Government should verify citizenship of illegal residents: R. Ashoka

ಅಕ್ರಮ ನಿವಾಸಿಗಳ ಪೌರತ್ವವನ್ನು ಸರ್ಕಾರ ಪರಿಶೀಲಿಸಬೇಕು: ಆರ್‌.ಅಶೋಕ ಆಗ್ರಹ

ಬೆಂಗಳೂರು; ಕೋಗಿಲು ಕ್ರಾಸ್‌ನ ಫಕೀರ್‌ ಬಡಾವಣೆ ಕ್ರಮೇಣ ಸ್ಲೀಪರ್‌ ಸೆಲ್‌ಗಳ ಕೇಂದ್ರವಾಗುವ ಅಪಾಯವಿದೆ. ಆದ್ದರಿಂದ ಅಕ್ರಮ ನಿವಾಸಿಗಳ ಪೌರತ್ವವನ್ನು ಸರ್ಕಾರ ಪರಿಶೀಲಿಸಬೇಕು. ಇದನ್ನು ಎನ್‌ಐಎ ತನಿಖೆಗೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಆಗ್ರಹಿಸಿದರು.

ಕೋಗಿಲು ಕ್ರಾಸ್‌ನಲ್ಲಿ ಒತ್ತುವರಿ ತೆರವು ಮಾಡಿದ ವಿವಾದಿತ ಸ್ಥಳಕ್ಕೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಮುಖಂಡರೊಂದಿಗೆ ಭೇಟಿ ನೀಡಿದರು. ಸ್ಥಳದಲ್ಲೇ ಇದ್ದ ನಿವಾಸಿಗಳ ಜೊತೆ ಮಾತನಾಡಿದ ಅವರು, ಗುರುತಿನ ಚೀಟಿ ಹಾಗೂ ಇತರೆ ದಾಖಲೆಗಳನ್ನು ಕೇಳಿ ಪರಿಶೀಲಿಸಿದರು.

ಭೇಟಿ ವೇಳೆ ಸ್ಥಳೀಯ ಮಹಿಳೆಯೊಂದಿಗೆ ಮಾತುಕತೆ ನಡೆಸಿದ ಅವರು, ಇಲ್ಲಿ ಎಷ್ಟು ವರ್ಷಗಳಿಂದ ವಾಸಿಸುತ್ತಿದ್ದೀರಿ, ಕರೆತಂದವರು ಯಾರು, ನಿವೇಶನ ಮಂಜೂರು ಮಾಡಲಾಗಿದೆಯೇ ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮಹಿಳೆ, ಕಳೆದ 25 ವರ್ಷಗಳಿಂದ ಇಲ್ಲಿ ವಾಸವಿದ್ದೇವೆ ಎಂದು ತಿಳಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕ ಆರ್‌.ಅಶೋಕ, ಗೂಗಲ್‌ ನಕ್ಷೆಯಲ್ಲಿ 1 ವರ್ಷದ ಹಿಂದೆ ಮನೆಗಳು ಇರಲಿಲ್ಲ. ಯಾರ ಬಳಿಯೂ ಗುರುತಿನ ಚೀಟಿ ಇಲ್ಲ ಎಂದು ಹೇಳಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನೆ ಕಟ್ಟಿಕೊಡುವುದೇ ಮಾನದಂಡವಾದರೆ ಇನ್ನು ಮುಂದೆ ಸರ್ಕಾರ ಯಾವ ಮುಖ ಇಟ್ಟುಕೊಂಡು ಒತ್ತುವರಿ ತೆರವು ಮಾಡಲಿದೆ? ಬೆಂಗಳೂರಿನಲ್ಲಿ 40 ಕಡೆ 150-200 ಎಕರೆ ಒತ್ತುವರಿ ತೆರವು ಮಾಡಲಾಗಿದೆ.

ಇವರೆಲ್ಲರಿಗೂ ಮನೆ ನಿರ್ಮಿಸಿಕೊಡಲು ಸಾಧ್ಯವೇ? ಒತ್ತುವರಿ ತೆರವಾದ ಕಡೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಭೇಟಿ ನೀಡಿಲ್ಲ. ಇಲ್ಲಿ ಅವರ ಕುಕ್ಕರ್‌ ಬ್ರದರ್‌ ಇರುವುದರಿಂದ ಕರು ಹಸುವಿನ ಬಳಿ ಓಡಿ ಬರುವಂತೆ ಬಂದಿದ್ದಾರೆ. ಬಾಂಗ್ಲಾದಿಂದ ಪಶ್ಚಿಮ ಬಂಗಾಳ ಹೊತ್ತಿ ಉರಿಯುತ್ತಿದೆ. ಮುಂದೆ ಕರ್ನಾಟಕವೂ ಹೀಗೆಯೇ ಆಗಲಿದೆ. ಆದ್ದರಿಂದ ಮೊದಲು ಇಲ್ಲಿನ ಜನರ ಪೌರತ್ವ ಪರಿಶೀಲಿಸಬೇಕು.

ಜೊತೆಗೆ ಎನ್‌ಐಎ ತನಿಖೆಗೆ ನೀಡಬೇಕು. ಅಧಿಕಾರಿಗಳ ಮೇಲೆ ಯಾವುದೇ ಒತ್ತಡ ಹಾಕದೆ ಈ ಕೆಲಸ ಮಾಡಬೇಕು. ಅಧಿಕಾರಿಗಳು ಅಕ್ರಮ ಮಾಡಿದರೆ ಭವಿಷ್ಯದಲ್ಲಿ ಅವರೇ ಸಿಕ್ಕಿಹಾಕಿಕೊಳ್ಳುತ್ತಾರೆ. ನಕಲಿ ದಾಖಲೆ ಸೃಷ್ಟಿಸಿದರೆ ತನಿಖೆ ಎದುರಿಸಬೇಕಾಗುತ್ತದೆ ಎಂಬುದನ್ನು ಅಧಿಕಾರಿಗಳು ನೆನಪಲ್ಲಿಟ್ಟುಕೊಳ್ಳಬೇಕು ಎಂದು ಎಚ್ಚರಿಕೆ ನೀಡಿದರು.

ಸಿಎಂ ಸಿದ್ದರಾಮಯ್ಯ ನೇತೃತ್ವದ ಟೋಪಿ ಸರ್ಕಾರ ಕನ್ನಡಿಗರಿಗೆ ಟೋಪಿ ಹಾಕಿ ಕರ್ನಾಟಕದ ವಿವಿಧೆಡೆ ಮಿನಿ ಬಾಂಗ್ಲಾದೇಶಗಳನ್ನು ಸೃಷ್ಟಿಸಿದೆ. ಕರ್ನಾಟಕ ಈಗ ಮಿನಿ ಬಾಂಗ್ಲಾಗಳ ಹಬ್‌ ಆಗುತ್ತಿದೆ. ನಾನು ಇಲ್ಲಿಗೆ ಭೇಟಿ ನೀಡುವ ಮುಂಚೆಯೇ ಬಿಜೆಪಿ ಮುಖಂಡರು ಇಲ್ಲಿ ಸರ್ವೆ ಮಾಡಿದ್ದಾರೆ.

ನಾನು ಇಲ್ಲಿ ಮಾತನಾಡಿಸಿದಾಗ, ಆಂಧ್ರಪ್ರದೇಶದ ಪೆನುಗೊಂಡದಿಂದ ಬಂದವರು ಎಂದು ತಿಳಿದುಬಂದಿದೆ. ಒಬ್ಬ ಮಹಿಳೆ 26 ವರ್ಷದಿಂದ ಇಲ್ಲಿಯೇ ಇದ್ದೇವೆ ಎನ್ನುತ್ತಾರೆ. ಅಂದರೆ ಆಕೆ ಎರಡು ವರ್ಷದ ಮಗುವಿದ್ದಾಗ ಹೇಗೆ ನಡೆದುಕೊಂಡು ಇಲ್ಲಿಗೆ ಬಂದಳು ಎಂಬ ಪ್ರಶ್ನೆ ಮೂಡುತ್ತದೆ. ಇದು ನಿಜಕ್ಕೂ ಸಾಧ್ಯವೇ? ಎಂದು ಪ್ರಶ್ನೆ ಮಾಡಿದರು.

ಇಲ್ಲಿ ಎಲ್ಲೂ ವ್ಯವಸಾಯ ಮಾಡುವ ಜಾಗವಿಲ್ಲ. ಆದರೂ ಅಷ್ಟು ವರ್ಷದ ಹಿಂದೆ ಇಷ್ಟೊಂದು ಜನರು ಇಲ್ಲಿಗೇಕೆ ಬಂದು ಎಂದು ತಿಳಿದಿಲ್ಲ. ನಾವು ಬರುವ ಮುನ್ನವೇ ವಾಸೀಮ್‌ ಎಂಬ ಮುಖಂಡ ನಿವಾಸಿಗಳನ್ನು ಹೊರಕ್ಕೆ ಕಳುಹಿಸಿದ್ದಾರೆ.

ಸುತ್ತ ಇರುವ ಟಿಪ್ಪು ನಗರ ಮೊದಲಾದ ಪ್ರದೇಶಗಳಿಂದ ಕನ್ನಡ ಮಾತನಾಡುವವರನ್ನು ಇಲ್ಲಿಗೆ ಕರೆಸಲಾಗಿದೆ. ಸಚಿವ ಜಮೀರ್‌ ಅಹ್ಮದ್‌ ಆಪ್ತ ಕಾರ್ಯದರ್ಶಿ ಸರ್ಫರಾಜ್‌ ಖಾನ್‌ ಅಧಿಕಾರಿಗಳಿಗೆ ಬೆದರಿಕೆ ಹಾಕಿ, ಇಲ್ಲಿ ಇರುವವರೆಲ್ಲರೂ ಸ್ಥಳೀಯರು ಎಂದು ದಾಖಲು ಮಾಡಬೇಕು, ಯಾರನ್ನೂ ಪ್ರಶ್ನೆ ಮಾಡಬಾರದು ಎಂದು ಸೂಚಿಸಿದ್ದಾರೆ ಎಂದರು.

ಇಲ್ಲಿ 160 ನಿವಾಸಿಗಳಿದ್ದರು ಎಂದು ಮಾಧ್ಯಮಗಳಲ್ಲೂ ಬಂದಿದೆ. ಈಗ ಅಧಿಕಾರಿಯನ್ನು ಕೇಳಿದರೆ 280 ಜನರಿದ್ದಾರೆ ಎನ್ನುತ್ತಿದ್ದಾರೆ. ಇನ್ನೂ ಜನಸಂಖ್ಯೆ 400 ಆಗಬಹುದು ಎನ್ನುತ್ತಿದ್ದಾರೆ. ಇಷ್ಟು ಜನರಿಗೆ ಆಶ್ರಯ ನೀಡುವ ಕೆಲಸವನ್ನು ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್‌ ಅಹ್ಮದ್‌ ಮಾಡಿದ್ದಾರೆ.

ಒಂದೇ ವರ್ಷದ ಹಿಂದಿನ ಗೂಗಲ್‌ ಮ್ಯಾಪ್‌ನಲ್ಲಿ ಎಲ್ಲ ಕಡೆ ಹಸಿರು ಇತ್ತು. ಈಗ ಎಲ್ಲವೂ ಬದಲಾಗಿದೆ. ಅಂದರೆ ಒಂದೇ ವರ್ಷದಲ್ಲಿ ಇವರೆಲ್ಲರೂ ಇಲ್ಲಿಗೆ ಬಂದಿದ್ದಾರೆ. ಬಾಂಗ್ಲಾದಲ್ಲಿ 20,000 ರೂ. ನೀಡಿದರೆ ಗುರುತಿನ ಚೀಟಿ ನೀಡುತ್ತಾರೆ.

ವಾಸೀಮ್‌ ಎಂಬ ರೌಡಿಶೀಟರ್‌ ಅವನ ಹೆಸರಲ್ಲೇ ಬಡಾವಣೆ ನಿರ್ಮಿಸಿದ್ದಾರೆ. ಈತ ಕಾಂಗ್ರೆಸ್‌ ಏಜೆಂಟ್‌ ಆಗಿ ಕೆಲಸ ಮಾಡುತ್ತಿದ್ದಾನೆ ಎಂದರು.

ಅಕ್ರಮ ವಿದ್ಯುತ್‌ ಸಂಪರ್ಕ

ರಾಜ್ಯದಲ್ಲಿ 4 ಲಕ್ಷ ಜನರು ಮನೆಯಲ್ಲಿ ವಿದ್ಯುತ್‌ ಸಂಪರ್ಕ ಇಲ್ಲದೆ ಬದುಕುತ್ತಿದ್ದಾರೆ. ಆದರೆ ಈ ಪ್ರದೇಶದಲ್ಲಿ ದುಬಾರಿ ಕೇಬಲ್‌ ಅಳವಡಿಸಿ ವಿದ್ಯುತ್‌ ಸಂಪರ್ಕ ನೀಡಲಾಗಿದೆ. ಈ ಸೌಲಭ್ಯ ಕಲ್ಪಿಸಿದ ಬೆಸ್ಕಾಂ ಅಧಿಕಾರಿಗಳಿಗೆ ನಾಚಿಕೆಯಾಗಬೇಕು.

ಇಲ್ಲಿ ಮೀಟರ್‌ ಕೂಡ ಅಳವಡಿಸಿಲ್ಲ. ಬೆಂಕಿ ಅನಾಹುತವಾಗಿ ಯಾರಾದರೂ ಸತ್ತರೆ, ಮತ್ತೆ ಪರಿಹಾರ ನೀಡುತ್ತಾರೆ. ಬೆಂಗಳೂರಿನಲ್ಲಿ ಪೊಲೀಸರೇ ಡ್ರಗ್‌ ಮಾಫಿಯಾದಲ್ಲಿ ಶಾಮೀಲಾಗಿದ್ದಾರೆ. 130 ಪೊಲೀಸರು ಅಮಾನತಾಗಿದ್ದಾರೆ.

ಇದು ಉಡ್ತಾ ಬೆಂಗಳೂರು ಆಗಿದೆ. ಇಂತಹ ಸನ್ನಿವೇಶ ಇರುವಾಗ ಪ್ರತಿ ಕಾಲೋನಿಯಲ್ಲಿ ಬಾಂಗ್ಲಾ ಹುಟ್ಟಿಕೊಳ್ಳುತ್ತಿದೆ. ಇವರಿಗೆ ಕೆಲಸ ಕೊಟ್ಟವರಾರು, ಊಟ ಎಲ್ಲಿಂದ ಮಾಡುತ್ತಾರೆ ಎಂದು ಅಧಿಕಾರಿಗಳಿಗೆ ಗೊತ್ತಿಲ್ಲ.

ಅನೇಕರ ಬಳಿಕ ಜನ್ಮ ಪ್ರಮಾಣಪತ್ರವೇ ಇಲ್ಲ. ಬೇರೆ ಸ್ಥಳದ ರೇಷನ್‌ ಕಾರ್ಡ್‌ ಇಟ್ಟುಕೊಂಡಿದ್ದಾರೆ. 600 ಕೋಟಿ ರೂ. ಮೌಲ್ಯದ ಜಮೀನನ್ನು ಇವರಿಗೆ ನೀಡಲಾಗಿದೆ ಎಂದರು.

ರಾಜ್ಯದಲ್ಲಿ ಪ್ರವಾಹದಿಂದ 13,999 ಮನೆಗಳಿಗೆ ಹಾನಿಯಾಗಿದ್ದು, ಅವರಿಗೆ ಮನೆ ನೀಡಿಲ್ಲ. ಅಂತಹವರು ನಮ್ಮದೇ ರೈತರ ಮಕ್ಕಳಾಗಿದ್ದು, ಇನ್ನೂ ನಿರಾಶ್ರಿತರಾಗಿದ್ದಾರೆ. 2,400 ಶಾಲೆಗಳ ಶೀಟ್‌ಗಳು ಹಾರಿಹೋಗಿದೆ.

ಅದನ್ನು ಇನ್ನೂ ಕಟ್ಟಿಕೊಟ್ಟಿಲ್ಲ. ಆದರೆ ಹೊಸ ವರ್ಷಕ್ಕೆ ಬಾಂಗ್ಲಾದವರಿಗೆ ಮನೆಯ ಕೊಡುಗೆ ನೀಡಿದ್ದಾರೆ. ಕನ್ನಡಿಗರಿಗೆ ಚಿಪ್ಪು ನೀಡಿ, ಬಾಂಗ್ಲಾದವರಿಗೆ ಕಪ್‌ ನೀಡಿದ್ದಾರೆ. ಇವೆಲ್ಲ ಸ್ಥಳಗಳು ಅಪರಾಧಿ ಚಟುವಟಿಕೆಗಳ ಕೇಂದ್ರವಾಗಲಿದೆ. ಸ್ಲೀಪರ್‌ ಸೆಲ್‌ಗಳು ಇಲ್ಲಿಗೆ ಬಂದು ನೆಲೆಸುತ್ತಾರೆ, ಭಯೋತ್ಪಾದಕರು ಬರುತ್ತಾರೆ ಎಂದರು.

ಕೇರಳ ಸಿಎಂ ಮಾಡಿದ ಒಂದೇ ಒಂದು ಟ್ವೀಟ್‌ಗೆ ಸರ್ಕಾರ ಕ್ರಮ ವಹಿಸಿದೆ. ಈ ವಿಚಾರ ಕೂಡಲೇ ಪಾಕಿಸ್ತಾನಕ್ಕೆ ತಲುಪಿದೆ ಎಂದರೆ ಇಲ್ಲಿನ ಭಯೋತ್ಪಾದಕರೇ ಆ ಮಾಹಿತಿ ರವಾನಿಸಿದ್ದಾರೆ ಎಂದರ್ಥ.

ಈಗ ಸಿಎಂ ಸಿದ್ದರಾಮಯ್ಯ ಕೇರಳ ಸಿಎಂ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ ಎಂದರೆ ಅವರು ಬುಲ್ಡೋಜರ್‌ ಸರ್ಕಾರ ಎಂದು ಒಪ್ಪಿಕೊಂಡಂತಾಗಿದೆ. ಕೇರಳ ಸಿಎಂ ಜೊತೆ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಕ್ಕೆ ಸಿದ್ದರಾಮಯ್ಯನವರು ನಾಚಿಕೆ ಪಡಬೇಕು ಎಂದರು.

ರಾಜಕೀಯ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

“ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು

[ccc_my_favorite_select_button post_id="119228"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸಾವರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ (Accident) ತಾಲೂಕಿನ ಮಾಕಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ.

[ccc_my_favorite_select_button post_id="119217"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!