ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಶಿಕ್ಷಕರ ಕ್ಷೇತ್ರದ (Teachers’ constituency) ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು ಶಿಕ್ಷಕರು ತಮ್ಮ ವ್ಯಾಪ್ತಿಯ ಸಂಬಂಧಪಟ್ಟ ಸರ್ಕಾರಿ ಕಚೇರಿಗಳಲ್ಲಿ ಪರಿಶೀಲಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎ.ಬಿ ಬಸವರಾಜು (A.B. Basavaraju) ತಿಳಿಸಿದ್ದಾರೆ.
ಬೆಂಗಳೂರು ಶಿಕ್ಷಕರ ಕ್ಷೇತ್ರದ ಅಂತಿಮ ಮತದಾರ ಪಟ್ಟಿಯಲ್ಲಿ ಜಿಲ್ಲೆಯ 1299 ಪುರುಷ ಶಿಕ್ಷಕರು ಹಾಗೂ 1272 ಮಹಿಳಾ ಶಿಕ್ಷಕರು ಸೇರಿ ಒಟ್ಟು 2571 ಶಿಕ್ಷಕರು ಪಟ್ಟಿಯಲ್ಲಿದ್ದಾರೆ.
ಅಂತಿಮ ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿ, ನಿಯೋಜಿತ ಅಧಿಕಾರಿಗಳ ಕಚೇರಿ,ಪುರಸಭೆ, ನಗರಸಭೆ ಕಚೇರಿಗಳು ಶಿಕ್ಷಣ ಸಂಸ್ಥೆಗಳು ಮತ್ತು ಪ್ರಮುಖ ಸರ್ಕಾರಿ ಕಚೇರಿಗಳಲ್ಲಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.