ದೊಡ್ಡಬಳ್ಳಾಪುರ: ಸೂರತ್ನಿಂದ ದೊಡ್ಡಬಳ್ಳಾಪುರಕ್ಕೆ ಬರುತ್ತಿರುವ ಸೀರೆಗಳ ಹಾವಳಿಯಿಂದ ನೇಕಾರಿಕೆ ಉದ್ಯಮದಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಸರಿಪಡಿಸುವಂತೆ ಆಗ್ರಹಿಸಿ ಇಂದು (ಜ.5) ರಂದು ವಿವಿಧ ನೇಕಾರ ಸಂಘಟನೆಗಳ (weavers’ organizations) ವತಿಯಿಂದ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸ್ವಯಂ ಪ್ರೇರಿತ ಬಂದ್ಗೆ (Doddaballapura Bandh) ಕರೆ ನೀಡಲಾಗಿದೆ.
ಈ ಹಿನ್ನೆಲೆಯಲ್ಲಿ ವಿವಿಧ ನೇಕಾರ ಸಂಘಟನೆಗಳ ಮುಖಂಡರು, ಬೈಕ್ ಜಾಥಾ ಮೂಲಕ ಅಂಗಡಿ ಅಂಗಡಿಗಳಿಗೆ ತೆರಳಿ ಸಂಕಷ್ಟದಲ್ಲಿ ನೇಕಾರರ ನೇರವಾಗಿ ನಡೆಸುತ್ತಿರುವ ಬಂದ್‌ಗೆ ಬೆಂಬಲ ಕೋರಿದರು.
ಈ ವೇಳೆ ಪೊಲೀಸರು ಹಾಗೂ ಸಂಘಟನೆಗಳ ಮುಖಂಡರ ಜೊತೆ ಮಾತಿನ ಚಕಮಕಿ ನಡೆಯುತು.
ಇನ್ನೂ ಕೆಲವಡೆ ಅಂಗಡಿ ಮುಂಗಟ್ಟುಗಳು ತೆರಯಾಲಾಗಿದ್ದು, ಮತ್ತೆ ಕೆಲವರು ಸ್ವಯಂ ಪ್ರೇರಿತರಾಗಿ ಅಂಗಡಿಗಳನ್ನು ಮುಚ್ಚಿ ಬಂದ್ಗೆ ಬೆಂಬಲ ನೀಡಿದ್ದಾರೆ.
ಶಾಲೆ-ಕಾಲೇಜು ಹಾಗೂ ವಾಹನ ಸಂಚಾರ ಯಥಾ ಸ್ಥಿತಿಯಲ್ಲಿದೆ.
ಬಳಿಕ ಸಿದ್ದಲಿಂಗಯ್ಯ ವೃತ್ತದ ಬಳಿ ಬೃಹತ್ ಸಮಾವೇಶ ನಡೆಸುತ್ತಿದ್ದು, ಬಳಿಕ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿಗಳನ್ನು ಸಲ್ಲಿಸಲಿದ್ದಾರೆ.
