If the cabinet is expanded, D.K. Shivakumar will be given Panganama: R. Ashoka

ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲ: ಆರ್. ಅಶೋಕ

ಬೆಂಗಳೂರು: ರಾಜ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ನಮ್ಮ ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka) ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರ ಪೊಲೀಸರಿಂದ ಬೆಂಗೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿಗಳು ಪತ್ತೆ ಕಾರ್ಯಚರಣೆ ವರದಿ ಕುರಿತು ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿರುವ ಅವರು, ಬೆಳಗಾವಿ ಅಧಿವೇಶನದಲ್ಲಿ ಇದರ ಬಗ್ಗೆ ಪ್ರಸ್ತಾಪ ಮಾಡಿದ ಸಂದರ್ಭದಲ್ಲಿ “ಡ್ರಗ್ಸ್ ದಂಧೆ ಎಲ್ಲ ರಾಜ್ಯಗಳಲ್ಲಿಯೂ ಇದೆ” ಎಂದು ಇದರ ಗಂಭೀರತೆ ಅರಿಯದೆ ಗೃಹ ಸಚಿವ ಡಾ.ಪರಮೇಶ್ವರ್ ಅವರು ಉಡಾಫೆ ಉತ್ತರ ಕೊಟ್ಟಿದ್ದರು.

ಕಳೆದ ಜುಲೈನಲ್ಲಿ ಮೈಸೂರಿನಲ್ಲಿ ಡ್ರಗ್ಸ್‌ ತಯಾರಿಕಾ ಘಟಕ ಪತ್ತೆ ಹಚ್ಚಿ, ಸುಮಾರು 390 ಕೋಟಿ ರು. ಮೌಲ್ಯದ 192 ಕೆ.ಜಿ. ಮೆಫೆಡ್ರೋನ್ ಡ್ರಗ್ಸ್ ವಶಪಡಿಸಿಕೊಂಡಿದ್ದ ಮಹಾರಾಷ್ಟ್ರ ಪೊಲೀಸರು ಇದೀಗ ಬೆಂಗಳೂರಿನ 3 ಡ್ರಗ್ಸ್‌ ಫ್ಯಾಕ್ಟರಿ ಮೇಲೆ ನಡೆಸಿ 56 ಕೋಟಿ ರು. ಮೌಲ್ಯದ ಡ್ರಗ್ಸ್‌ ವಶಪಡಿಸಿಕೊಂಡಿದ್ದಾರೆ.

ಶೌರ್ಯ, ಸಾಹಸ, ದಕ್ಷತೆಗೆ ಹೆಸರುವಾಸಿಯಾಗಿದ್ದ ಕರ್ನಾಟಕ ಪೊಲೀಸ್ ಇಲಾಖೆ ಕಾಂಗ್ರೆಸ್ ಸರ್ಕಾರದ ಅಸಮರ್ಥತೆಯಿಂದ ನಿತ್ರಾಣವಾಗಿದೆ.

ಕರ್ನಾಟಕದಲ್ಲಿ ನಡೆಯುತ್ತಿರುವ ಡ್ರಗ್ಸ್ ದಂಧೆ ಪತ್ತೆ ಹಚ್ಚಲು, ಡ್ರಗ್ಸ್ ದಂಧೆಕೋರರನ್ನು ಹಾಕಲು ಮಹಾರಾಷ್ಟ ಪೊಲೀಸರು ಬರಬೇಕಾದರೆ ಕರ್ನಾಟಕದ ಪೊಲೀಸ್ ಇಲಾಖೆ ಏನು ಮಾಡುತ್ತಿದೆ? ರಾಜ್ಯದ ಗುಪ್ತಚರ ಇಲಾಖೆ ಏನು ಮಾಡುತ್ತಿದೆ?

ಯುವ ಜನಾಂಗದ ಭವಿಷ್ಯಕ್ಕೆ ಮಾರವಾಗಿರುವ ಈ ಡ್ರಗ್ಸ್ ದಂಧೆಯನ್ನ ಅತ್ಯಂತ ಗಂಭೀರವಾಗಿ ಪರಿಗಣಿಸಿ ಇದಕ್ಕೆ ಕಡಿವಾಣ ಹಾಕಲು ಕೂಡಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ಕೊಡುತ್ತಿದ್ದೇನೆ ಎಂದಿದ್ದಾರೆ.

ರಾಜಕೀಯ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಂಜಾರ ಸಮಾಜವನ್ನೇ ಟಾರ್ಗೆಟ್ ಮಾಡುತ್ತಿರುವುದು ಎಲ್ಲರಿಗು ಗೊತ್ತಿರುವ ವಿಚಾರ; ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="119679"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಖಾಸಗಿ ಕಾರ್ಯಕ್ರಮದಲ್ಲಿ ನಡೆಸಲಾಗುತ್ತಿದ್ದ ರಘು ದೀಕ್ಷಿತ್ ( Raghu Dixit) ಅವರ ಸಂಗೀತ ಸಂಜೆ ವೇಳೆ ಕಿಡಿಗೇಡಿಗಳ ಉಪಟಳದಿಂದ ಬಾಲಕ ಕಾಲು ಮುರಿದಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119672"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!