Gavisiddeshwara Maharathotsava

ದಕ್ಷಿಣ ಭಾರತದ ಕುಂಭಮೇಳ: ಗವಿಸಿದ್ದೇಶ್ವರ ಮಹಾರಥೋತ್ಸವ

ಕೊಪ್ಪಳ: ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿಯ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ (Gavisiddeshwara Maharathotsava) ನಿಮಿತ್ತ ಸೋಮವಾರ ಸಂಜೆ ಗೋಧೂಳಿ ಸಮಯಕ್ಕೆ ಮಹಾರಥೋತ್ಸವವು ಯಶಸ್ವಿಯಾಗಿ ಜರುಗಿತು.

ಮೇಘಾಲಯ ರಾಜ್ಯಪಾಲ ಸಿ.ಎಚ್. ವಿಜಯಶಂಕರ್ ಶಂಕರ್ ರಥೋತ್ಸವಕ್ಕೆ ಚಾಲನೆ ನೀಡಿದರು.

ನಗರದ ಗವಿಮಠದ ಆವರಣದಲ್ಲಿ ವೈಜ್ಞಾನಿಕವಾಗಿ ಸಜ್ಜುಗೊಳಿಸಿದ್ದ ರಥಕ್ಕೆ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಪೂಜೆ ಸಲ್ಲಿಸಿದರು. ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಸಾಥ್ ನೀಡಿದರು.

ಬಳಿಕ ಸಾಗಿದ ರಥ ರಾಜ ಗಾಂಭೀರ್ಯದಿಂದ ಪಾದಗಟ್ಟಿ ತಲುಪಿ, ಮರಳಿ ಮೂಲಸ್ಥಾನ ತಲುಪುತ್ತಿದ್ದಂತೆ ಭಕ್ತರು ಚಪ್ಪಾಳೆ ತಟ್ಟಿ ಸಂಭ್ರಮಿಸಿದರು. ಗವಿಸಿದ್ದೇಶ್ವರರ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯ ಮೂಲಕ ಬಾಜಾ ಭಜಂತ್ರಿಯೊಂದಿಗೆ ಗವಿಮಠದ ಗರ್ಭಗುಡಿಯ ಮೇಲ್ಬಾಗದ ಗದ್ದುಗೆಯಿಂದ ಮೆರವಣಿಗೆಯ ಮೂಲಕ ತರಲಾಯಿತು.

ಬಳಿಕ ನಂದಿಗೋಲು, ಕಂಸಾಳೆ ವಾದ್ಯ ಸೇರಿ ವಿವಿಧ ಕಲಾತಂಡಗಳ ಪ್ರದರ್ಶನದೊಂದಿಗೆ ರಥ ಸಾಗುತ್ತಿದ್ದಂತೆಯೇ ಭಕ್ತರ ‘ಗವಿಸಿದ್ದೇಶ್ವರ ಮಹಾರಾಜಕೀ ಜೈ’ ಉದ್ಯೋಷ ಮುಗಿಲು ಮುಟ್ಟಿತು.

ಕೊಪ್ಪಳ, ರಾಯಚೂರು, ಬಳ್ಳಾರಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಯ ಲಕ್ಷಾಂತರ ಆಗಮಿಸಿದ್ದರು.

ಮೇಘಾಲಯ ರಾಜ್ಯಪಾಲ ಸಿ.ಎಚ್. ವಿಜಯಶಂಕರ್, ವಿ.ಸೋಮಣ್ಣ, ಸಂಸದರಾದ ಬಸವರಾಜ ಬೊಮ್ಮಾಯಿ, ಜಗದೀಶ ಶೆಟ್ಟರ್, ಶಾಸಕ ಗಾಲಿ ಜನಾರ್ದನ ರೆಡ್ಡಿ, ಗವಿಶ್ರೀ ಕಾರ್ಯ ಮತ್ತು ಗವಿಮಠದ ಪರಂಪರೆ ಹಾಡಿ ಹೊಗಳಿದರು.

ಕಾಗಿನೆಲೆಯ ಕನಕಗುರು ಪೀಠದ ನಿರಂಜನಾನಂದ ಪುರಿ ಸ್ವಾಮೀಜಿ, ಹುಬ್ಬಳ್ಳಿಯ ಮೂರು ಸಾವಿರ ಮಠದ ಗುರುಸಿದ್ದ ರಾಜಯೋಗಿಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಸಂಸದ ಕೆ.ರಾಜಶೇಖರ ಹಿಟ್ನಾಳ, ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ಬಸನಗೌಡ ತುರ್ವಿಹಾಳ, ಹಂಪನಗೌಡ ಬಾದರ್ಲಿ, ಮಹೇಶ ಟೆಂಗಿನಕಾಯಿ, ಎಂಎಲ್ಸಿಗಳಾದ ಹೇಮಲತಾ ನಾಯಕ, ಶಶೀಲ್ ನಮೋಶಿ, ಮಾಜಿ ಸಂಸದರಾದ ಸಂಗಣ್ಣ ಕರಡಿ, ಶಿವರಾಮೇಗೌಡ, ಮಾಜಿ ಶಾಸಕರಾದ ಪರಣ್ಣ ಮುನವಳ್ಳಿ, ಕೆ.ಶರಣಪ್ಪ ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಡಾ.ಬಸವರಾಜ ಕ್ಯಾವಟ‌ರ್ ಭಾಗವಹಿಸಿದ್ದರು.

ರಾಜಕೀಯ

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ

“ಬೆಂಗಳೂರಿನಲ್ಲಿರುವ ಹೆಚ್ಎಎಲ್, ಜಕ್ಕೂರು, ವಾಯುನೆಲೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಕಟ್ಟಡ ಎತ್ತರದ ಮಿತಿಯಿಂದ ಅಭಿವೃದ್ಧಿ ಕಾಮಗಾರಿಗೆ ತೊಡಕಾಗಿದ್ದು, ಈ ಮಿತಿಯ ಬಗ್ಗೆ ಪರಿಶೀಲನೆ ನಡೆಸುವಂತೆ ಕೇಂದ್ರ ನಾಗರೀಕ ವಿಮಾನಯಾನ ಸಚಿವರಿಗೆ ಮನವಿ

[ccc_my_favorite_select_button post_id="120305"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!