ದೊಡ್ಡಬಳ್ಳಾಪುರ: ಜೆಡಿಎಸ್ (JDS) ಹಿರಿಯ ಮುಖಂಡ ಹಾಗೂ ಟಿಎಪಿಎಂಸಿಎಸ್ ಮಾಜಿ ಉಪಾಧ್ಯಕ್ಷ ಕೆ.ಸಿ.ಲಕ್ಷ್ಮೀನಾರಾಯಣ (Kanchiganala Lakshminarayan) ಇಂದು (ಜ.03) ಶನಿವಾರ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು.
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.
ಮೃತರಿಗೆ ಪತ್ನಿ, ಪುತ್ರಿ ಇದ್ದಾರೆ.
ಮೃತರ ಅಂತ್ಯಕ್ರಿಯೆ ಭಾನುವಾರ ಕಂಚಿಗನಾಳ ಗ್ರಾಮದಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ.