Rs. 25 crore for each assembly constituency: Cmsiddaramaiah

ಸಿಎಂ‌ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಇಂದು ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೇ ಯೋಜನೆಗಳ ಭೂಸ್ವಾಧಿನ ಕುರಿತು ನಡೆಸಿದ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.

ಸಭೆಯ ಮುಖ್ಯಾಂಶಗಳು:

  1. 2023-24 ರಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನ ಯೋಜನೆಯಡಿ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ತಲಾ ರೂ.25 ಕೋಟಿಯಂತೆ ಒಟ್ಟು ರೂ. 3510 ಕೋಟಿ ಬಿಡುಗಡೆಗೆ ಅನುಮೋದನೆ ನೀಡಲಾಗಿತ್ತು.

ಇದರಲ್ಲಿ ಈಗಾಗಲೇ ರೂ. 2040 ಕೋಟಿ ಮೊತ್ತದಲ್ಲಿ ಶೇ.58ರಷ್ಟು ಕಾಮಗಾರಿಗಳು ಪೂರ್ಣಗೊಂಡಿದ್ದು, ರೂ.920 ಕೋಟಿ ವೆಚ್ಚ ಭರಿಸಲಾಗಿದೆ.

ಇನ್ನೂ ರೂ. 1205 ಕೋಟಿ ಬಿಡುಗಡೆ ಮಾಡಲು ಬೆಳಗಾವಿ ವಿಧಾನ ಮಂಡಲದ ಅಧಿವೇಶನದ ಸಂದರ್ಭದಲ್ಲಿ ಆದೇಶ ನೀಡಲಾಗಿದೆ.

ಅನುಷ್ಠಾನ ಪೂರ್ಣಗೊಂಡಿರುವ ಕಾಮಗಾರಿಗಳ ಬಿಲ್ಲುಗಳನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

  1. 2024-25ರಲ್ಲಿ ಮಳೆ ಹಾನಿಯಿಂದ ಉಂಟಾದ ರಸ್ತೆ ದುರಸ್ತಿಗಾಗಿ ರೂ.1890 ಕೋಟಿ ಮೊತ್ತಕ್ಕೆ ಅನುಮೋದನೆ ನೀಡಲಾಗಿದ್ದು, ರೂ.250 ಕೋಟಿ ಬಿಡುಗಡೆ ಮಾಡಲಾಗಿದೆ.
  2. ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 2025-26 ನೇ ಸಾಲಿನಲ್ಲಿ ರೂ. 8666.50 ಕೋಟಿ ಅನುಮೋದನೆ ನೀಡಲಾಗಿದ್ದು, ಈಗಾಗಲೇ ರೂ.1 ಸಾವಿರ ಕೋಟಿ ಬಿಡುಗಡೆ ಮಾಡಲಾಗಿದೆ.
  3. ಎಲ್ಲಾ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಿ, ಅನುದಾನ ಪಾವತಿಸುವುದು ಆಯಾ ಜಿಲ್ಲಾಧಿಕಾರಿಗಳ ಜವಾಬ್ದಾರಿಯಾಗಿದೆ.

ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಆಗಬಾರದು. ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲಾ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ಮಾಡಬೇಕು ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.

  1. 2024-25 ನೇ ಸಾಲಿನಲ್ಲಿ 205 ವಿಧಾನಸಭಾ ಕ್ಷೇತ್ರಗಳಿಗೆ ಮುಖ್ಯಮಂತ್ರಿ ವಿಶೇಷ ಅನುದಾನ ಯೋಜನೆಯಡಿ ಒಟ್ಟು ರೂ. 8666.50 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ.

ಇನ್ನು ಬಾಕಿಯಿರುವ 19 ಕ್ಷೇತ್ರಗಳಿಂದ ಪ್ರಸ್ತಾವನೆಗಳನ್ನು ಪಡೆದ ಬಳಿಕ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು. ಎಲ್ಲಾ ಟೆಂಡರ್‌ ಪ್ರಕ್ರಿಯೆಗಳನ್ನು ಜನವರಿ 10ರೊಳಗಾಗಿ ಪೂರ್ಣಗೊಳಿಸಲು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ಮೂಲಸೌಲಭ್ಯ ಅಭಿವೃದ್ಧಿ, (ರೈಲ್ವೇ ಮತ್ತು ವಿಮಾನ ನಿಲ್ದಾಣ)

  1. ರೈಲ್ವೇ ಕಾಮಗಾರಿಗಳಿಗೆ ಬಾಕಿಯಿರುವ ಭೂಸ್ವಾಧೀನ ಪ್ರಕ್ರಿಯೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು.

ಕುಡಚಿ-ಬಾಗಲಕೋಟೆ, ತುಮಕೂರು-ದಾವಣಗೆರೆ, ಬೇಲೂರು-ಹಾಸನ, ಶಿವಮೊಗ್ಗ-ರಾಣೆಬೆನ್ನೂರು, ಧಾರವಾಡ-ಬೆಳಗಾವಿ ರೈಲ್ವೇ ಮಾರ್ಗಗಳ ನಿರ್ಮಾಣ ಕಾಮಗಾರಿ ನಿಗದಿತ ಅವಧಿಯೊಳಗಾಗಿ ಕೈಗೊಳ್ಳಲು ಎಲ್ಲಾ ಅಗತ್ಯ ಪ್ರಕ್ರಿಯೆಗಳನ್ನು ತ್ವರಿತಗೊಳಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ರಾಜಕೀಯ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಂಜಾರ ಸಮಾಜವನ್ನೇ ಟಾರ್ಗೆಟ್ ಮಾಡುತ್ತಿರುವುದು ಎಲ್ಲರಿಗು ಗೊತ್ತಿರುವ ವಿಚಾರ; ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="119679"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಖಾಸಗಿ ಕಾರ್ಯಕ್ರಮದಲ್ಲಿ ನಡೆಸಲಾಗುತ್ತಿದ್ದ ರಘು ದೀಕ್ಷಿತ್ ( Raghu Dixit) ಅವರ ಸಂಗೀತ ಸಂಜೆ ವೇಳೆ ಕಿಡಿಗೇಡಿಗಳ ಉಪಟಳದಿಂದ ಬಾಲಕ ಕಾಲು ಮುರಿದಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119672"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!