ್ಧಾರ ತೆಗೆದುಕೊಳ್ಳಲು ಸೂಕ್ತ ಸಮಯವಿದು. ಆದರೆ ಎಲ್ಲಾ ಆಯಾಮಗಳಲ್ಲೂ ಆಲೋಚಿಸಿ, ಸಮಯ ತೆಗೆದುಕೊಂಡು ನಿರ್ಧಾರ ಕೈಗೊಳ್ಳಿ. (ಭಕ್ತಿಯಿಂದ ಶ್ರೀ ಲಲಿತಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ

ಮನಸ್ಸಿ ಗೊಂದಲಗಳಿಂದ ಒತ್ತಡ ಎದುರಾಗಬಹುದು. ದೇಹ ವಿಶ್ರಾಂತಿ ಬಯಸಬಹುದು. ಆರೋಗ್ಯ ಕಡೆ ಹೆಚ್ಚಿನ ಗಮನ ಕೊಡಿ. ಇತರರ ಬಗ್ಗೆ ಅತಿಯಾದ ಆಲೋಚನೆಗಳು ಒಳ್ಳೆಯದಲ್ಲ. (ಭಕ್ತಿಯಿಂದ ಕುಲದೇವತೆ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ

ಪತ್ನಿ, ಕುಟುಂಬಸ್ಥರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಹೊಸ ಕೆಲಸ, ಯೋಜನೆಗಳನ್ನು ಮುಂದೂಡಿ. ಹಣಕಾಸು ವಿಚಾರದಲ್ಲಿ ಎಚ್ಚರದಿಂದಿರಿ. (ಭಕ್ತಿಯಿಂದ ಶ್ರೀ ಚೌಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ

ಹಣಕಾಸಿನ ವಿಷಯದಲ್ಲಿ ನಿಮ್ಮ ಸ್ವಂತ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಪ್ರತಿಯೊಂದಕ್ಕೂ ಸಾಧ್ಯವಾದಷ್ಟು ಹೆಚ್ಚಿನ ಗಮನವನ್ನು ನೀಡಿ. ಜನರೊಂದಿಗೆ ಸಂಪರ್ಕ ಸಾಧಿಸಲು ಮತ್ತು ಒಪ್ಪಂದಗಳ ಮಾಡಿಕೊಳ್ಳಲು ಒತ್ತು ನೀಡಿ. (ಭಕ್ತಿಯಿಂದ ಶ್ರೀ ಶಕ್ತಿ ಗಣಪತಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ

ನಿರ್ಧಾರಗಳನ್ನು ತೆಗೆದುಕೊಳ್ಳಬೇಕು, ಆದರೆ ಮೊದಲು ಚರ್ಚೆಗಳು ನಡೆಯಬೇಕು. ನೀವು ಇತರರನ್ನು ಸಂಪರ್ಕಿಸದೆ ಮುಂದಕ್ಕೆ ಧಾವಿಸುತ್ತೀರಿ. ಇದರಿಂದ ಮನಸ್ತಾಪಗಳು ಎದುರಾಗಬಹುದು. ಎಚ್ಚರವಿರಲಿ. (ಭಕ್ತಿಯಿಂದ ನವಗ್ರಹದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ಮಕರ ರಾಶಿ

ಮಾಡುವ ಕೆಲಸದಲ್ಲಿ ಶ್ರದ್ಧೆ ಇರಲಿ. ವಿಚಲಿತರಾಗದಿರಿ. ಹೊಸ ಅವಕಾಶಗಳು ನಿಮ್ಮನ್ನು ಹುಡುಕಿಬರ ಬಹುದು ಕೈಚೆಲ್ಲದಿರಿ. ಸಿಕ್ಕ ಉತ್ತಮ ಸಮಯನ್ನು ಸದ್ಬಳಕೆ ಮಾಡಿಕೊಳ್ಳಿ. (ಭಕ್ತಿಯಿಂದ ಶ್ರೀ ಗ್ರಾಮದೇವತೆ ದರ್ಶನ ಮಾಡಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ

ಉದ್ವೇಗಕ್ಕೊಳಗಾಗದಿರಿ. ಇಂದಿನ ಗ್ರಹಗತಿಗಳು ನಿಮ್ಮ ರಾಶಿಯ ಮೇಲೆ ಧನಾತ್ಮಕ ಪ್ರಭಾವ ಬೀರಲಿದೆ. ಒತ್ತಡಗಳು ಎದುರಾದರೂ ಸೂಕ್ತ ರೀತಿಯಲ್ಲಿ ನಿಭಾಯಿಸಲಿದ್ದೀರಿ. (ಭಕ್ತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ

ಜೀವನ ಮುಂದಿನ ಹಾದಿಯ ಸ್ಪಷ್ಟ ಚಿತ್ರಣಗಳು ನಿಮಗೆ ತಿಳಿದಿದೆ. ನಿಮ್ಮ ಹಾದಿಯಲ್ಲಿ ಇತರರು ಬರದಂತೆ ನೋಡಿಕೊಳ್ಳಿ. ಗೊಂದಲಕ್ಕೊಳಕಾಗದಿರಿ. ದೃಢ ನಿರ್ಧಾರವಿರಲಿ. ಮುಂದೆ ದೊಡ್ಡ ಸವಾಲುಗಳು ಎದುರಾಗಲಿದ್ದು, ಅದನ್ನು ಎದುರಿಸಲು ಸಿದ್ಥರಾಗಿರಿ. (ಭಕ್ತಿಯಿಂದ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ಸಪ್ತಮಿ
ನಕ್ಷತ್ರ: ಪೂರ್ವಾಭಾದ್ರ ನಕ್ಷತ್ರ

ರಾಹುಕಾಲ: 09:00AM ರಿಂದ 10:30AM
ಗುಳಿಕಕಾಲ: 06:00AM ರಿಂದ 07:30AM
ಯಮಗಂಡಕಾಲ: 01:30PM ರಿಂದ 03:00PM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಮೋದಿ ಮೇಲೆ ಟ್ರಂಪ್ ಹಿಡಿತ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

ಮೋದಿ ಮೇಲೆ ಟ್ರಂಪ್ ಹಿಡಿತ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

ಮಂಗಳವಾರವಷ್ಟೆ ಕೇಂದ್ರ ಸರ್ಕಾರದ ವೈಪಲ್ಯಗಳು, ಅಮೇರಿಕಾ ಜೊತೆ ಒಪ್ಪಂದದಿಂದ ಭಾರತದ ಮೇಲೆ ಉಂಟಾಗ ಬಹುದಾದ ಪರಿಣಾಮಗಳ ಕುರಿತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ (AKhilesh yadhav), ಮೋದಿ ಸರ್ಕಾರದ ಕುರಿತು ಹರಿಹಾಯ್ದಿದ್ದ ಬೆನ್ನಲ್ಲೇ,

[ccc_my_favorite_select_button post_id="119331"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು

ಆರ್.ಎಲ್. ಜಾಲಪ್ಪ (R.L. Jalapppa) ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಗೌತಮಿ .ಬಿ ಹಾಗೂ ಹೇಮಾ .ಬಿ ವಿ ಅವರು ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ (All India Ball Badminton Competition) ವಿಶ್ವೇಶ್ವರಯ್ಯ

[ccc_my_favorite_select_button post_id="119295"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!