ಬೆಂ.ಗ್ರಾ.ಜಿಲ್ಲೆ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಸಾಧನೆ ಯೋಜನೆಯಡಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ವಿಕಲಚೇತನ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅರ್ಹ ವಿಕಲಚೇತನರು ಆನ್‌ಲೈನ್ ನಲ್ಲಿ ಸೇವಾಸಿಂಧು ತಂತ್ರಾಂಶದ ಮೂಲಕ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ನೇರವಾಗಿಯು ಸಹ ವಿಕಲಚೇತನ ವ್ಯಕ್ತಿಗಳು (https: // sevasindhuservices.karnataka.gov.in) ಪೋರ್ಟಲ್‌ನಲ್ಲಿ 2026 ರ ಜನವರಿ 31 ರೊಳಗೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿ ನಿಯಮಾನುಸಾರ ಸೌಲಭ್ಯಗಳನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಡಳಿತ ಭವನದ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಚೇರಿ ಹಾಗೂ ವಿಕಲಚೇತನರ ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ: 08029787441 ಗೆ.
ಇಲ್ಲವೆ ಹತ್ತಿರದ ಗ್ರಾಮ ಪಂಚಾಯಿತಿ/ಪಟ್ಟಣ ಪಂಚಾಯಿತಿ/ ಪುರಸಭೆ/ ನಗರಸಭೆ/ತಾಲ್ಲೂಕು ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ/ನಗರ/ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸತೀಶ್ ಪಾಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.