ದೊಡ್ಡಬಳ್ಳಾಪುರ: ಭಾನುವಾರ ರಾತ್ರಿ ಸಂಭವಿಸಿದ ಎರಡು ರಸ್ತೆ ಅಪಘಾತ (Accident) ಪ್ರಕರಣಗಳಲ್ಲಿ ಓರ್ವ ಸಾವನಪ್ಪಿ, 5 ಮಂದಿ ಗಾಯಗೊಂಡಿರುವ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.
ಬೈಕ್ ಸವಾರ ಸ್ಥಳದಲ್ಲಿಯೇ ಸಾವು
ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ದುರ್ಗದ ಬಳಿ ಮುಂದೆ ಸಾಗುತ್ತಿದ್ದ ಸಿಮೆಂಟ್ ಬಲ್ಕರ್ ಲಾರಿಗೆ ಹಿಂದಿನಿಂದ ದ್ವಿಚಕ್ರ ವಾಹನದ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲಿಯೇ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿದ್ದಾನೆ.
ಮೃತನನ್ನು ತೆಲಂಗಾಣ ರಾಜ್ಯದ ಪರಗಿ ಮೂಲದ ಪವನ್ (21 ವರ್ಷ) ಎಂದು ಗುರುತಿಸಲಾಗಿದ್ದು, ಅದೇ ಮೂಲದ ಅಶೋಕ್ ಎನ್ನುವವರು ಗಾಯಗೊಂಡು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಿಂತಿದ್ದ ಲಾರಿಗೆ ಕಾರು ಡಿಕ್ಕಿ..!
ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವನಿಗೆ ತೀವ್ರ ಗಾಯಗಳಾಗಿರುವ ಘಟನೆ ತಾಲೂಕಿಮ ಫಾಕ್ಸಕಾನ್ ಕಂಪನಿ ಸಮೀಪದ ರಾಷ್ಟ್ರೀಯ ಹೆದ್ದಾರಿ ಬಳಿ ಸಂಭವಿಸಿದೆ.
ಫಾಕ್ಸಕಾನ್ ಕಡೆಯಿಂದ ಬಂದ ಕಾರು ದೇವನಹಳ್ಳಿ ಕಡೆ ತೆರಳಲು ತಿರುವು ಪಡೆಯುವ ವೇಳೆ, ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಕಾರು ತೀವ್ರವಾಗಿ ಜಖಂಗೊಂಡಿದ್ದು, ಕಾರಿನಲ್ಲಿದ್ದ ನಾಲ್ವರಲ್ಲಿ ಓರ್ವನ ಕೈಗೆ ಗಂಭೀರ ಗಾಯವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ.