The country's first runway cleaning vehicle; Minister M.B. Patila hands over it in Doddaballapur

ದೇಶದ ಮೊದಲ ರನ್ ವೇ ಕ್ಲೀನಿಂಗ್ ವೆಹಿಕಲ್; ದೊಡ್ಡಬಳ್ಳಾಪುರದಲ್ಲಿ ಸಚಿವ ಎಂ.ಬಿ.ಪಾಟೀಲ ಹಸ್ತಾಂತರ

ದೊಡ್ಡಬಳ್ಳಾಪುರ: ಎಂಜಿನಿಯರಿಂಗ್ ನಾವೀನ್ಯತೆ ಮತ್ತು ಅಧಿಕ ಮೌಲ್ಯದ ಮೂಲಸೌಕರ್ಯ ಉಪಕರಣಗಳ ತಯಾರಿಕೆಯಲ್ಲಿ ತೊಡಗಿರುವ ಬೆಂಗಳೂರು ಮೂಲದ ಆನ್ ಲಾನ್ ಟೆಕ್ನಾಲಜಿ ಸಲ್ಯೂಷನ್ಸ್ ಲಿಮಿಟೆಡ್ ಅಭಿವೃದ್ಧಿಪಡಿಸಿರುವ ವಿಮಾನ ನಿಲ್ದಾಣ ರನ್ ವೇ ಸ್ವಚ್ಛತಾ ವಾಹನವನ್ನು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ (M.B. Patila);ಅವರು ಸೋಮವಾರ ನೋಯ್ಡಾ ಇಂಟರ್ ನ್ಯಾಷನಲ್ ಏರ್ ಪೋರ್ಟ್ ಲಿಮಿಟೆಡ್ ಗೆ (ಎನ್.ಐ.ಎ.ಎಲ್) ಹಸ್ತಾಂತರಿಸಿದರು.

ಭಾರತದಲ್ಲಿ ಮೊದಲ ಬಾರಿಗೆ ದೇಶೀಯವಾಗಿ ತಯಾರಿಕೆಯಾದ ರನ್ ವೇ ಸ್ವಚ್ಛತಾ ವಾಹನ ಇದಾಗಿದೆ.

ದೇಶದ ಮೊದಲ ರನ್ ವೇ ಕ್ಲೀನಿಂಗ್ ವೆಹಿಕಲ್; ದೊಡ್ಡಬಳ್ಳಾಪುರದಲ್ಲಿ ಸಚಿವ ಎಂ.ಬಿ.ಪಾಟೀಲ ಹಸ್ತಾಂತರ

ಭಾರತದ ಸರ್ಕಾರದ ‘ಮೇಕ್ ಇನ್ ಇಂಡಿಯಾ’ ಉಪಕ್ರಮದಡಿ ಸ್ವಿಟ್ಜರ್ ಲೆಂಡ್ ನ ಮೆಸರ್ಸ್ ಬುಕರ್ ಮುನಿಸಿಪಲ್ ಸಹಯೋಗದಲ್ಲಿ ದೊಡ್ಡಬಳ್ಳಾಪುರದ ಆದಿನಾರಾಯಣ ಹೊಸಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿರುವ ಘಟಕದಲ್ಲಿ ಜೋಡಣೆಗೊಂಡು ತಯಾರಾಗಿರುವ ಈ ಮಾದರಿಯ ಎರಡು ವಾಹನಗಳ ಕೀಲಿಕೈಗಳನ್ನು ನೋಯ್ಡಾ ವಿಮಾನ ನಿಲ್ದಾಣದ ಪ್ರತಿನಿಧಿ ಪ್ರದೀಪ್ ರಾಣಾ ಅವರಿಗೆ ನೀಡಿದರು.

ವಿಮಾನದ ಟಯರ್ ಗಳಿಗೆ ಅಪಾಯಕಾರಿಯಾಗಬಹುದಾದ ಮೊಳೆಗಳು ಹಾಗೂ ಚೂಪಾದ ಲೋಹದ ತುಣುಕುಗಳನ್ನು ರನ್ ವೇ ಮೇಲಿಂದ ತೆರವುಗೊಳಿಸುವ ಕಾರ್ಯವನ್ನು ಈ ವಾಹನ ಮಾಡಲಿದೆ.

ದೂಳನ್ನೂ ಹೀರಿಕೊಳ್ಳಲಿದೆ. ಜೊತೆಗೆ, ಮುಖ್ಯವಾಗಿ ವಿಮಾನಗಳು ಇಳಿಯುವಾಗ ರನ್ ವೇಯಲ್ಲಿ ಜಾರುವ ಸಾಧ್ಯತೆ ತಂದೊಡ್ಡಬಹುದಾದ ಪಾಚಿಯನ್ನು ತೆಗೆದುಹಾಕುವ ಕಾರ್ಯವನ್ನು ಇದು ನಿರ್ವಹಿಸಲಿದೆ.

ನಗರದ ರಸ್ತೆಗಳನ್ನು ಸ್ವಚ್ಛ ಮಾಡುವ ಸ್ವೀಪಿಂಗ್ ಮಿಷಿನ್ ವಾಹನಗಳ ತಯಾರಿಕೆಗೂ ಗಮನ ಕೇಂದ್ರೀಕರಿಸಿರುವ ಆನ್ ಲಾನ್ ನಂತಹ ಕಂಪನಿಗಳು ನಮ್ಮ ಪೂರೈಕೆ ಸರಪಳಿಯ ಬುನಾದಿಯಾಗಿವೆ.

ಆನ್ ಲಾನ್ ಕಂಪನಿಯು ಸರ್ಕಾರದ ನೀತಿಗಳು ಹಾಗೂ ಕಾರ್ಯಪರಿಸರವನ್ನು ಬಳಸಿಕೊಂಡು ಈಗ ತಯಾರಿಸಿರುವ ವಾಹನಕ್ಕೆ ರಫ್ತು ಮಾರುಕಟ್ಟೆಗಳನ್ನು ಶೋಧಿಸಿಕೊಳ್ಳಬೇಕು.

ನಮ್ಮ ಕೈಗಾರಿಕಾ ನೀತಿಯು (2025-30) ಗುರಿ ನಿರ್ದೇಶಿತ ಬೆಂಬಲ ಹಾಗೂ ಗುಣಮಟ್ಟ ಪ್ರಮಾಣಪತ್ರ ಪ್ರೋತ್ಸಾಹಕ ಕ್ರಮಗಳ ಮೂಲಕ ಆನ್ ಲಾನ್ ನಂತಹ ಕಂಪನಿಗಳಿಗೆ ಉತ್ತೇಜನ ನೀಡುತ್ತದೆ ಎಂದರು.

ಕಾರ್ಯಕ್ರಮದ ನಂತರದ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು ಫಾಕ್ಸ್ ಕಾನ್ ಕಂಪನಿಯು ಸದ್ಯ 30,000 ಜನರಿಗೆ ಉದ್ಯೋಗ ನೀಡಿದ್ದು, ಇದರಲ್ಲಿ ಶೇ 80ರಷ್ಟು ಮಂದಿ ಮಹಿಳೆಯರೇ ಇರುವುದು ಸಂತಸದ ಸಂಗತಿ.

ಇದೇ ರೀತಿ ಮುಂದಿನ ದಿನಗಳಲ್ಲಿ ಇನ್ನೂ 20 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ. ಚೀನಾ ಮತ್ತು ವಿಯೆಟ್ನಾಂ ರೀತಿ ತಯಾರಿಕಾ ವಲಯದಲ್ಲಿ ಮುಂಚೂಣಿಗೆ ತರುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ನಂತರದ ಸ್ಥಳೀಯ ಉದ್ಯಮಿಗಳ ಜತೆಗೂ ಸಚಿವರು ಮಾತನಾಡಿದರು. ಕೆಲವರು ತಮ್ಮ ಉದ್ಯಮ ವಿಸ್ತರಿಸಲು ಭೂಮಿ ಕೇಳುತ್ತಿದ್ದು, ಇದನ್ನು ಲಭ್ಯವಾಗಿಸಲಾಗುವುದು ಎಂದು ಭರವಸೆ ನೀಡಿದರು.

ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಉನ್ನಿಕೃಷ್ಣನ್ ನಾಯರ್ ಪಿ.ಎಂ ಮಾತನಾಡಿದರು.

ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಲೆಕ್ಕಪರಿಶೋಧಕ ಜಿ.ಜಿ.ಪಾಟೀಲ, ನೋಯ್ದಾ ವಿಮಾನ ನಿಲ್ದಾಣದ ಲೀಡ್ ಗ್ರೌಂಡ್ ವಿನೋದ್ ಮತ್ತಿತರರು ಈ ಸಂದರ್ಭದಲ್ಲಿ ಇದ್ದರು.

ರಾಜಕೀಯ

ಆಪರೇಷನ್ ಕಮಲ ಆತಂಕ; ಬೆಂಗಳೂರಿಗೆ ಶಾಸಕರು..! ಡಿ.ಕೆ. ಶಿವಕುಮಾರ್‌ಗೆ ಮತ್ತೊಮ್ಮೆ ಟಾಸ್ಕ್

ಆಪರೇಷನ್ ಕಮಲ ಆತಂಕ; ಬೆಂಗಳೂರಿಗೆ ಶಾಸಕರು..! ಡಿ.ಕೆ. ಶಿವಕುಮಾರ್‌ಗೆ ಮತ್ತೊಮ್ಮೆ ಟಾಸ್ಕ್

ಒಂದೆಡೆ ಯುದ್ಧದ ಪರಿಣಾಮ ದೇಶಾದ್ಯಂತ ಗ್ಯಾಸ್ ಸಿಲಿಂಡರ್ ಅಭಾವ ಉಂಟಾಗಿ ಜನ ಸಂಕಷ್ಟದಲ್ಲಿದ್ದರೆ, ಬಿಜೆಪಿ (BJP) ಆಪರೇಷನ್ ಕಮಲ (Operation Lotus) ನಡೆಸಲು ಮುಂದಾಗಿದೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="120178"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!