ದೊಡ್ಡಬಳ್ಳಾಪುರ: ಇಲ್ಲಿನ ಶ್ರೀ ದೇವರಾಜ್ ಅರಸ್ ಅಂತಾರಾಷ್ಟ್ರೀಯ ವಸತಿ ಶಾಲೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ (Accident) ಸೈಕಲ್‌ನಲ್ಲಿ ತೆರಳುತ್ತಿದ್ದ ವೃದ್ಧ ಸಾವನಪ್ಪಿರುವ ಘಟನೆ ತಾಲೂಕಿನ ಗಂಡರಾಜಪುರ ಗೇಟ್ ಬಳಿ ಸಂಭವಿಸಿದೆ.
ಮೃತನನ್ನು ಗಂಡರಾಜಪುರದ ನಿವಾಸಿ ನಾರಾಯಣಸ್ವಾಮಿ (65 ವರ್ಷ) ಎಂದು ಗುರುತಿಸಲಾಗಿದೆ.
ಮೃತನಿ ಸೈಕಲ್‌ನಲ್ಲಿ ತೆರಳುವ ವೇಳೆ ಗಂಡರಾಜ ಪುರ ಗೇಟ್ ಬಳಿ ಮುದ್ದೇನಹಳ್ಳಿಗೆ ತೆರಳುತ್ತಿತ್ತು ಎನ್ನಲಾಗುತ್ತಿರುವ ಶ್ರೀ ದೇವರಾಜ್ ಅರಸ್ ಶಾಲೆಯ ಬಸ್ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ನಾರಾಯಣಸ್ವಾಮಿ ಅವರನ್ನು ಆಸ್ಪತ್ರೆಗೆ ಕರೆತರುವ ಮಾರ್ಗಮಧ್ಯದಲ್ಲಿ ಸಾವನಪ್ಪಿದ್ದಾರೆಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಕುರಿತಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ.