Weavers' organizations call for Doddaballapura bandh on January 5th..!

ಕೆರಳಿದ ನೇಕಾರ ಸಂಘಟನೆಗಳು.. ಜ.5ರ‌ಂದು ದೊಡ್ಡಬಳ್ಳಾಪುರ ಬಂದ್ಗೆ ಕರೆ..!

ದೊಡ್ಡಬಳ್ಳಾಪುರ: ಸೂರತ್ನಿಂದ ಇಲ್ಲಿಗೆ ಬರುತ್ತಿರುವ ಸೀರೆಗಳ ಹಾವಳಿಯಿಂದ ನೇಕಾರಿಕೆ ಉದ್ಯಮದಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಸರಿಪಡಿಸುವಂತೆ ಆಗ್ರಹಿಸಿ ಜ.5 ರಂದು ವಿವಿಧ ನೇಕಾರ ಸಂಘಟನೆಗಳ (weavers’ organizations) ವತಿಯಿಂದ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸ್ವಯಂ ಪ್ರೇರಿತ ಬಂದ್ಗೆ ಕರೆ ನೀಡಲಾಗಿದೆ ಎಂದು ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಪಿ.ಎ.ವೆಂಕಟೇಶ್ ಹೇಳಿದರು.

ಅವರು ನಗರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ, ನಗರದಲ್ಲಿ ಸುಮಾರು 25 ಸಾವಿರ ವಿದ್ಯುತ್ ಮಗ್ಗಗಳು ಇವೆ. ಇವುಗಳನ್ನು ಅವಲಂಭಿಸಿ ಸಾವಿರಾರು ಕುಟುಂಬಗಳು ಹಾಗೂ ಹಲವಾರು ಉದ್ಯಮಗಳು ಅವಲಂಭಿಸಿವೆ. ಆದರೆ ಈಗ ಸೂರತ್ನಿಂದ ಕಡಿಮೆ ಬೆಲೆಗೆ ಸೀರೆಗಳನ್ನು ತಂದು ಇಲ್ಲಿ ಮಾರಾಟ ಮಾಡುತ್ತಿರುವುದರಿಂದ ಇಲ್ಲಿ ನೇಯಲಾಗುತ್ತಿರುವ ಸೀರೆಗಳನ್ನು ಖರೀದಿಸುವವರೆ ಇಲ್ಲದಂತಾಗಿದೆ.

ಈ ಬಿಕ್ಕಟಿನ ಕುರಿತು ಸಂಸತ್ ಸದಸ್ಯರು, ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು, ಜವಳಿ ಸಚಿವರು ಹಾಗೂ ಮುಖ್ಯಮಂತ್ರಿಗಳವರೆಗೂ ಮನವಿಗಳನ್ನು ಸಲ್ಲಿಸಲಾಗಿದೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿದ್ಯುತ್ ಮಗ್ಗಗಳ ನೇಕಾರರ ಸಂಕಷ್ಟದ ಬಗ್ಗೆ ಸ್ಥಳೀಯ ಶಾಸಕರಿಂದ ಮೊದಲುಗೊಂಡು ಯಾರೂ ಸಹ ಮಾತನಾಡಿಲ್ಲ.

ಈ ಹಿನ್ನೆಲೆಯಲ್ಲಿ ವಿದ್ಯುತ್ ಮಗ್ಗಗಳ ನೇಕಾರಿಕೆ ಉಳಿವಿಗಾಗಿ ಆಗ್ರಹಿ ಜ.5 ರಂದು ದೊಡ್ಡಬಳ್ಳಾಪುರ ಸ್ವಯಂ ಪ್ರೇರಿತ ಬಂದ್ಗೆ ಕರೆ ನೀಡಲಾಗಿದೆ. ಈಗಾಗಲೇ ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆ, ವಿವಿಧ ರಾಜಕೀಯ ಪಕ್ಷಗಳು, ವರ್ತಕರು, ಕನ್ನಡಪರ ಸಂಘಟನೆ ಸೇರಿದಂತೆ ಹಲವಾರು ಮುಖಂಡರೊಂದಿಗೆ ಸಭೆಗಳನ್ನು ನಡೆಸಲಾಗಿದ್ದು ಎಲ್ಲರು ಬಂದ್ಗೆ ಬೆಂಬಲ ಸೂಚಿಸಿದ್ದಾರೆ.

ಇದಲ್ಲದೆ ನೇಕಾರಿಕೆ ಉದ್ಯಮ ಇರುವ ರಾಜ್ಯದ ವಿವಿಧ ತಾಲ್ಲೂಕುಗಳಲ್ಲಿನ ನೇಕಾರರು ಸಹ ಜ.5 ರಂದು ನಮ್ಮ ಬಂದ್ ಬೆಂಬಲಿಸಿ ಹಾಗೂ ನೇಕಾರಿಕೆ ಬಿಕ್ಕಟ್ಟಿನ ಪರಿಹಾರಕ್ಕೆ ರಾಜ್ಯ ಸರ್ಕಾರ ಮುಂದಾಗುವಂತೆ ಆಗ್ರಹಿಸಿ ಅಲ್ಲಿನ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿಗಳನ್ನು ಸಲ್ಲಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ದೊಡ್ಡಬಳ್ಳಾಪುರ ಟೆಕ್ಸ್ಟೈಲ್ಸ್ ವೀವರ್ಸ್ ಸೋಸಿಯೇಷನ್ ಅಧ್ಯಕ್ಷ ನರಸಿಂಹಮೂರ್ತಿ, ಹಾಗೂ ನೇಕಾರರ ಹೋರಾಟ ಸಮಿತಿ,ಕೂಲಿ ನೇಕಾರರ ಹಿತರಕ್ಷಣಾ ಸಮಿತಿ ಸೇರಿದಂತೆ ವಿವಿಧ ನೇಕಾರ ಸಂಘಟನೆಗಳ ಮುಖಂಡರಾದ ದ್ರುವಕುಮಾರ್, ಚಂದ್ರಮೋಹನ್, ಅಶ್ವತ್ಥ್, ಮುನಿರಾಜು, ಲಕ್ಷ್ಮೀನಾರಾಯಣ್, ಸುರೇಶ್,ರಘು, ಮಂಜುನಾಥ್ ಇದ್ದರು.

ರಾಜಕೀಯ

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ಜೆಡಿಎಸ್ (JDS) ಮುಖಂಡರ ಒಳಜಗಳ ರಾಜಘಟ್ಟ ಆಂಜನೇಯಸ್ವಾಮಿ ದೇವಸ್ಥಾನದ ಸಮೀಪದಲ್ಲಿನ ಅರಳಿಕಟ್ಟೆಯಲ್ಲಿ ಬೀದಿಗೆ ಬಂದಿದೆ.

[ccc_my_favorite_select_button post_id="118288"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!