Bellary Riot: Minister H.D. revealed explosive information. Kumaraswamy

ಬಳ್ಳಾರಿ ಗಲಭೆ: ಸ್ಪೋಟಕ ಮಾಹಿತಿ ಬಹಿರಂಗಪಡಿಸಿದ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿ ಆಪ್ತನ ಗನ್ ಮ್ಯಾನ್ ನಡೆಸಿದ ಗುಂಡಿನ ದಾಳಿಯ ಕುರಿತು ಸ್ಪೋಟಕ ಮಾಹಿತಿಯನ್ನು ಬಹಿರಂಗ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ಗುಂಡಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಕಾನೂನುಬಾಹಿರವಾಗಿ ಎರಡು ಬಾರಿ ನಡೆಸಲಾಗಿದೆ ಎಂದಿದ್ದಾರೆ.

ಹೀಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯ ಮಾಡಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವರು, ಕಾರ್ಯಕರ್ತ ರಾಜಶೇಖರ್ ಹತ್ಯೆ ಒಂದೆಡೆ, ಆದರೆ ಸ್ವಪಕ್ಷದ ಕಾರ್ಯಕರ್ತನ ಕೊಲೆಯನ್ನು ಮುಚ್ಚಿಹಾಕಲು ಕಾಂಗ್ರೆಸ್ ಸರಕಾರ ಇನ್ನಿಲ್ಲದ ಪ್ರಯತ್ನ ನಡೆಸಿದೆ. ಇದು ನಾಚುಗೇಡು. ಅದಕ್ಕಾಗಿ ಆ ನತದೃಷ್ಟ ಕಾರ್ಯಕರ್ತನ ಮೃತದೇಹವನ್ನು ಎರಡು ಬಾರಿ ಮರಣೋತ್ತರ ಪರೀಕ್ಷೆಗೆ ಒಳಡಿಸಲಾಗಿದೆ ಎಂದು ಗಂಭೀರ ಆರೋಪ ಮಾಡಿದರು.

ಮೊದಲ ಮರಣೋತ್ತರ ಪರೀಕ್ಷೆಯಲ್ಲಿ ಏನು ಫಲಿತಾಂಶ ಹೊರಬಂತು? ಎರಡನೇ ಮರಣೋತ್ತರ ಪರೀಕ್ಷೆಯಲ್ಲಿ ಏನು ಮಾಹಿತಿ ಇದೆ? ಎಂಬುದನ್ನು ಸರಕಾರ ಹೇಳಬೇಕು. ನನಗೆ ಬಂದಿರುವ ಮಾಹಿತಿ ಪ್ರಕಾರ ರಾಜಶೇಖರ ಅವರ ದೇಹವನ್ನು ಎರಡು ಸಲ ಮರಣೋತ್ತರ ಪರೀಕ್ಷೆ ಮಾಡಲಾಗಿದೆ ಎಂದು ಅವರು ಹೇಳಿದರು.

2ನೇ ಬಾರಿ ಪೋಸ್ಟ್ ಮಾರ್ಟಮ್ ಯಾಕೆ ಮಾಡಿದಿರಿ? 2ನೇ ಬಾರಿ ಪೋಸ್ಟ್ ಮಾರ್ಟಮ್ ಮಾಡಲಿಕ್ಕೆ ಯಾರು ಒತ್ತಡ ಹೇರಿದರು? ಮತ್ತೊಂದು ಬಾರಿ ಪರೀಕ್ಷೆಗೆ ಯಾರು ಆದೇಶ ಮಾಡಿದರು? ಮೊದಲ ಮರಣೋತ್ತರ ಪರೀಕ್ಷೆಯಲ್ಲಿ ತಮಗೆ ಅನುಕೂಲಕರ ವರದಿ ಬರಲಿಲ್ಲ ಎಂದು ಅಲ್ಲಿಗೆ ‘ಸೂರ್ಯನ ಬೆಳಕು’ ಏನಾದರೂ ಬಿದ್ದಿತ್ತಾ? ಎಂದು ಸಚಿವ ಕುಮಾರಸ್ವಾಮಿ ಅವರು ತೀಕ್ಷ್ಣವಾಗಿ ಪ್ರಶ್ನಿಸಿದರು.

ನೀವು ಸತ್ಯವಂತರಲ್ಲವೇ? ದಿನನಿತ್ಯ ಜಾಹೀರಾತುಗಳಲ್ಲಿ ‘ಸತ್ಯಮೆಯ ಜಯತೇ’ ಎಂದು ಕೊಚ್ಚಿಕೊಳ್ಳುತ್ತೀರಿ. ಈಗ ಸತ್ಯ ಹೇಳಿ. ರಾಜ್ಯದ ಜನತೆಗೆ ಸತ್ಯ ಏನೆಂದು ತಿಳಿಸಬೇಕಲ್ಲವೇ? ಎರಡನೇ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಏನಿದೆ ಎಂಬುದನ್ನು ಹೇಳಿ? ಮುಖ್ಯಮಂತ್ರಿಗಳೇ ಜನತೆಗೆ ಸತ್ಯವನ್ನು ಹೇಳಿ ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ಮೊದಲ ಮರಣೋತ್ತರ ಪರೀಕ್ಷೆಯಲ್ಲಿ ದೇಹದಲ್ಲಿ ಸಣ್ಣಪುಟ್ಟ ಚೂರು ಪತ್ತೆಯಾಯಿತು ಎಂಬ ಮಾಹಿತಿ ಇದೆ. ಎರಡನೇ ಶವ ಪರೀಕ್ಷೆಯನ್ನು ಮಾಡಿಸುವ ಮೂಲಕ ಸ್ವತಃ ಜನಾರ್ದನ ರೆಡ್ಡಿ ಅವರೇ ಗುಂಡು ಹೊಡೆದಿದ್ದು ಆರೋಪ ಮಾಡಿ ಕಥೆ ಅವರನ್ನು ಫಿಕ್ಸ್ ಮಾಡಲು ಷಡ್ಯಂತ್ರ್ಯ ಮಾಡಿದ್ದಾರೆ. ಆದರೆ, ಎರಡನೇ ಮರಣೋತ್ತರ ಪರೀಕ್ಷೆ ಈ ಸರಕಾರಕ್ಕೆ, ಸೂರ್ಯನ ಬೆಳಕು ಬೀಳಿಸಲು ಹೋದವರಿಗೆ ಉಲ್ಟಾ ಹೊಡೆದಿದೆ ಎಂದು ಕೇಂದ್ರ ಸಚಿವರು ಹೇಳಿದರು.

ಸರಕಾರದ ತನಿಖೆ ನಿರುಪಯುಕ್ತ

ಗಾಳಿಯಲ್ಲಿ ಗುಂಡು ಹಾರಿಸಿದ್ದರಿಂದ ಹೀಗೆ ಹೀಗೆ ಆಗಿದೆ ಎಂದು ಮುಖ್ಯಮಂತ್ರಿ ಹೇಳುತ್ತಾರೆ. ನಮ್ಮ ಪಕ್ಷ ಶಾಸಕ ಭರತ್ ರೆಡ್ಡಿ ಪರ ನಿಲ್ಲುತ್ತದೆ ಎಂದು ಉಪ ಮುಖ್ಯಮಂತ್ರಿ ಹೇಳುತ್ತಾರೆ.

ಸತೀಶ್‌ರೆಡ್ಡಿ ಗನ್ ಮ್ಯಾನ್ ಗನ್‌ನಿಂದ ಫೈಯರ್ ಆಗಿದೆ ಅಂತ ಸ್ವತಃ ಸಿಎಂ ಅವರೇ ಹೇಳಿದ್ದಾರೆ. ಆದರೆ ಗೃಹ ಸಚಿವರು ಆತನ ಬಂಧನಕ್ಕೆ ಆದೇಶ ಮಾಡದೇ ಹೇಳಿಕೆಗಳಲ್ಲಿ ಕಾಲಹರಣ ಮಾಡುತ್ತಿದ್ದಾರೆ. ಹೀಗಿರುವಾಗ ಈ ಸರ್ಕಾರ ಯಾವ ರೀತಿ ತನಿಖೆ ಮಾಡುತ್ತದೆ? ಇವರ ತನಿಖೆಯಿಂದ ಸತ್ಯಾಂಶ ಹೊರಕ್ಕೆ ಬರಲು ಸಾಧ್ಯವೇ ಎಂದು ಸಚಿವರು ಪ್ರಶ್ನಿಸಿದರು.

ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿ ಬಳ್ಳಾರಿ ಶೂಟೌಟ್ ಪ್ರಕರಣಕ್ಕೆ ಸಮಾಧಿ ಕಟ್ಟಲು ಹೊರಟಿದ್ದಾರೆ ಎಂದು ನೇರ ಆರೋಪ ಮಾಡಿದ ಕುಮಾರಸ್ವಾಮಿ ಅವರು; ಜನಾರ್ದನ ರೆಡ್ಡಿ ಅವರು ಭದ್ರತೆ ಕೊಡಿ ಎಂದು ಕೇಂದ್ರದ ಗೃಹ ಸಚಿವರಿಗೆ ಪತ್ರ ಬರೆದರೆ ಅದನ್ನು ಈ ಡಿಸಿಎಂ ಲೇವಡಿ ಮಾಡುತ್ತಾರೆ. ಬೇಕಾದರೆ ಅಮೆರಿಕ, ಇರಾನ್‌‌ನಿಂದ ಭದ್ರತೆ ಮಾಡಿಸಿಕೊಳ್ಳಲಿ ಅಥವಾ ನೂರು ಜನ ಬಿಜೆಪಿ ಕಾರ್ಯಕರ್ತರನ್ನು ಭದ್ರತೆಗೆ ನಿಯೋಜಿಸಿಕೊಳ್ಳಲಿ ಎಂದು ಹೇಳಿದ್ದಾರೆ. ಉಪ ಮುಖ್ಯಮಂತ್ರಿ ಬಾಯಲ್ಲಿ ಬರುವ ಮಾತೇ ಇದು ಎಂದು ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.

ಹೆಚ್ಚುವರಿ ಎಸ್ಪಿ, ಐಜಿ ಅಮಾನತು ಏಕಿಲ್ಲ?

ಕರ್ತವ್ಯ ಲೋಪ ಎಂದು ಎಸ್‌ಪಿ ಅವರನ್ನು ಅಮಾನತು ಮಾಡಿದ್ದಾರೆ. ಹಾಗಾದರೆ, ಹೆಚ್ಚುವರಿ ಎಸ್ಪಿ, ಐಜಿ ಅವರು ಕೂಡ ಕರ್ತವ್ಯ ಲೋಪ ಎಸಗಿದ್ದಾರೆ. ಚಿನ್ನಸ್ವಾಮಿಯಲ್ಲಿ ಕ್ರೀಡಾಂಗಣದ ಮುಂದೆ ಕಾಲ್ತುಳಿತ ಪ್ರಕರಣ ಸಂಭವಿಸಿದಾಗ ಹಲವಾರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದೀರಿ. ಈಗ ಬಳ್ಳಾರಿಯಲ್ಲಿ ಕೇವಲ ಎಸ್‌ಪಿ ಮೇಲೆ ಮಾತ್ರ ಕ್ರಮ ಯಾಕೆ ತೆಗೆದುಕೊಂಡಿದ್ದೀರಿ. ಅನೇಕ ವರ್ಷಗಳಿಂದ ಅಲ್ಲಿಯೇ ಬೇರು ಬಿಟ್ಟುಕೊಂಡಿರುವ ಅಧಿಕಾರಿಗಳ ತಪ್ಪೇ ಇಲ್ಲವೇ ಎಂದು ಸಚಿವರು ಕಿಡಿಕಾರಿದರು.

ಗಾಲಿ ಜನಾರ್ದನ ರೆಡ್ಡಿ ಅವರು ಬಳ್ಳಾರಿಗೆ ಬಂದ ಮೇಲೆ ಗಲಾಟೆಗಳು ಆಗುತ್ತಿವೆ ಎಂದು ಉಪ ಮುಖ್ಯಮಂತ್ರಿ ಹೇಳಿದ್ದಾರೆ. ಅದಕ್ಕೆ ಗೃಹ ಸಚಿವ ಪರಮೇಶ್ವರ್ ಅವರು ಹಿಮ್ಮೇಳ ಹಾಡುತ್ತಿದ್ದಾರೆ.

ಜನಾರ್ಧನ ರೆಡ್ಡಿ ಅವರು ಸುಪ್ರೀಂ ಕೋರ್ಟ್ ಅನುಮತಿ ಪಡೆದು ಒಂದೂವರೆ ವರ್ಷದ ಹಿಂದೆ ಬಳ್ಳಾರಿಗೆ ಬಂದಿದ್ದಾರೆ. ಅವರು ಬಳ್ಳಾರಿಗೆ ಬಂದ ಮೇಲೆ ಎಷ್ಟು ಗಲಾಟೆ ಆಗಿದೆ? ಎಷ್ಟು ಪ್ರಕರಣಗಳು ದಾಖಲಾಗಿವೆ ಎಂಬ ಬಗ್ಗೆ ಮಾಹಿತಿ ಕೊಡಿ. ಆ ಬಗ್ಗೆ ಅಂಕಿ ಅಂಶಗಳನ್ನು ಕೊಡಿ. ನೀವೆಲ್ಲರೂ ಅಪರಾಧಿಯ ಪರ ನಿಂತಿರುವುದು ನಾಚಿಕೆಗೇಡಿನ ಸಂಗತಿ ಎಂದು ಸಚಿವ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಯೂಸ್ ಲೆಸ್ ಗೃಹ ಸಚಿವರು ರಾಜ್ಯದಲ್ಲಿ ಕೆಲಸ ಮಾಡ್ತಿದ್ದಾರೆ. ಅವರಿಂದ ಏನೂ ಆಗುವುದಿಲ್ಲ. ಗೃಹ ಇಲಾಖೆ ಸತ್ತಿದೆಯೋ ಬದುಕಿದೆಯೋ ಎಂಬುದು ಗೊತ್ತಿಲ್ಲ. ಬಳ್ಳಾರಿಗೆ ಅಷ್ಟು ಗನ್ ಗಳು ಎಲ್ಲಿಂದ, ಹೇಗೆ ಬಂದವು? ಅವೇನು ಪಾಕಿಸ್ತಾನದಿಂದ ಬಂದವಾ? ಇದಕ್ಕೆ ಡಿಕೆಶಿ ಉತ್ತರ ಕೊಡಲಿ. ಕೊಲೆಗೆಡುಕರಿಗೆ ಸರ್ಕಾರ ರಕ್ಷಣೆ ಕೊಡ್ತಿದೆ. ಇದು ಕೊಲೆಗಡುಕರಿಗಾಗಿ ಇರುವ ಸರ್ಕಾರ ಎಂದು ಅವರು ಕಿಡಿಕಾರಿದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಪಾಪದ ಕೊಡ ತುಂಬುತ್ತಿದೆ. ಕಾರ್ಯಕರ್ತನ ಹತ್ಯೆಗೆ ಕಾರಣನಾದ ವ್ಯಕ್ತಿಯ ರಕ್ಷಣೆಗೆ ಇಡೀ ಸರಕಾರ, ಕಾಂಗ್ರೆಸ್ ಪಕ್ಷ ನಿಂತಿದೆ. ಬಳ್ಳಾರಿವರೆಗೂ ಪಾದಯಾತ್ರೆ ಮಾಡಿ ಅದೇ ಜನರ ಬೆಂಬಲದಿಂದ ನೀವು ಅಧಿಕಾರಕ್ಕೆ ಬಂದವರು ಅಲ್ಲವೇ? ಅದೇ ಜನರೇ ನಿಮ್ಮನ್ನು ಸರ್ವನಾಶ ಮಾಡುತ್ತಾರೆ.

ಬ್ಯಾನರ್ ಗಲಾಟೆಯನ್ನೇ ಪ್ರತಿಷ್ಠೆಯ ವಿಚಾರವನ್ನಾಗಿ ಮಾಡಿಕೊಂಡ ಪರಿಣಾಮ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಹತ್ಯೆಯಾಗಿದೆ. ಈ ದುರ್ಘಟನೆಗೆ ಕಾರಣನಾದ ಶಾಸಕನ ಆಪ್ತ ಸತೀಶ್ ರೆಡ್ಡಿಯನ್ನು ಈವೆಗೆಗೂ ಯಾಕೆ ಬಂಧಿಸಿಲ್ಲ? ಅದರ ಬದಲು ರಾಜಾತಿಥ್ಯ ನೀಡಿ ಸರ್ಕಾರಿ ವೆಚ್ಚದಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದೀರಾ? ಎಂದು ಕೇಂದ್ರ ಸಚಿವರು ಕೇಳಿದರು.

ಆದಾಯ ತೆರಿಗೆ ಇಲಾಖೆ ಮಾಡುತ್ತಿದೆ?

ಮೃತ ಕಾರ್ಯಕರ್ತನ ಕುಟುಂಬಕ್ಕೆ ಪರಿಹಾರ ನೀಡಿದ್ದೀರಿ, ಸರಿ. ಆದರೆ, ಯಾವ ಖಾತೆಯಿಂದ ಆ ಹಣವನ್ನು ನೀಡಿದ್ದೀರಿ? ಅದಕ್ಕೆ ಆದಾಯ ತೆರಿಗೆ ಲೆಕ್ಕ ಇದೆಯೇ? ಚೀಲದಲ್ಲಿ ತುಂಬಿಕೊಂಡು ಕೊಟ್ಟರಲ್ಲ, ಆ ಹಣ ಯಾರದು? ಅದು ಎಲ್ಲಿಂದ ಬಂತು? 25 ಲಕ್ಷ ರೂಪಾಯಿ ಸರ್ಕಾರದ ಹಣವೇ ಇಲ್ಲವೇ ಖಾಸಗಿ ಹಣವೇ ಎಂಬುದು ಗೊತ್ತಾಗಬೇಕಲ್ಲವೇ? ಆದಾಯ ತೆರಿಗೆ ಇಲಾಖೆ ಏನು ಮಾಡುತ್ತಿದೆ ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಎಂ. ಕೃಷ್ಣಾರೆಡ್ಡಿ, ವಿಧಾನ ಪರಿಷತ್ ಸದಸ್ಯ ಜವರಾಯಿ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಹೆಚ್.ಎಂ. ರಮೇಶ್ ಗೌಡ, ಚೌಡರೆಡ್ಡಿ ತೂಪಲ್ಲಿ, ಕೆ.ಟಿ. ಶ್ರೀಕಂಠೇಗೌಡ, ಜೆಡಿಎಸ್ ರಾಜ್ಯ ಮಹಿಳಾ ವಿಭಾಗದ ಅಧ್ಯಕ್ಷೆ ರಶ್ಮಿ ರಾಮೇಗೌಡ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

ಸಿದ್ದರಾಮಯ್ಯ ರಾಜ್ಯದ ಕಾಂಗ್ರೆಸ್ ನ ಕೊನೆ ಸಿಎಂ

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ನಾಶವಾಗಿದೆ. ಕರ್ನಾಟಕದಲ್ಲಿ ಜಂಗಲ್ ರಾಜ್ ಶುರುವಾಗಿದೆ. ಉತ್ತಮ ಆಡಳಿತ ಎನ್ನುವುದು ಎಲ್ಲಿದೆ? ಅಧಿಕಾರಿಗಳನ್ನ ಗುಲಾಮರ ರೀತಿ ಈ ಸರ್ಕಾರ ನಡೆಸಿಕೊಳ್ತಿದೆ‌ ಎಂದು ಕಿಡಿಕಾರಿದ ಕೇಂದ್ರ ಸಚಿವರು; ಭರತ್ ರೆಡ್ಡಿ ಪರ ಡಿ.ಕೆ. ಶಿವಕುಮಾರ್ ಮಾತಾಡ್ತಾರೆ. ಯಾಕೆಂದರೆ, ಅವರಿಗೆ ಸಿಎಂ ಆಗುವಾಗ ಒಂದು ಓಟ್ ಮಿಸ್ ಆಗಬಾರದು ಎಂದು ಅವರ ಪರವಾಗಿ ಬ್ಯಾಟ್ ಬೀಸುತ್ತಿದ್ದಾರೆ ಎಂದು ಹೇಳಿದರು.

ರಾಜಕೀಯ

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು

“ಮನರೇಗಾ ಯೋಜನೆ ಹಾಗೂ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ (Prahlad Joshi) ಅವರು ಬಹಿರಂಗ ಚರ್ಚೆಗೆ ಬರಲಿ. ಆ ಮೂಲಕ ಜನರಿಗೆ ಈ ವಿಚಾರವಾಗಿ ಜಾಗೃತಿ

[ccc_my_favorite_select_button post_id="118281"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!