ದೊಡ್ಡಬಳ್ಳಾಪುರ: ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.
ಘಟನೆಯಲ್ಲಿ ಮೆಣಸಿ ಕಾಲೋನಿ ನಿವಾಸಿ ಮಂಜುಳಮ್ಮ (55 ವರ್ಷ) ಎನ್ನುವವರಿಗೆ ತೀವ್ರವಾದ ಗಾಯಗಳಾಗಿವೆ.
ಇಂದು (ಜ.04)ರ 3.30 ರ ಸುಮಾರಿಗೆ ಮಂಜುಳಮ್ಮ ರಸ್ತೆ ದಾಟುವ ವೇಳೆ ದಾಬಸ್ ಪೇಟೆ ಕಡೆಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದೆ.
ಘಟನೆಯಲ್ಲಿ ಮಂಜುಳಮ್ಮ ಅವರ ಕೈ ಮುರಿದಿದೆ ಎನ್ನಲಾಗಿದ್ದು, ತಲೆಗೆ ತೀವ್ರವಾದ ಗಾಯಗಳಾಗಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.