ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆಯಾಗಿದ್ದು, ಹತ್ಯೆ ಶಂಕೆ (Murder (Suspected) ವ್ಯಕ್ತವಾಗಿದೆ.
ಮೃತನನ್ನು ಒರಿಸ್ಸಾ ಮೂಲದ ಸುಮಂತ್ (23 ವರ್ಷ) ಎಂದು ಗುರುತಿಸಲಾಗಿದೆ.
ಬುಧವಾರ ರಾತ್ರಿ ಹೊಸವರ್ಷಾಚರಣೆ ಸಂಭ್ರಮಾಚರಣೆ ವೇಳೆ ಗಲಾಟೆ ನಡೆದು, ಮದ್ಯದ ಮತ್ತಿನಲ್ಲಿ ಹತ್ಯೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.