ದೊಡ್ಡಬಳ್ಳಾಪುರ: ಕಾಳು ಮಾತ್ರೆ ಸೇವಿಸಿ ವ್ಯಕ್ತಿಯೋರ್ವ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಹುಡ್ಯದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಮೃತನನ್ನು 37 ವರ್ಷದ ಮಂಜುನಾಥ್ ಎಂದು ಗುರುತಿಸಲಾಗಿದೆ.
ಮದುವೆಯಾಗಿ ಇಬ್ಬರು ಮಕ್ಕಳನ್ನು ಹೊಂದಿದ್ದ ಮಂಜುನಾಥ್, ಕಳೆದ ರಾತ್ರಿ ಕಾಳು ಮಾತ್ರೆ ಸೇವಿಸಿದ್ದಾರೆ. ಕೂಡಲೇ ಸಂಬಂಧಿಕರು ಆಸ್ಪತ್ರೆಗೆ ಸೇರಿಸಿದರಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಕಾರ್ಮಿಕರಾಗಿದ್ದ ಮಂಜುನಾಥ್ ಅವರ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.