ಬೆಂ.ಗ್ರಾ. ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರ ಸಮಸ್ಯೆ/ಕುಂದುಕೊರತೆಗಳ ಕುರಿತು ಚರ್ಚಿಸುವ ಕುರಿತಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಾಳೆ (ಜನವರಿ 07) ಬುಧವಾರ ಬೆಳಿಗ್ಗೆ 11:30 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ರೈತರ ಸಭೆ (Farmers’ meeting) ಆಯೋಜಿಸಲಾಗಿದೆ.
ಸಭೆಗೆ ಜಿಲ್ಲೆಯ ಎಲ್ಲಾ ರೈತ ಸಂಘಟನೆಗಳ ಅಧ್ಯಕ್ಷರು, ಸದಸ್ಯರು,ಮುಖಂಡರು,ರೈತ ಬಾಂಧವರು ಭಾಗವಹಿಸಲು ಜಿಲ್ಲಾಧಿಕಾರಿ ಎಬಿ ಬಸವರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.