This is a murderous government: R. Ashoka attacks

ಇದು ಕೊಲೆಗಡುಕ ಸರ್ಕಾರ: ಆರ್‌.ಅಶೋಕ ವಾಗ್ದಾಳಿ

ಬೆಂಗಳೂರು: ರಾಜೀವ್‌ ಗಾಂಧಿ ವಸತಿ ನಿಗಮದ ವಸತಿ ಯೋಜನೆಗಳಿಗೆ 65,000 ಜನರು ಅರ್ಜಿ ಹಾಕಿದ್ದಾರೆ. ಕೋಗಿಲು ಕ್ರಾಸ್‌ನ ಬಾಂಗ್ಲಾ ಜನರಿಗೆ ಮನೆ ನೀಡುವುದಾರೆ, ಮೊದಲು ಕನ್ನಡಿಗರಿಗೆ ಆದ್ಯತೆ ಮೇರೆಗೆ ಮನೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಆಗ್ರಹಿಸಿದರು.

ನಿಗಮಕ್ಕೆ ಭೇಟಿ ನೀಡಿ ಅಧಿಕಾರಿಗಳ ಜೊತೆ ಚರ್ಚಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜೀವ್‌ ಗಾಂಧಿ ವಸತಿ ನಿಗಮಕ್ಕೆ ರಾಜ್ಯದ ಸುಮಾರು 65 ಸಾವಿರ ಜನರು ಮನೆಗಾಗಿ ಅರ್ಜಿ ಹಾಕಿದ್ದಾರೆ. ನಿಗಮದಲ್ಲಿ ವಿವಿಧ ಯೋಜನೆಗಳಲ್ಲಿ ಸುಮಾರು 7,000 ಮನೆಗಳನ್ನು ನಿರ್ಮಿಸಲಾಗಿದೆ. ಇನ್ನೂ 10,000 ಮನೆಗಳು ನಿರ್ಮಾಣ ಹಂತದಲ್ಲಿದೆ. 80 ವರ್ಷದ ಮಹಿಳೆ ಪೂರ್ತಿ ಮೊತ್ತವನ್ನು ಪಾವತಿಸಿದ್ದು, ಅವರಿಗೆ ಇನ್ನೂ ಮನೆ ನೀಡಿಲ್ಲ.

ಕಳೆದ ನಾಲ್ಕು ತಿಂಗಳಿಂದ ಅವರನ್ನು ಅಲೆದಾಡಿಸುತ್ತಿದ್ದು, ಆ ಮನೆಗೆ ಇನ್ನೂ ಕುಡಿಯುವ ನೀರು ಹಾಗೂ ವಿದ್ಯುತ್‌ ಸಂಪರ್ಕ ಸಿಕ್ಕಿಲ್ಲ. ಇವರು ಬಾಡಿಗೆ ಮನೆಯಲ್ಲಿದ್ದು, ಆ ಮನೆಯಿಂದಲೂ ಹೊರಬರುವ ಆತಂಕದಲ್ಲಿದ್ದಾರೆ. ಇದೇ ರೀತಿ ಸಾವಿರಾರು ಕನ್ನಡಿಗರು ಅರ್ಜಿ ಹಾಕಿ ಮನೆಗಾಗಿ ಕಾಯುತ್ತಿದ್ದಾರೆ. ಆದರೆ ಕಾಂಗ್ರೆಸ್‌ ಸರ್ಕಾರ ಬಾಂಗ್ಲಾ ನಿವಾಸಿಗಳಿಗೆ ಕೋಗಿಲು ಕ್ರಾಸ್‌ನಲ್ಲಿ ಮನೆ ನೀಡುತ್ತಿದೆ.

ಇದನ್ನು ವಿರೋಧಿಸಿ ಜನವರಿ 5 ರಂದು ಪ್ರತಿಭಟನೆ ಮಾಡುತ್ತೇವೆ. ಜೊತೆಗೆ ಕಾನೂನು ಹೋರಾಟ ಮಾಡುತ್ತೇವೆ. ಮುಂದಿನ ಸದನದಲ್ಲೂ ಹೋರಾಟ ಮಾಡುತ್ತೇವೆ ಎಂದರು.

ಕೋಗಿಲು ಕ್ರಾಸ್‌ನಲ್ಲಿ ಏಕಾಏಕಿ ಮನೆ ನೀಡಲು ಸಾಧ್ಯವೇ ಇಲ್ಲ. ಜನರು ಅರ್ಜಿ ಸಲ್ಲಿಸಿ, ಶಾಸಕರ ಸಮಿತಿಯಿಂದ ಪರಿಶೀಲನೆಯಾಗಿ ಆಯ್ಕೆಯಾಗಬೇಕು. ಚಿಕ್ಕಬಾಣಾವರದಲ್ಲಿ ಒಂದು ಯೋಜನೆ ಇನ್ನೂ ಐದಾರು ವರ್ಷಗಳಿಂದ ಪ್ರಗತಿಯಲ್ಲಿದೆ. ಆದರೆ ಸರ್ಕಾರ ಕೋಗಿಲು ಕ್ರಾಸ್‌ನಲ್ಲಿ ಮಾತ್ರ ನಿಯಮ ಗಾಳಿಗೆ ತೂರಿ ಮನೆ ನೀಡಲು ಮುಂದಾಗಿದೆ.

ಅಲ್ಲಿ ಇರುವವರು ಇದೇ ದೇಶದವರೇ ಎಂಬುದಕ್ಕೆ ಯಾವುದೇ ಆಧಾರ ಇಲ್ಲ. ಅವರ ಮೂಲಕ ಯಾವುದು, ಅವರ ಅಪ್ಪ ಅಮ್ಮ ಎಲ್ಲಿದ್ದಾರೆ ಎಂಬುದಕ್ಕೆ ಮಾಹಿತಿ ಇಲ್ಲ. ಇದು ಸಿಎಂ ಪಿಣರಾಯಿ ವಿಜಯನ್‌ ಹಾಗೂ ವೇಣುಗೋಪಾಲ್‌ ನಡುವೆ ನಡೆಯುತ್ತಿರುವ ಸಂಘರ್ಷ. ಇದರಿಂದ ಕನ್ನಡಿಗರು ಬಲಿಯಾಗಿದ್ದಾರೆ.

13,000 ಜನರು ಪ್ರವಾಹದಿಂದ ಮನೆ ಕಳೆದುಕೊಂಡಿದ್ದರೂ ಅವರಿಗೆ ಮನೆ ನೀಡಿಲ್ಲ. ಉತ್ತರ ಕರ್ನಾಟಕದ ಭಾಗದ ಶಾಸಕರು ಇಲ್ಲಿಗೆ ಬಂದು ಪ್ರವಾಹ ಸಂತ್ರಸ್ತರ ಪರ ಮನೆ ಕೇಳುತ್ತಿದ್ದಾರೆ. ಅಧಿಕಾರಿಗಳು ನಿಯಮ ಮೀರಿದರೆ ಅವರೇ ಬಲಿಪಶುವಾಗುತ್ತಾರೆ. ಆದ್ದರಿಂದ ಮನೆ ನೀಡುವಾಗ ವಂಶವೃಕ್ಷವನ್ನು ಕಡ್ಡಾಯ ಮಾಡಬೇಕಿದೆ ಎಂದರು.

ಕೋಗಿಲು ಕ್ರಾಸ್‌ಗೆ ಬಿಜೆಪಿ ನಿಯೋಗ ಬರಲಿದೆ ಎಂದಾಕ್ಷಣ ಕನ್ನಡಿಗರನ್ನು ಕರೆತಂದು ಇರಿಸಿದ್ದಾರೆ. 16 ಸಾವಿರ ರೂ. ಗೆ ಆಧಾರ್‌ ಕಾರ್ಡ್‌ ಮಾಡಿಸಿಕೊಡುವ ಗ್ಯಾಂಗ್‌ ಇದೆ. ಮತಕ್ಕಾಗಿ ಇಂತಹವರನ್ನು ಇಲ್ಲಿ ನೆಲೆಸುವಂತೆ ಮಾಡಿದ್ದಾರೆ.

ಬಾಂಗ್ಲಾದೇಶದ 16 ಕೋಟಿ ಜನರಲ್ಲಿ 3 ಕೋಟಿ ಜನರು ಕಾಣೆಯಾಗಿದ್ದು, 20-25 ಲಕ್ಷ ಜನರು ಕರ್ನಾಟಕಕ್ಕೆ ಬಂದಿದ್ದಾರೆ. ಸರ್ಕಾರ 6-8 ಲಕ್ಷ ಬಾಂಗ್ಲಾದವರನ್ನು ಗುರುತಿಸಿದೆ. ಅವರಿಗೆ ಮನೆ ಕೊಡಲೇಬೇಕೆಂಬ ಹಠ ಯಾಕೆ? ಮನೆ ಕೊಡುವುದಾದರೆ ಕನ್ನಡಿಗರಿಗೆ ಆದ್ಯತೆ ನೀಡಬೇಕು. ಕೋಗಿಲು ಕ್ರಾಸ್‌ನಲ್ಲಿ ಪಶ್ಚಿಮ ಬಂಗಾಳದ ಕಾರು ಇರುವುದು ಕಂಡುಬಂದಿದೆ ಎಂದರು.

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಬಾಂಗ್ಲಾ ನುಸುಳುಕೋರರನ್ನು ಬಿಡುತ್ತಿದ್ದಾರೆ. ಅದನ್ನು ತಡೆಯಲು ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಾಗುತ್ತಿದೆ. ಆದರೆ ಅದನ್ನು ಕಾಂಗ್ರೆಸ್‌ ವಿರೋಧಿಸುತ್ತಿದೆ ಎಂದರು.

ಪೊಲೀಸರ ಮೇಲೆ ಒತ್ತಡ

ಇದು ಕೊಲೆಗಡುಕ ಸರ್ಕಾರ. ಕಾಂಗ್ರೆಸ್‌ನಿಂದ ಕಾನೂನು ವ್ಯವಸ್ಥೆ ಹದಗೆಟ್ಟಿದ್ದು, ಪೊಲೀಸ್‌ ಅಧಿಕಾರಿಗಳಿಗೆ ಮಾನಸಿಕ ಒತ್ತಡ ಹೆಚ್ಚಿದೆ. ಪೊಲೀಸ್‌ ಅಧಿಕಾರಿಗಳು ಹಣ ಕೊಟ್ಟರೆ ಮಾತ್ರ ಪೋಸ್ಟಿಂಗ್‌ ಕೊಡುತ್ತಾರೆ.

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿಯವರ ಮೇಲೆ ಗುಂಡಿನ ದಾಳಿಯ ಪ್ರಯತ್ನ ನಡೆದಿದೆ. ಅದಕ್ಕೆ ಬಲಿಪಶುವಾಗಿ ಎಸ್‌ಪಿ ಯನ್ನು ಅಮಾನತು ಮಾಡಲಾಗಿದೆ.

ಶಾಸಕ ಭರತ್‌ ರೆಡ್ಡಿ ಗನ್‌ ಮ್ಯಾನ್‌ ಗುಂಡು ಹಾರಿಸಿದ್ದು ಎಂದಿದ್ದಕ್ಕೆ ಎಸ್‌ಪಿ ಮೇಲೆ ಕ್ರಮ ವಹಿಸಿದ್ದಾರೆ. ಈಗ ಆ ಎಸ್‌ಪಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾರೆ. ಗನ್‌ ಮಾತ್ರ ವಶಕ್ಕೆ ಪಡೆದು ಆರೋಪಿಗಳು ರಾಜ್ಯ ಬಿಟ್ಟು ಓಡಲು ಅವಕಾಶ ಮಾಡಿಕೊಟ್ಟಿದ್ದಾರೆ. ಓಡಿ ಹೋದ ನಂತರ ಎಫ್‌ಐಆರ್‌ ಮಾಡುತ್ತಾರೆ. ಸರ್ಕಾರದ ಒತ್ತಡದಿಂದ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

12 ಪೊಲೀಸ್‌ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ಗಂಟೆಯಲ್ಲಿ ಎಸ್‌ಪಿಯನ್ನು ಅಮಾನತು ಮಾಡಿದ್ದಾರೆ ಎಂದರೆ, ಎರಡೂವರೆ ವರ್ಷದಿಂದ ಸಚಿವರಾಗಿರುವ ಗೃಹ ಸಚಿವರು, ಜಮೀರ್‌ ಅಹ್ಮದ್‌ ಅವರನ್ನು ಅಮಾನತು ಮಾಡಬೇಕಿತ್ತು, ಇದು ನೇಣಿನ ಭಾಗ್ಯದ ಸರ್ಕಾರ ಎಂದರು.

ರಾಜಕೀಯ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಂಜಾರ ಸಮಾಜವನ್ನೇ ಟಾರ್ಗೆಟ್ ಮಾಡುತ್ತಿರುವುದು ಎಲ್ಲರಿಗು ಗೊತ್ತಿರುವ ವಿಚಾರ; ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="119679"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಖಾಸಗಿ ಕಾರ್ಯಕ್ರಮದಲ್ಲಿ ನಡೆಸಲಾಗುತ್ತಿದ್ದ ರಘು ದೀಕ್ಷಿತ್ ( Raghu Dixit) ಅವರ ಸಂಗೀತ ಸಂಜೆ ವೇಳೆ ಕಿಡಿಗೇಡಿಗಳ ಉಪಟಳದಿಂದ ಬಾಲಕ ಕಾಲು ಮುರಿದಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119672"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!