ವೈಕುಂಠ ಏಕಾದಶಿ: ದೊಡ್ಡಬಳ್ಳಾಪುರದ ವಿಷ್ಣು ದೇವಾಲಯಗಳಲ್ಲಿ ಭಕ್ತರ ದಂಡು| Video ನೋಡಿ

Vaikunta Ekadashi: Crowds of devotees throng Vishnu temples in Doddaballapur

ದೊಡ್ಡಬಳ್ಳಾಪುರ; ಇಂದು ವೈಕುಂಠ ಏಕಾದಶಿ (Vaikunta Ekadashi) ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಅಂತೆಯೇ ತಾಲೂಕಿನ ವೆಂಕಟರಮಣಸ್ವಾಮಿ, ರಂಗನಾಥಸ್ವಾಮಿ, ವೇಣುಗೋಪಾಲಸ್ವಾಮಿ ಮೊದಲಾದ ಪ್ರಮುಖ ದೇವಾಲಯಗಳಲ್ಲಿ ವೈಕುಂಠ ಏಕಾದಶಿಯ ಅಂಗವಾಗಿ ವಿಶೇಷ ಅಲಂಕಾರ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ದೊಡ್ಡಬಳ್ಳಾಪುರ ನಗರದ ತೇರಿನಬೀದಿಯ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಸ್ವಾಮಿಗೆ ವಿಶೇಷ ಅಲಂಕಾರ ಹಾಗೂ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಬೆಳಗಿನ ಜಾವದಿಂದಲೇ ಸಾವಿರಾರು ಭಕ್ತಾದಿಗಳು ಭಕ್ತಾದಿಗಳು ದೇವಾಲಯದ ಸಾಲುಗಟ್ಟಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ.

ವೈಕುಂಠ ಏಕಾದಶಿಯಂದು ದೇವರ ದರ್ಶನ ಮಾಡಿದರೆ ಸಾಕ್ಷಾತ್ ವೈಕುಂಠ ದರ್ಶನವೇ ಪ್ರಾಪ್ತಿಯಾಗುತ್ತದೆ ಎನ್ನುವ ನಂಬಿಕೆಯಿಂದ ಭಕ್ತಾದಿಗಳು ಉತ್ತರಾಭಿಮುಖದ ವೈಕುಂಠ ದ್ವಾರದ ಮೂಲಕ ಹಾದು ದರ್ಶನ ಪಡೆಯುತ್ತಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ವಡ್ಡರಹಳ್ಳಿಯ ಶ್ರೀ ತಿರುಮಲ ಕಲ್ಯಾಣ ಶ್ರೀನಿವಾಸ ದೇವರ ದೇವಾಲಯದಲ್ಲಿ ವಿಶೇಷ ವೈಕುಂಠ ಅಲಂಕಾರ ಮಾಡಲಾಗಿದೆ.. ಸಹಸ್ರಾರು ಭಕ್ತಾದಿಗಳು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ.

ನಗರದ ಮುಖ್ಯರಸ್ತೆಯ ವೈಕುಂಠ ಜನಾರ್ಧನ ಸ್ವಾಮಿ, ಗಾಂಧಿನಗರದ ಖಿಲ್ಲೆ ವೇಣುಗೋಪಾಲಸ್ವಾಮಿ ದೇವಾಲಯ, ಕೆರೆಬಾಗಿಲು ರಸ್ತೆಯಲ್ಲಿರುವ ವೇಣುಗೋಪಾಲಸ್ವಾಮಿ ದೇವಾಲಯ, ಏಳುಸುತ್ತಿನ ಕೋಟೆಯ ಶ್ರೀ ನಾರಾಯಣ ಮಂದಿರ, ನರಸಿಂಹಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗುತ್ತಿವೆ‌

ತೂಬಗೆರೆಯ ಪುರಾತನ ಪ್ರಸಿದ್ದ ಶ್ರೀ ಪ್ರಸನ್ನ ಲಕ್ಷ್ಮಿವೆಂಕಟರಮಣಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿದೆ.

ಪಾಲ್ಪಾಲ್ ದಿನ್ನೆಯ ವಿಶ್ವ ಕಲ್ಯಾಣ ವೆಂಕಟೇಶ್ವರ ದೇವಾಲಯ, ಗುಟ್ಟೆ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದಲ್ಲಿ ಮುಂಜಾನೆಯಿಂದಲೇ ವಿಶೇಷ ಅಲಂಕಾರ ಅಭಿಷೇಕ ಪೂಜಾ ಕಾರ್ಯಕ್ರಮಗಳು ನಡೆಯುತ್ತಿವೆ.

ಹೆಗ್ಗಡಿಹಳ್ಳಿ ಶ್ರೀದೇವಿ ಭೂದೇವಿ ಸಮೇತ ಶ್ರೀ ವೆಂಕಟರಮಣಸ್ವಾಮಿ, ಗುಟ್ಟೆ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯಗಳಲ್ಲಿ ವೈಕುಂಠ ಏಕಾದಶಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ವೈಕುಂಠ ಏಕಾದಶಿ: ದೊಡ್ಡಬಳ್ಳಾಪುರದ ವಿಷ್ಣು ದೇವಾಲಯಗಳಲ್ಲಿ ಭಕ್ತರ ದಂಡು| Video ನೋಡಿ

ರಾಜಕೀಯ

ಕಾಂಗ್ರೆಸ್ ಕುಟುಂಬ ಆಧಾರಿತ ಪಕ್ಷ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಕುಟುಂಬ ಆಧಾರಿತ ಪಕ್ಷ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ನಲ್ಲಿ (Congress) ಸೋನಿಯಾ ಗಾಂಧಿ (Soniya Gandhi), ರಾಹುಲ್ ಗಾಂಧಿ, ಪ್ರಿಯಾಕಾಂ ಗಾಂಧಿ (Rahul Gandhi) ಮನಸ್ಸು ಯಾರು ಗೆಲ್ಲುತ್ತಾರೆ ಅವರು ಸಿಎಂ ಆಗುತ್ತಾರೆ. ಇದು ಪ್ರಜಾಪಭುತ್ವದ ವ್ಯವಸ್ಥೆಗೆ ನಾಚಿಗೇಡಿನ ಸಂಗತಿ ಎಂದು

[ccc_my_favorite_select_button post_id="121658"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]