ಬೆಂಗಳೂರು: ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆ ಯ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರನ ಸಾವು ಸಂಭವಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಕರಣದ ತನಿಖೆಗೆ ಈಗಾಗಲೇ ಸೂಚನೆ ನೀಡಲಾಗಿದ್ದು, ಘಟನೆಯಲ್ಲಿ ಬಳಸಲಾದ ಗನ್ ಯಾರಿಗೆ ಸೇರಿದ್ದು ಎಂಬ ಬಗ್ಗೆಯೂ ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ.
ಸತೀಶ್ ರೆಡ್ಡಿಯವರು ಗಾಳಿಯಲ್ಲಿ ಗುಂಡು ಹಾರಿಸಲು ಹೋಗಿ ರಾಜಶೇಖರ ಅವರಿಗೆ ತಗುಲಿರಬಹುದು, ಆದ್ದರಿಂದ ಈ ಬಗ್ಗೆ ತನಿಖೆ ನಡೆಯಬೇಕಿದೆ ಎಂದರು.
ವಿಧಾನಸೌಧದಲ್ಲಿ ನಡೆದ ರಾಜ್ಯ ವನ್ಯ ಜೀವಿ ಮಂಡಳಿ ಸಭೆಯ ಮುಖ್ಯಾಂಶಗಳು…

ಮಾನವ- ವನ್ಯಜೀವಿ ಸಂಘರ್ಷದ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯದ ಪ್ರಾಣಿಗಳಿಗೆ ಸಫಾರಿಯಿಂದ ತೊಂದರೆಗಳಾಗುತ್ತಿದ್ದು, ಕಾಡಿನಿಂದ ಹೊರಗೆ ಬರುತ್ತಿವೆ ಎಂಬ ದೂರುಗಳು ಬಂದಿದ್ದವು.
ಈ ಕಾರಣದಿಂದ ಅರಣ್ಯ ಇಲಾಖೆಯಿಂದ ಸಫಾರಿ ನಿರ್ಬಂಧಿಸಿ ಆದೇಶ ಹೊರಡಿಸಲಾಗಿತ್ತು.
ಸಫಾರಿಯನ್ನು ಪುನಃ ಪ್ರಾರಂಭಿಸಲು
ಒತ್ತಾಯ ಬರುತ್ತಿರುವುದಾಗಿ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ಸಭೆಯಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತಂದರು.
ಸಫಾರಿ ನಿರ್ಬಂಧಿಸಿರುವ ಕಾರಣಕ್ಕೆ ಅದರ ಮೇಲೆ ಅವಲಂಬಿತರಾಗಿರುವ ಸ್ಥಳೀಯರೂ ಸಹ ಉದ್ಯೋಗದಿಂದ ವಂಚಿತರಾಗಿರುವುದಾಗಿ ತಿಳಿಸಿದರು.
ಇದನ್ನು ಆಲಿಸಿದ ಮುಖ್ಯಮಂತ್ರಿಗಳು ಸಫಾರಿಗೆ ಮತ್ತೆ ಅನುಮತಿ ನೀಡುವ ಹಾಗೂ ಅರಣ್ಯ ಪ್ರವಾಸೋದ್ಯಮದಿಂದ ಮತ್ತೆ ಸ್ಥಳೀಯರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಈ ನಿರ್ಣಯವನ್ನು ಪುನರ್ ಪರಿಶೀಲಿಸಲು ಪರಿಣಿತರನ್ನೊಳಗೊಂಡ
ತಾಂತ್ರಿಕ ಸಮಿತಿ ರಚಿಸಿ, ಅಭಿಪ್ರಾಯ ಪಡೆಯಲು ಸೂಚಿಸಿದರು.