ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಅವರು ರಾಜ್ಯದ ವಿಚಾರದಲ್ಲಿ ಹಸ್ತಕ್ಷೇಪ ಮಾಡಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್

Pinarayi Vijayan should not interfere in the state's affairs without knowing the truth: DCM D.K. Shivakumar

ಬೆಂಗಳೂರು: “ಕೋಗಿಲು ಬಡಾವಣೆಯಲ್ಲಿ ಅಕ್ರಮ ಒತ್ತುವರಿ ಪ್ರದೇಶ ನೆಲಸಮಗೊಳಿಸಿರುವ ಪ್ರಕರಣದಲ್ಲಿ ಸತ್ಯಾಸತ್ಯತೆ ಅರಿಯದೇ ಕೇರಳ ಸಿಎಂ ಪಿಣರಾಯಿ ವಿಜಯನ್ (Pinarayi Vijayan) ಅವರು ಹಸ್ತಕ್ಷೇಪ ಮಾಡಬಾರದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.

ಕೋಗಿಲು ಬಡಾವಣೆ ಅಕ್ರಮ ಒತ್ತುವರಿ ಸಂಬಂಧ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಕರ್ನಾಟಕದಲ್ಲಿ ಬುಲ್ಡೋಜರ್ ರಾಜ್ ನಡೆಯುತ್ತಿದೆ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, ಪಿಣರಾಯಿ ವಿಜಯನ್ ರಂತಹ ಹಿರಿಯ ನಾಯಕರು ಸತ್ಯಾಸತ್ಯತೆ ಅರಿಯದೇ ಮಾತನಾಡಿರುವುದು ದುರಾದೃಷ್ಟಕರ.

ಬೆಂಗಳೂರಿನ ವಿಚಾರ ಏನು ಎಂದು ಅವರು ತಿಳಿಯಬೇಕು. ಈ ಜಾಗ ಘನತ್ಯಾಜ್ಯ ವಿಲೇವಾರಿ ಮಾಡುವ ಕ್ವಾರಿ ಪಿಟ್ ಆಗಿದೆ. ಈ ಪ್ರದೇಶದಲ್ಲಿ ಅನೇಕ ಆರೋಗ್ಯ ಸಂಬಂಧಿತ ಸಮಸ್ಯೆಗಳಿವೆ. ಕೆಲವರು ಕಾನೂನುಬಾಹಿರವಾಗಿ ಆ ಜಾಗವನ್ನು ಅತಿಕ್ರಮಣ ಮಾಡಿದ್ದಾರೆ.

ನಮಗೂ ಮಾನವೀಯತೆ ಇದೆ. ಅವರಿಗೆ ಬೇರೆ ಜಾಗಗಳಿಗೆ ಹೋಗಲು ಸರ್ಕಾರ ಹಾಗೂ ಸ್ಥಳೀಯ ಶಾಸಕರು ಅವಕಾಶ ನೀಡಿದ್ದೆವು. ಅಲ್ಲಿದ್ದವರ ಪೈಕಿ ಕೆಲವರು ಮಾತ್ರ ಸ್ಥಳೀಯರಾಗಿದ್ದು ಉಳಿದವರು ಏಕಾಏಕಿ ಅತಿಕ್ರಮಣ ಮಾಡಿದ್ದಾರೆ. ಇದು ಘನತ್ಯಾಜ್ಯ ವಿಲೇವಾರಿ ಘಟಕವಾಗಿದ್ದು 9 ವರ್ಷಗಳ ಹಿಂದೆಯೇ ಅಧಿಸೂಚನೆ ಹೊರಡಿಸಲಾಗಿದೆ.

ಪಿಣರಾಯಿ ಅವರಂತಹ ನಾಯಕರು ಇಂತಹ ವಿಚಾರದಲ್ಲಿ ಹಸ್ತಕ್ಷೇಪ ಮಾಡಬಾರದು. ನಮಗೆ ಬೆಂಗಳೂರು ಬಗ್ಗೆ ಚೆನ್ನಾಗಿ ಗೊತ್ತಿದೆ. ಲ್ಯಾಂಡ್ ಮಾಫಿಯಾದವರು ಸ್ಲಂಗಳನ್ನು ನಿರ್ಮಿಸಲು ನಾವು ಬಿಡುವುದಿಲ್ಲ. ನಾವು ನಮ್ಮ ಭೂಮಿಯನ್ನು ರಕ್ಷಣೆ ಮಾಡಿಕೊಳ್ಳುತ್ತೇವೆ. ಅವರಲ್ಲಿ ಯಾರೆಲ್ಲಾ ಅರ್ಹರಿದ್ದಾರೆ, ಅವರಿಗೆ ರಾಜೀವ್ ಗಾಂಧಿ ಯೋಜನೆಯಲ್ಲಿ ಮನೆಗಳನ್ನು ನೀಡಲು ಬದ್ಧವಾಗಿದ್ದೇವೆ ಎಂದು ತಿಳಿಸಿದರು.

ಪ್ರಕರಣದ ಸತ್ಯಾಸತ್ಯತೆ ತಿಳಿಯದೇ ಪಿಣರಾಯಿ ಅವರು ಈ ರೀತಿ ಮಾತನಾಡಬಾರದು ಎಂದು ಮನವಿ ಮಾಡುತ್ತೇನೆ. ಬುಲ್ಡೋಜರ್ ಸಂಸ್ಕೃತಿ ನಮ್ಮಲ್ಲಿ ಇಲ್ಲ. ನಗರದ ಹೃದಯ ಭಾಗದಲ್ಲಿರುವ ಸರ್ಕಾರಿ ಜಮೀನನ್ನು ರಕ್ಷಣೆ ಮಾಡಿಕೊಳ್ಳಲಾಗಿದೆ.

ತ್ಯಾಜ್ಯ ವಿಲೇವಾರಿ ಘಟಕಕ್ಕೆ ನಿಗದಿಯಾಗಿರುವ ಜಾಗವನ್ನು ಒತ್ತುವರಿ ಮಾಡಿಕೊಳ್ಳಲು ಬಿಡುವುದಿಲ್ಲ. ಈ ಬಗ್ಗೆ ನಮ್ಮ ಪಕ್ಷ ಹಾಗೂ ಕೇರಳದ ನಾಯಕರಿಗೆ ವರದಿ ರವಾನೆ ಮಾಡುತ್ತೇನೆ ಎಂದರು.

ಬೆಂಗಳೂರು ಬೇರೆ ನಗರಗಳಂತೆ ಅಲ್ಲ. ನಮ್ಮಲ್ಲಿ ಹೆಚ್ಚು ಕೊಳಗೇರಿ ಪ್ರದೇಶಗಳಿಲ್ಲ. ಹೊಸದಾಗಿ ಕೊಳಗೇರಿ ಪ್ರದೇಶ ನಿರ್ಮಾಣ ಮಾಡಲು ಬಿಡುವುದಿಲ್ಲ. ಇದು ಸಚಿವ ಕೃಷ್ಣ ಭೈರೇಗೌಡ ಅವರ ಕ್ಷೇತ್ರವಾಗಿದ್ದು, ಅವರು ಬಹಳ ಹಿರಿಯ ನಾಯಕರಿದ್ದು, ಅವರು ಅಧಿಕಾರಿಗಳ ಜೊತೆ ಮಾತನಾಡಿದ್ದಾರೆ. ಜಾಗ ಖಾಲಿ ಇದೆ ಎಂದು ಏಕಾಏಕಿ ಗುಡಿಸಲು ಹಾಕಿಕೊಳ್ಳಲು ಆಗುವುದಿಲ್ಲ.

ಇದು ಅಲ್ಪಸಂಖ್ಯಾತರು ಅಥವಾ ಬೇರೆ ವಿಚಾರವಲ್ಲ. ಯಾರಿಗಾದರೂ ಜಾಗ ಬೇಕಾಗಿದ್ದರೆ ಅವರು ಅರ್ಹರಾಗಿದ್ದರೆ ಅವರಿಗೆ ಸರ್ಕಾರ ವಸತಿ ನೀಡಲಿದೆ. ಬೇರೆ ಸರ್ಕಾರಗಳು ಜನರಿಗೆ ಮನೆ ಕಟ್ಟಿಕೊಡಲು ಸಾಧ್ಯವಾಗಿರಲಿಲ್ಲ. ಸಿಎಂ, ವಸತಿ ಸಚಿವರಾದ ಜಮೀರ್ ಅಹ್ಮದ್ ಸೇರಿದಂತೆ ನಮ್ಮ ಸರ್ಕಾರ ಬಡವರಿಗೆ ಲಕ್ಷಾಂತರ ಮನೆ ನಿರ್ಮಾಣ ಮಾಡಿದೆ. ಅರ್ಹರಿಗೆ ನಾವು ಸೂಕ್ತ ರೀತಿಯಲ್ಲಿ ಪುನರ್ವಸತಿ ಕಲ್ಪಿಸುತ್ತೇವೆ ಎಂದು ಸ್ಪಷ್ಟನೆ ನೀಡಿದರು.

“ಪಿಣರಾಯಿ ಅವರ ಹೇಳಿಕೆ ಬೆನ್ನಲ್ಲೇ ಕೆಲವರು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಇದೆಲ್ಲವೂ ರಾಜಕೀಯ ಹೇಳಿಕೆ ಹಾಗೂ ರಾಜಕೀಯ ಪ್ರೇರಿತ ಪ್ರತಿಭಟನೆಗಳು. ಸತ್ಯಾಸತ್ಯತೆ ಅರಿಯದೇ ನಮ್ಮ ರಾಜ್ಯದ ವಿಚಾರದಲ್ಲಿ ಹಸ್ತಕ್ಷೇಪ ಮಾಡಬಾರದು. ಚುನಾವಣೆ ಸಮಯದಲ್ಲಿ ಇಂತಹ ರಾಜಕೀಯ ಗಿಮಿಕ್ ಮಾಡುತ್ತಿದ್ದಾರೆ” ಎಂದರು.

ಅಕ್ರಮವಾಗಿ ನೆಲಸಿರುವವರಿಗೆ ಅರ್ಹತೆ ಇದೆಯೇ ಎಂದು ಕೇಳಿದಾಗ, “ಯಾರೆಲ್ಲಾ ಕರ್ನಾಟಕದಲ್ಲಿ ವಾಸವಿದ್ದು, ದಾಖಲೆ ಹೊಂದಿದ್ದಾರೋ ಅವರಿಗೆ ರಾಜ್ಯದ ಕಾನೂನಿನಂತೆ ಅಗತ್ಯ ನೆರವು ನೀಡಲಾಗುವುದು. ಈ ಕುರಿತು ಸ್ಪಷ್ಟ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ” ಎಂದು ತಿಳಿಸಿದರು.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]