ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ (Bashettihalli) ಬಳಿಯ ರೈಲ್ವೇ ಮೇಲ್ಸೇತುವೆ (Flyover) ಕಾಮಗಾರಿ ಹಿನ್ನೆಲೆಯಲ್ಲಿ, ಟ್ರಾಫಿಕ್ ಜಾಮ್ (Traffic jam) ಉಂಟಾಗಿ ವಾಹನ ಸವಾರರು ಪರದಾಡುವಂತಾಗಿದೆ.
ಕಳೆದ ಮೂರು ದಿನಗಳಿಂದ ಒಂದು ಬದಿಯಲ್ಲಿ ರಸ್ತೆ ಕಾಮಗಾರಿ ಆರಂಭಿಸಲಾಗಿದ್ದು, ಇಂದು ಒಂದು ಬದಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಸಂಜೆಯಿಂದ ಬೆಂಗಳೂರು-ಹಿಂದೂಪುರ ನಡುವಿನ ರಾಜ್ಯ ಹೆದ್ದರಿ ಸುಮಾರು 2 ಕಿಮೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.
ಸಂಜೆಯ ವೇಳೆ ವಾಹನ ದಟ್ಟಣೆ ಹೆಚ್ಚಾಗಿರುತ್ತದೆ. ಆದರೆ ಟೋಲ್ ಸಿಬ್ಬಂದಿಗಳು ಹಣ ಸಂಗ್ರಹಿಸುತ್ತಾರೆಯೇ ಹೊರತು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಯಾವುದೇ ಕ್ರಮಕೈಗೊಳ್ಳುತ್ತಿಲ್ಲವೆಂದು ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೀಗ ಬಂದ ಮಾಹಿತಿ ಅನ್ವಯ ಟ್ರಾಫಿಕ್ ಜಾಮ್ ಅಲ್ಪ ಮಟ್ಟಿಗೆ ತೆರವಾಗಿದೆ.